ಸೇನಾಧಿಕಾರಿ ಸೋಫಿಯಾ ಕುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ : ಮಧ್ಯಪ್ರದೇಶ ಸಚಿವನ ವಿರುದ್ಧ ಎಫ್ಐಆರ್ ದಾಖಲಿಸಲು ಹೈಕೋರ್ಟ್ ಆದೇಶ

ಭೋಪಾಲ್‌ : ಪಾಕಿಸ್ತಾನ ವಿರುದ್ಧದ ಸೇನಾ ಕಾರ್ಯಾಚರಣೆ ‘ಆಪರೇಷನ್ ಸಿಂಧೂರʼದ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಕುರೇಷಿ ಅವರನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ಸಚಿವ ವಿಜಯ್ ಶಾ ನೀಡಿದ ವಿವಾದಾತ್ಮಕ ಹೇಳಿಕೆ ಸಂಬಂಧ ಮಧ್ಯಪ್ರದೇಶ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತವಾಗಿ ವಿಚಾರಣೆ ಆರಂಭಿಸಿದೆ. ನ್ಯಾಯಮೂರ್ತಿಗಳಾದ ಅತುಲ್ ಶ್ರೀಧರನ್ ಮತ್ತು … Continued

ಪಾಕಿಸ್ತಾನ ಪರ ಘೋಷಣೆ ಪ್ರಕರಣ | ರಾಷ್ಟ್ರಧ್ವಜಕ್ಕೆ 21 ಬಾರಿ ವಂದಿಸಿ ʼಭಾರತ್ ಮಾತಾ ಕಿ ಜೈʼ ಘೋಷಣೆ ಕೂಗಲು ಆದೇಶಿಸಿ ಜಾಮೀನು ನೀಡಿದ ಹೈಕೋರ್ಟ್

ಜಬಲ್ಪುರ : ‘ಪಾಕಿಸ್ತಾನ ಜಿಂದಾಬಾದ್ ಹಿಂದೂಸ್ತಾನ್ ಮುರ್ದಾಬಾದ್’ ಎಂದು ಘೋಷಣೆ ಕೂಗಿದ ಆರೋಪಿಗೆ ಮಧ್ಯಪ್ರದೇಶ ಹೈಕೋರ್ಟ್ ಪ್ರತಿ ತಿಂಗಳ ಮೊದಲ ಮತ್ತು ನಾಲ್ಕನೇ ಮಂಗಳವಾರ ಭೋಪಾಲ ಪೊಲೀಸ್ ಠಾಣೆಯಲ್ಲಿ ಹಾರಿಸುವ ರಾಷ್ಟ್ರಧ್ವಜಕ್ಕೆ 21 ಬಾರಿ ನಮಸ್ಕಾರ ಮಾಡಬೇಕು ಹಾಗೂ ಭಾರತ್ ಮಾತಾ ಕಿ ಜೈ” ಎಂದು ಘೋಷಣೆ ಕೂಗಬೇಕು ಎಂದು ಆದೇಶಿಸಿ ಜಾಮೀನು ಮಂಜೂರು ಮಾಡಿದೆ. … Continued

ಭೋಜಶಾಲಾ ಸಂಕೀರ್ಣ ನಿರ್ಮಾಣದಲ್ಲಿ ಹಿಂದಿನ ದೇಗುಲಗಳ ಸಾಮಗ್ರಿ ಬಳಕೆ: ಮಧ್ಯಪ್ರದೇಶ ಹೈಕೋರ್ಟ್‌ಗೆ ಎಎಸ್ಐ ಮಾಹಿತಿ

ಭೋಪಾಲ್‌ : ಹಳೆಯ ದೇಗುಲಗಳ ಸಾಮಗ್ರಿಗಳಿಂದ ಪ್ರಸ್ತುತ ಅಸ್ತಿತ್ವದಲ್ಲಿರುವ ಭೋಜಶಾಲಾ ಸಂಕೀರ್ಣ ನಿರ್ಮಾಣವಾಗಿದೆ ಎಂಬುದನ್ನು ತನ್ನ ತನಿಖೆ ಮತ್ತು ಅಧ್ಯಯನ ತಿಳಿಸುತ್ತದೆ ಎಂಬುದಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಧ್ಯಪ್ರದೇಶ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ ದೇಗುಲ ಮತ್ತು ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ … Continued

ಹಿಂದೂ- ಮುಸ್ಲಿಂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನಡಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್

ಭೋಪಾಲ್‌ : ಮುಸ್ಲಿಂ ಹುಡುಗ ಮತ್ತು ಹಿಂದೂ ಹುಡುಗಿಯ ನಡುವೆ ಮತಾಂತರವಾಗದೆ ವಿವಾಹವಾಗುವುದು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಕಾನೂನುಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ವಿಶೇಷ ವಿವಾಹ ಕಾಯಿದೆ- 1954ರ ಅಡಿ ಮದುವೆಯಾಗಲು ಮತ್ತು ವಿವಾಹ ನೋಂದಣಿ ಮಾಡಿಕೊಳ್ಳಲು ಪೊಲೀಸ್‌ ರಕ್ಷಣೆ ಬೇಕು ಎಂದು ಕೋರಿ ಅಂತರ್ಧರ್ಮೀಯ ಜೋಡಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಮಧ್ಯಪ್ರದೇಶ … Continued