ಮೊದಲ ದಿನವೇ ಮಹತ್ವದ ನಿರ್ಧಾರ : ಧಾರ್ಮಿಕ-ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದ ಮಧ್ಯಪ್ರದೇಶದ ಸಿಎಂ

  ಭೋಪಾಲ್‌ : ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಮೋಹನ ಯಾದವ್ ಅವರು ಧಾರ್ಮಿಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮೂಲಗಳ ಪ್ರಕಾರ, ಅನಿಯಂತ್ರಿತ ಧ್ವನಿವರ್ಧಕಗಳ ಬಳಕೆಯನ್ನು ನಿಷೇಧಿಸಲಾಗಿದೆ. ನಿಯಮಿತ ಮತ್ತು ನಿಯಂತ್ರಿತ (ಅನುಮತಿಸಬಹುದಾದ ಡೆಸಿಬಲ್) ಬಳಕೆಗೆ ಯಾವುದೇ ನಿರ್ಬಂಧವಿಲ್ಲ. … Continued

ಮಧ್ಯಪ್ರದೇಶ ವಿಧಾನಸಭಾ ಚುನಾವಣೆ : ಸಿಎಂ ಶಿವರಾಜ್ ಸಿಂಗ್ ವಿರುದ್ಧ ‘ರಾಮಾಯಣ’ ನಟನನ್ನು ಕಣಕ್ಕಿಳಿಸಿದ ಕಾಂಗ್ರೆಸ್

ಭೋಪಾಲ್: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಪಕ್ಷವು ಜನಪ್ರಿಯ ನಟ ವಿಕ್ರಮ್ ಮಸ್ತಲ್ ಅವರನ್ನು ಕಣಕ್ಕಿಳಿಸಿದೆ. ಆನಂದ್ ಸಾಗರ್ ಅವರ 2008 ರ ದೂರದರ್ಶನ ಧಾರಾವಾಹಿ ರಾಮಾಯಣದಲ್ಲಿ ಹನುಮಾನ್ ಪಾತ್ರದ ಮೂಲಕ ಮಸ್ತಲ್ ಅವರು ಹೆಚ್ಚು ಹೆಸರುವಾಸಿಯಾಗಿದ್ದಾರೆ. ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣ ವಿಧಾನಸಭಾ ಚುನಾವಣೆಗೆ ಪಕ್ಷವು … Continued