ವೈಜಿ ಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು ; ನಾಲ್ವರ ರಕ್ಷಣೆ

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (೨೫) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ … Continued

ರಾಮನಗರ ಪಾಲನಹಳ್ಳಿ ಮಠಕ್ಕೆ 3 ಸಾವಿರ ಎಕರೆ ಭೂಮಿ ದಾನ ಮಾಡಿ ಸನ್ಯಾಸ ಸ್ವೀಕರಿಸಲು ನಿರ್ಧರಿಸಿದ ರಾಜಸ್ಥಾನ ಗಣಿ ಉದ್ಯಮಿ

ರಾಮನಗರ : ರಾಜಸ್ಥಾನದ 78 ವರ್ಷದ ಗಣಿ ಉದ್ಯಮಿ ಪಿ.ಬಿ. ಓಸ್ವಾಲ್‌ ಜೈನ್‌ ಅವರು ಸಾವಿರಾರು ಕೋಟಿ ರೂ. ಮೌಲ್ಯದ ಸ್ವಯಾರ್ಜಿತ ಆಸ್ತಿ ಹಾಗೂ 3 ಸಾವಿರ ಎಕರೆಯ ಭೂಮಿಯನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಪಾಲನಹಳ್ಳಿಯ ಶ್ರೀ ಶನೈಶ್ಚರ ಮಠಕ್ಕೆ ದಾನ ಮಾಡಿದ್ದು, ಜೈನ ಸನ್ಯಾಸ ದೀಕ್ಷೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಓಸ್ವಾಲ್‌ ಜೈನ್‌ ಅವರು … Continued

ಮಾಗಡಿ | ಮರಕ್ಕೆ ಡಿಕ್ಕಿ ಹೊಡೆದ ಕಾರು ; ಒಂದೇ ಕುಟುಂಬದ ಐವರು ಸಾವು

ರಾಮನಗರ:  ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಸಾವಿಗೀಡಾದ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ ಸಮೀಪ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಮಂಗಳವಾರ (ಸೆ.17) ನಡೆದಿದೆ ಎಂದು ವರದಿಯಾಗಿದೆ. ಮಾಗಡಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಮಾಗಡಿ … Continued

ಗೀಸರ್‌ ಗ್ಯಾಸ್‌ ಸೋರಿಕೆ ; ತಾಯಿ-ಮಗ ಸಾವು

ರಾಮನಗರ : ಬಿಸಿ ನೀರು ಕಾಯಿಸುವ ಅನಿಲ ಗೀಸರ್‌ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಜಿಲ್ಲೆಯ ಮಾಗಡಿ ಪಟ್ಟಣದ ಜ್ಯೋತಿನಗರದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಶೋಭಾ(40) ಹಾಗೂ ಅವರ ಪುತ್ರ ದಿಲೀಪ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ ಸ್ನಾನದ … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ಮಳೆಗೆ ಕೊಟ್ಟಿಗೆ ಗೋಡೆ ಕುಸಿತ: ಶೆಡ್‌ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವು

ರಾಮನಗರ: ನಿರಂತರ ಮಳೆಗೆ ಕೊಟ್ಟಿಗೆ ಗೋಡೆ ಕುಸಿದಿದ್ದು, ಪಕ್ಕದಲ್ಲೇ ಮಲಗಿಕೊಂಡಿದ್ದ ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಸೋಲೂರು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಮಕ್ಕಳನ್ನು ಪರ್ಭಿನ್(4), ಇಷಿಕಾ(3) ಎಂದು ಗುರುತಿಸಲಾಗಿದೆ. ಗೋಡೆ ಕುಸಿದ ಪರಿಣಾಮ ಶೆಡ್‍ನಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸಾವಿಗೀಡಾಗಿದ್ದು, ಮತ್ತಿಬ್ಬರಿಗೆ ಗಾಯವಾಗಿದೆ. ನೇಪಾಳ ಮೂಲದ … Continued