ಕಾಂಗ್ರೆಸ್‌ ನಾಯಕ ಕಮಲನಾಥ ಬಿಜೆಪಿ ಸೇರ್ತಾರಾ..? ಸಾಮಾಜಿಕ ಮಾಧ್ಯಮ ಬಯೋದಿಂದ ಕಾಂಗ್ರೆಸ್‌ ಅನ್ನು ಕೈಬಿಟ್ಟ ಮಗ ನಕುಲ್‌..!

ನವದೆಹಲಿ : ಪಕ್ಷದ ನಾಯಕತ್ವದ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಅವರು ಹೇಳಿಕೊಂಡ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ನಕುಲ ಕಮಲನಾಥ ಅವರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ತೆಗೆದುಹಾಕಿದ್ದು, ಸಂಭವನೀಯ ರಾಜಕೀಯ ಬದಲಾವಣೆಯ ಪ್ರಮುಖ ಸುಳಿವನ್ನು ನೀಡಿದ್ದಾರೆ … Continued

ರಣಜಿ ಟ್ರೋಫಿಯಲ್ಲಿ ಸತತ ನಾಲ್ಕು ಎಸೆತಗಳಲ್ಲಿ 4 ವಿಕೆಟ್ ಕಬಳಿಸಿ ದಾಖಲೆ ನಿರ್ಮಿಸಿದ ಕುಲ್ವಂತ | ವೀಕ್ಷಿಸಿ

ಮುಂಬೈ: ರಣಜಿ ಟ್ರೋಫಿಯ ಡಿ ಗುಂಪಿನ ಪಂದ್ಯದಲ್ಲಿ ಬರೋಡಾ ವಿರುದ್ಧ ಮಧ್ಯಪ್ರದೇಶದ ವೇಗದ ಬೌಲರ್ ಕುಲ್ವಂತ ಖೆಜ್ರೋಲಿಯಾ ಅವರು ಸತತ ನಾಲ್ಕು ಎಸೆತಗಳಲ್ಲಿ ನಾಲ್ಕು ವಿಕೆಟ್‌ ಪಡೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ದಾಖಲೆ ಬರೆದ ಮೂರನೇ ಬೌಲರ್ ಆದ ಕುಲ್ವಂತ ಖೆಜ್ರೋಲಿಯಾ ಅವರು ಬರೋಡಾದ ಎರಡನೇ ಇನಿಂಗ್ಸ್‌ನಲ್ಲಿ 95ನೇ ಓವರಿನ ಎರಡನೇ, ಮೂರನೇ, ನಾಲ್ಕನೇ … Continued

ಅರೇ ಮೋಹನಜೀ, ಖಡೇ ತೋ ಹೋ ಜಾಯಿಯೇ …: ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಬಿಜೆಪಿ ಹೆಸರಿಸಿದ್ದು ಹೀಗೆ…

ಭೋಪಾಲ್‌ :ಮೋಹನ ಯಾದವ್ ಅವರು ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ಪ್ರಕಟಿಸಿದೆ. ಈ ಘೋಷಣೆಯು ಮೋಹನ ಯಾದವ್ ಮತ್ತು ಇತರ ಬಿಜೆಪಿಯ ನಾಐಕರು ಸೇರಿದಂತೆ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ. ಹರ್ಯಾಣ ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ ಅವರು ಮೋಹನ ಯಾದವ್ ಅವರ ಹೆಸರನ್ನು ಘೋಷಿಸುತ್ತಿದ್ದಂತೆ ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿಯ ಹೆಸರಿನ … Continued

“ಇದು ಕಾಂಗ್ರೆಸ್ ಸೋಲು, ಜನರ ಸೋಲಲ್ಲ”: 3 ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದು ಇತರ ಇಂಡಿಯಾ ಮೈತ್ರಿಕೂಟ ಸದಸ್ಯ ಪಕ್ಷಗಳೊಂದಿಗೆ ಸ್ಥಾನ ಹೊಂದಾಣಿಕೆಯ ಕೊರತೆಯೇ ಕಾರಣ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷಗಳೊಂದಿಗೆ ಕಾಂಗ್ರೆಸ್‌ ಸೀಟು ಹಂಚಿಕೆಯು ಮೂರು ರಾಜ್ಯಗಳಲ್ಲಿ ವಿಭಿನ್ನ ಫಲಿತಾಂಶವನ್ನು ಕಾಣಬಹುದಿತ್ತು … Continued

ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನದಲ್ಲಿ ಗೆದ್ದ ನಂತರ 17 ರಾಜ್ಯಗಳಿಗೆ ವಿಸ್ತರಿಸಿದ ಬಿಜೆಪಿ-ಮಿತ್ರ ಪಕ್ಷಗಳ ಆಡಳಿತ : ರಾಜ್ಯಗಳ ಪಟ್ಟಿ ಇಲ್ಲಿದೆ…

ನವದೆಹಲಿ: ಬಿಜೆಪಿಯು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನಗಳಲ್ಲಿ ಭಾರಿ ಜಯ ಸಾಧಿಸಿದೆ, ಈ ನಿರ್ಣಾಯಕ ʼಹಿಂದಿ-ಬೆಲ್ಟ್ʼ ರಾಜ್ಯಗಳಲ್ಲಿ ಮುಂದಿನ ರಾಜಕೀಯ ಭೂದೃಶ್ಯವನ್ನು ಗಮನಾರ್ಹವಾಗಿ ಮರುರೂಪಿಸಿದೆ. ಈ ಅಮೋಘ ವಿಜಯವು 2024 ರ ಲೋಕಸಭೆ ಚುನಾವಣೆಗೆ ಭಾರತದ ರಾಜಕೀಯ ಡೈನಾಮಿಕ್ಸ್‌ ಗೆ ಗಮನಾರ್ಹ ದಿಕ್ಸೂಚಿ ಎಂದೇ ಹೇಳಬಹುದು. ಈ ನಿರ್ಣಾಯಕ ಗೆಲುವುಗಳೊಂದಿಗೆ, ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳು … Continued

ಕಾಂಗ್ರೆಸ್‌ಗೆ ಶಾಕ್‌ ನೀಡಿದ ʼಹಿಂದಿ ಬೆಲ್ಟ್‌; ಮೂರು ರಾಜ್ಯಗಳಲ್ಲಿ ಬಿಜೆಪಿಗೆ ಗೆಲುವು, ತೆಲಂಗಾಣ ಕಾಂಗ್ರೆಸ್‌ ತೆಕ್ಕೆಗೆ, ಇಂಡಿಯಾ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ವರ್ಚಸ್ಸಿಗೆ ಧಕ್ಕೆ

 ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಾಲಿಗೆ ಆಘಾತಕಾರಿ ಫಲಿತಾಂಶವಾಗಿದೆ . 2018ರಲ್ಲಿ ಗೆಲುವು ಸಾಧಿಸಿದ್ದ ರಾಜಸ್ಥಾನ, ಮಧ್ಯ ಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ ಸೋಲನುಭವಿಸಿದೆ. ದೇಶದ ‘ಹಿಂದಿ ಬೆಲ್ಟ್‌’ನ ಪ್ರಮುಖ 3 ರಾಜ್ಯಗಳಲ್ಲಿ ಮತದಾರರು ಕಾಂಗ್ರೆಸ್‌ಗೆ ಆಘಾತ ನೀಡಿದ್ದಾರೆ . ಇದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ರಾಹುಲ್ ಗಾಂಧಿ … Continued

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಡದಲ್ಲಿ ಬಿಜೆಪಿ ಮುನ್ನಡೆ, ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ

ಪಂಚ ರಾಜ್ಯಗಳಿಗೆ ನಡೆದ ವಿದಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಮತ ಎಣಿಕೆ ಇಂದು ಭಾನುವಾರ ಬೆಳಿಗ್ಗೆ ಆರಂಭವಾಗಿದ್ದು, ಆರಂಭದ ಮತ ಎಣಿಕೆಯ ಟ್ರೇಂಡ್‌ ಪ್ರಕಾರ ಬಿಜೆಪಿ ಮೂರು ರಾಜ್ಯಗಳಲ್ಲಿ ಹಾಗೂ ಕಾಂಗ್ರೆಸ್‌ ಒಂದು ರಾಜ್ಯದಲ್ಲಿ ಮುನ್ನಡೆ ಸಾಧಿಸಿರುವುದು ಕಂಡುಬಂದಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂಛತ್ತೀಸ್ ಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದಾರೆ ತೆಲಂಗಾಣದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಛತ್ತೀಸ್ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ಪಕ್ಷದ ಅಭ್ಯರ್ಥಿಗಳ ವಿರುದ್ಧ ಸ್ಪರ್ಧೆ : 39 ಕಾಂಗ್ರೆಸ್ ನಾಯಕರ ಉಚ್ಚಾಟನೆ

ಭೋಪಾಲ್: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಿದ್ದಕ್ಕಾಗಿ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಕಮಲನಾಥ ಅವರ ನಿರ್ದೇಶನದ ಮೇರೆಗೆ ಈ 39 ನಾಯಕರನ್ನು ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿದೆ ಎಂದು ಪಕ್ಷದ ರಾಜ್ಯ … Continued

‘ನಾನು ಒಳ್ಳೆಯ ಹಿಂದೂ, ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ 1.11 ಲಕ್ಷ ದೇಣಿಗೆ ನೀಡಿದ್ದೇನೆ’: ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್

ಭೋಪಾಲ್‌ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ 1.11 ಲಕ್ಷ ರೂಪಾಯಿ ದೇಣಿಗೆ ನೀಡಿದ್ದೇನೆ ಎಂದು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಭಾನುವಾರ ಹೇಳಿದ್ದಾರೆ. ಮಧ್ಯಪ್ರದೇಶದಲ್ಲಿ ಚುನಾವಣಾ ಕಣಕ್ಕಿಳಿದಿರುವ ದಿಗಿಜಯ ಸಿಂಗ್‌ ರಾಜಧಾನಿ ಭೋಪಾಲ್‌ನಲ್ಲಿ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಸಿಂಗ್, “ನಾನು ಸನಾತನ ಧರ್ಮವನ್ನು ಅನುಸರಿಸುತ್ತೇನೆ ಮತ್ತು … Continued