ಕಾವೇರಿ-ಮಹದಾಯಿ ಜಲ ವಿವಾದದ ಬಗ್ಗೆ ಚರ್ಚಿಸಲು ನಾಳೆ ಸರ್ವಪಕ್ಷಗಳ ಸಭೆ

ಬೆಂಗಳೂರು : ಕಾವೇರಿ ಹಾಗೂ ಮಹದಾಯಿ ಜಲವಿವಾದಗಳ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಸರ್ವಪಕ್ಷಗಳ ಸಭೆಯನ್ನು ಬುಧವಾರ (ಆಗಸ್ಟ್‌ 23) ರಂದು ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಸಭೆಗೆ ಹಾಜರಾಗಿ ತಮ್ಮ ಸಲಹೆ ನೀಡುವಂತೆ ಸಂಸದರು, ಸರ್ವಪಕ್ಷಗಳ ಮುಖಂಡರು ಹಾಗೂ ಮಾಜಿ … Continued

ಮಹದಾಯಿ: ಬಿಜೆಪಿ ರಾಜಕೀಯ ನಾಟಕವನ್ನು ರೈತರು, ಜನರು ನಂಬುವುದಿಲ್ಲ- ಕಾಂಗ್ರೆಸ್

ಹುಬ್ಬಳ್ಳಿ : ಡಿಪಿಆರ್ ಅನುಮೋದನೆಗೊಂಡಿದೆ, ಮಹದಾಯಿ ಜಲ ವಿವಾದ ಸಂಪೂರ್ಣ ಬಗೆಹರಿಸಿದ್ದೇವೆ, ಕೆಲವೇ ದಿನಗಳಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ, ಮಹದಾಯಿ ನಮ್ಮದೇ ಕೊಡುಗೆ ಎಂದು ಹೇಳುತ್ತಿರುವ ಬಿಜೆಪಿ ನಾಯಕರ ಹೇಳಿಕೆ ಸುಳ್ಳೆಂದು ಜನ ತಿಳಿದುಕೊಂಡಿದ್ದಾರೆ. ಆರಂಭದಿಂದಲೂ ಬಿಜೆಪಿ ಮಹದಾಯಿ-ಕಳಸಾ ಬಂಡೂರಿ ನಾಲಾ ಯೋಜನೆಗೆ ಒಂದಿಲ್ಲ ಒಂದು ಕಾರಣ ಅಡ್ಡಿ ಅಡ್ಡಪಡಿಸುತ್ತಲೇ ಬಂದಿದೆ. ಇಂದಿಗೂ ಅಡ್ಡಪಡಿಸುತ್ತಲಿದೆ ಎಂದು ಕಾಂಗ್ರೆಸ್‌ … Continued

ಕಳಸಾ-ಬಂಡೂರಿ ಯೋಜನೆ: ಸುಪ್ರೀಂಕೋರ್ಟ್ ಮೊರೆ ಹೋದ ಗೋವಾ ಸರ್ಕಾರ

ಪಣಜಿ: ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಮಧ್ಯಂತರ ಅರ್ಜಿಯನ್ನು (ಐಎ) ಸಲ್ಲಿಸಿದೆ. ಕಳಸಾ-ಬಂಡೂರಿ ಯೋಜನೆಯ ಮೂಲಕ ಮಹದಾಯಿ ನದಿ ತಿರುವಿಗೆ ಕರ್ನಾಟಕ ಸಲ್ಲಿಸಿರುವ ವಿಸ್ತೃತ ಯೋಜನಾ ವರದಿಗೆ (ಡಿಪಿಆರ್) ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ನೀಡಿರುವ ಅನುಮೋದನೆಗೆ ತಡೆ ನೀಡುವಂತೆ ಮಧ್ಯಂತರ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಯೋಜನೆಗೆ ಡಿಪಿಆರ್ ಆಧರಿಸಿ ಯಾವುದೇ … Continued

ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued

ಮಹದಾಯಿ ನೀರು ಬರುವವರೆಗೂ ಸಾಲ ತುಂಬಲ್ಲ, ಮತ್ತೆ ಸಂಘಟಿತ ಹೋರಾಟ: ವಿಜಯ ಕುಲಕರ್ಣಿ

ಹುಬ್ಬಳ್ಳಿ: ಮಹದಾಯಿ ನೀರಿನ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಬೇಸತ್ತಿರುವ ರೈತರು ಮತ್ತೊಂದು ಸುತ್ತಿನ ಹೋರಾಟಕ್ಕೆ ಮುಂದಾಗಿದ್ದಾರೆ. ರೈತ ಹುತ್ಮಾತ್ಮ ದಿನವಾದ ಜುಲೈ 21 ರಿಂದ ಸಾಲ ಮರುಪಾವತಿಯನ್ನು ಬಹಿಷ್ಕರಿಸಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಾಲ ಮರುಪಾವತಿ ಬಹಿಷ್ಕರಿಸಿ ಅಭಿಯಾನಕ್ಕೆ ಕಳಸಾ-ಬಂಡೂರಿ, ಮಹದಾಯಿ ಹೋರಾಟ ಕೇಂದ್ರ ಸಮಿತಿ ಅಧ್ಯಕ್ಷ ವಿಜಯ ಕುಲಕರ್ಣಿ … Continued

ಮಹದಾಯಿ ನೀರು ಹಂಚಿಕೆ: ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ- ಸಚಿವ ರಮೇಶ ಜಾರಕಿಹೊಳಿ

ನವದೆಹಲಿ: ಮಹದಾಯಿ ನದಿ ನೀರು ಹಂಚಿಕೆ ಕುರಿತು ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಯಾವುದೇ ನೋಟಿಸ್‌ ಜಾರಿಯಾಗಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ವಿವಿಧ ರಾಜ್ಯಗಳೊಂದಿಗಿನ ನದಿ ನೀರು ಹಂಚಿಕೆ ಸಂಬಂಧ ಉದ್ಭವಿಸಿರುವ ಬಿಕ್ಕಟ್ಟಿಗೆ ಪ್ರತಿಯಾಗಿ ನವದೆಹಲಿಗೆ ತೆರಳಿದ ಸಚವ ರಮೇಶ್ ಜಾರಕಿಹೊಳಿ, ಸೋಮವಾರದ ಬೆಳವಣಿಗೆಗಳಿಗೆ ಪ್ರತಿಯಾಗಿ ಈ ಸ್ಪಷ್ಟನೆ ನೀಡಿದ್ದಾರೆ. … Continued