ವೀಡಿಯೊ…| ಸೈಕಲ್ ಮೇಲಿದ್ದ 5 ವರ್ಷದ ಬಾಲಕನ ಮೇಲೆ ಓಡಿದ ಕಾರು ; ಪವಾಡ ಸದೃಶರೀತಿಯಲ್ಲಿ ಪಾರಾದ ಬಾಲಕ…!

ಸೈಕಲ್ ಮೇಲೆ ಕುಳಿತು ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕನೊಬ್ಬನಿಗೆ ಡಿಕ್ಕಿ ಹೊಡೆದ ಕಾರು ಆತನ ಮೇಲೆ ಹತ್ತಿ ಹೋದರೂ ಆತ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದು ಮಧ್ಯಪ್ರದೇಶದ ಬೇತುಲ್‌ ಎಂಬಲ್ಲಿ ನಡೆದಿದೆ. ಈ ಘಟನೆ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಬೇತುಲ್ ಜಿಲ್ಲೆಯ ಕೊತ್ವಾಲಿ ಪೊಲೀಸ್ … Continued

ಪೆರೋಲ್‌ ಮೇಲೆ ಜೈಲಿನಿಂದ ಹೊರಬಂದಿದ್ದ ಶಿಕ್ಷೆಗೆ ಗುರಿಯಾಗಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದ ಇಬ್ಬರು ವ್ಯಕ್ತಿಗಳು : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಗ್ವಾಲಿಯರ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಕೆನಡಾ ಮೂಲದ ಗ್ಯಾಂಗ್‌ಸ್ಟರ್‌ ಅರ್ಷದೀಪ್ ಸಿಂಗ್ ದಲ್ಲಾನ ಇಬ್ಬರು ಸಹಾಯಕರು 45 ವರ್ಷದ ವ್ಯಕ್ತಿಯನ್ನು ಗುಂಡಿಕ್ಕಿ ಕೊಂದಿದ್ದಾರೆ. ಕಳೆದ ತಿಂಗಳು ಪಂಜಾಬಿನ ಫರೀದ್‌ಕೋಟ್‌ನಲ್ಲಿ ಸಿಖ್ ಕಾರ್ಯಕರ್ತ ಗುರುಪ್ರೀತ್ ಸಿಂಗ್ ಹರಿ ನೌ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಗ್ವಾಲಿಯರ್ ಗುಂಡಿನ ದಾಳಿಯಲ್ಲಿ ಮೃತಪಟ್ಟವನನ್ನು ಜಸ್ವಂತ್ ಸಿಂಗ್ … Continued

ನೊಣಗಳ ಸಹಾಯದಿಂದ ಕಗ್ಗಂಟಾಗಿದ್ದ ಕೊಲೆ ರಹಸ್ಯ ಭೇದಿಸಿದ ಪೊಲೀಸರು…!

ಜಬಲ್ಪುರ : ಮಧ್ಯಪ್ರದೇಶದ ಪೊಲೀಸರು 26 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ಶಂಕಿತನ ಅಂಗಿ ಮೇಲಿದ್ದ ನೊಣಗಳು ಈ ಪ್ರಕರಣದ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಈ ನೊಣಗಳು 19 ವರ್ಷದ ಯುವಕನು ತಾನು ಅಪರಾಧವನ್ನು ಎಸಗಿರುವುದಾಗಿ ಒಪ್ಪಿಕೊಳ್ಳಲು ಕಾರಣವಾಯಿತು. ಆದರೆ ಇದೇ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದ ಪೋಲೀಸರು ಆತನನ್ನು ಈ ಮೊದಲು ಬಿಟ್ಟುಕಳುಹಿಸಿದ್ದರು. ಹಾಗಾದರೆ … Continued

ವೀಡಿಯೊ…| ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಬಾ..ಬಾ..ಬಾ..ಎಂದು ಕರೆದು ʼಚಿರತೆʼ ಕೆಣಕಿದ ಗುಂಪು : ದಾಳಿ ಮಾಡಿ ಮೂವರನ್ನು ಗಾಯಗೊಳಿಸಿದ ಚಿರತೆ

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಹದೋಲ್ ಪ್ರದೇಶದ ದಕ್ಷಿಣ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿದ ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪಿಕ್‌ನಿಕ್‌ಗೆ ಬಂದ ಗುಂಪು ಚಿರತೆಯನ್ನು ಕೆಣಕಿ ಪ್ರಚೋದಿಸಿದ ನಂತರ ಅದು ದಾಳಿ ಮಾಡದ ಘಟನೆ ಖಿತೌಲಿ ನದಿ ತೀರದಲ್ಲಿ ಭಾನುವಾರ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued

₹ 1,800 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ : ಇಬ್ಬರ ಬಂಧನ

ನವದೆಹಲಿ/ಭೋಪಾಲ್: ಗುಜರಾತ್‌ನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮತ್ತು ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ವೇಳೆ ಮಧ್ಯಪ್ರದೇಶದ ಭೋಪಾಲ್ ಬಳಿಯ ಬಾಗ್ರೋಡಾ ಕೈಗಾರಿಕಾ ಪ್ರದೇಶದಲ್ಲಿ ಬೃಹತ್ ಡ್ರಗ್ಸ್ ತಯಾರಿಕಾ ದಂಧೆ ನಡೆದಿರುವುದು ಬೆಳಕಿಗೆ ಬಂದಿದೆ. ಈ ದಾಳಿಯ ಸಂದರ್ಭದಲ್ಲಿ ಅಧಿಕಾರಿಗಳು ಸುಮಾರು ₹ 1,800 ಕೋಟಿ ಮೌಲ್ಯದ ಮೆಫೆಡ್ರೋನ್ (MD) ಔಷಧಗಳನ್ನು … Continued

ಪ್ರತ್ಯೇಕ ಸ್ಥಳಗಳಲ್ಲಿ ರೈಲು ಹಳಿಗಳ ಮೇಲೆ ಸ್ಫೋಟಕಗಳು, ಗ್ಯಾಸ್ ಸಿಲಿಂಡರ್ ಪತ್ತೆ…!

ನವದೆಹಲಿ: ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ರೈಲನ್ನು ಸ್ಫೋಟಿಸಲು ರೈಲು ಹಳಿಗಳ ಬಳಿ ಸ್ಫೋಟಕ ಇರಿಸಿದ್ದ ಆತಂಕಕಾರಿ ಘಟನೆ ಮಧ್ಯಪ್ರದೇಶದ ಬುರ್ಹಾನ್ಪುರ್ ಜಿಲ್ಲೆಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ರೈಲು ಹಳಿಗಳ ಬಳಿ 10ಕ್ಕೂ ಹೆಚ್ಚು ಸ್ಫೋಟಕಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ವಿಶೇಷ ರೈಲು ಬುಧವಾರ ಜಮ್ಮು ಮತ್ತು ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು … Continued

ಟ್ರೇನಿ ಸೇನಾ ಅಧಿಕಾರಿಗಳ ಮೇಲೆ ದಾಳಿ-ಹಲ್ಲೆ ; ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಭೋಪಾಲ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಂಗಳವಾರ ತಡರಾತ್ರಿ ಇಬ್ಬರು ಯುವ ಸೇನಾ ಅಧಿಕಾರಿಗಳ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿದ್ದು, ಅವರ ಸ್ನೇಹಿತೆಯ ಮೇಲೆ ಬಂದೂಕು ತೋರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ ಎಂದು ವರದಿಯಾಗಿದೆ. ದಾಳಿಕೋರರು ದರೋಡೆ ಮಾಡುವ ಉದ್ದೇಶದಿಂದ ವಿಹಾರಕ್ಕೆ ಹೊರಟಿದ್ದ ಗುಂಪಿನ ಮೇಲೆ ದಾಳಿ ನಡೆಸಿದ್ದು, ದಾಳಿಕೋರರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಹಾಗೂ ಅವರಲ್ಲಿ ಒಬ್ಬ ಕ್ರಿಮಿನಲ್ … Continued

ವೀಡಿಯೊ..| ಇಬ್ಬರ ಮೇಲೆ ನರಿ ದಾಳಿ ; ತಪ್ಪಿಸಿಕೊಳ್ಳಲು ನರಿಯನ್ನು 15 ಅಡಿ ದೂರ ಎಸೆದ ವ್ಯಕ್ತಿ…!

ಭೋಪಾಲ್ : ಮಧ್ಯಪ್ರದೇಶದಲ್ಲಿ ಜನರಿಗೆ ನರಿಗಳ ಭಯ ಕಾಡುತ್ತಿದೆ. ಸೆಹೋರ್ ಜಿಲ್ಲೆಯಲ್ಲಿ ಸೋಮವಾರ ಸಂಜೆ ಇಬ್ಬರ ಮೇಲೆ ನರಿ ದಾಳಿ ನಡೆಸಿದ್ದು, ಅವರು ಗಾಯಗೊಂಡಿದ್ದಾರೆ. ಈ ಭಯಾನಕ ಕ್ಷಣವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ರೆಹ್ತಿ ತಹಸಿಲ್‌ನ ಸಗೋನಿಯಾ ಪಂಚಾಯತದ ರಸ್ತೆಬದಿಯಲ್ಲಿ ಇಬ್ಬರು ವ್ಯಕ್ತಿಗಳು ಕುಳಿತಿದ್ದಾಗ ನರಿ ಅವರ ಮೇಲೆ ದಾಳಿ ಮಾಡುವುದನ್ನು ವೀಡಿಯೊ ತೋರಿಸಿದೆ. ಅವರು ಕಲ್ಲುಗಳನ್ನು … Continued

ವೀಡಿಯೊ…| ತನ್ನ ದೂರಿಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ನೂರಾರು ಪುಟಗಳ ದಾಖಲೆಗಳ ಹಾರದೊಂದಿಗೆ ಉರುಳುತ್ತ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ..!

ಒಂದು ವಿಶಿಷ್ಟ ಪ್ರತಿಭಟನೆಯಲ್ಲಿ, ಭ್ರಷ್ಟಾಚಾರದ ಆರೋಪದ ಮೇಲೆ ಗ್ರಾಮದ ಸರಪಂಚ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸೆಪ್ಟೆಂಬರ್ 3 ರಂದು ವ್ಯಕ್ತಿಯೊಬ್ಬರು ತಮ್ಮ ಕುತ್ತಿಗೆಗೆ ಸುಮಾರು ನೂರಾರು ಪುಟಗಳ ದಾಖಲೆಗಳ ಹಾರವನ್ನು ಹಾಕಿಕೊಂಡು ರಸ್ತೆಯಲ್ಲಿ ಉರುಳುತ್ತ ಮಧ್ಯಪ್ರದೇಶದ ನೀಮುಚ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತಲುಪಿದ್ದಾರೆ. “ಉರುಳುವ” ಪ್ರತಿಭಟನೆಯ ನಂತರ ನೀಮಚ್ ಜಿಲ್ಲಾಧಿಕಾರಿ ಹಿಮಾಂಶು ಚಂದ್ರ ಅವರು ಈ ವ್ಯಕ್ತಿಯ … Continued

ವೀಡಿಯೊ..| 50 ಹಸುಗಳನ್ನು ನದಿಗೆ ಎಸೆದ ದುಷ್ಕರ್ಮಿಗಳು ; 20 ಹಸುಗಳು ಸಾವು..!

ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಹಲವಾರು ಹಸುಗಳನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಎಸೆಯುತ್ತಿರುವುದನ್ನು ತೋರಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಾಗೋಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, 15 ರಿಂದ 20 ಹಸುಗಳು ಸಾವಿಗೀಡಾಗಿವೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ, ಆದರೂ ಇದು ಇನ್ನೂ ದೃಢೀಕರಿಸಲ್ಪಟ್ಟಿಲ್ಲ ಎಂದು … Continued