ಮಹಾಕುಂಭಮೇಳದಲ್ಲಿ ಬುಧವಾರ ಪ್ರಧಾನಿ ಮೋದಿ ಭಾಗಿ; ಸಂಗಮದಲ್ಲಿ ಪವಿತ್ರ ಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 5ರ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಬದ್ಧತೆಗೆ ಅನುಗುಣವಾಗಿ, ತೀರ್ಥಯಾತ್ರೆಯ ಸ್ಥಳಗಳಲ್ಲಿ ಮೂಲಸೌಕರ್ಯ … Continued