ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ದಾವೂದ್ ಇಬ್ರಾಹಿಂನ 15,440 ರೂ. ಮೂಲ ಬೆಲೆಯ ಆಸ್ತಿ ಹರಾಜಿನಲ್ಲಿ 2 ಕೋಟಿ ರೂ.ಗಳಿಗೆ ಮಾರಾಟ

ಮುಂಬೈ: ದಾವೂದ್ ಇಬ್ರಾಹಿಂ ಒಡೆತನದ ನಾಲ್ಕು ಆಸ್ತಿಗಳ ಹರಾಜು ಪ್ರಕ್ರಿಯೆ ಶುಕ್ರವಾರ (ಜನವರಿ 5) ಮುಕ್ತಾಯವಾಗಿದ್ದು, ಎರಡು ಜಮೀನುಗಳಿಗೆ ಯಾವುದೇ ಬಿಡ್‌ಗಳು ಸಿಗಲಿಲ್ಲ ಮತ್ತು ಕೇವಲ ₹ 15,000 ಮೀಸಲು ಬೆಲೆ ಹೊಂದಿದ್ದ ಒಂದನ್ನು ₹ 2 ಕೋಟಿಗೆ ಮಾರಾಟ ಮಾಡಲಾಗಿದೆ. ದಾವೂದ್ ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕನಾಗಿದ್ದು, ಕರಾಚಿಯಲ್ಲಿ ಅಡಗಿದ್ದಾನೆ ಎಂದು ನಂಬಲಾಗಿದೆ. ಸರ್ವೆ … Continued

ದಾವೂದ್ ಇಬ್ರಾಹಿಂ ಒಡೆತನದ 4 ಆಸ್ತಿಗಳು ಕೇವಲ ₹ 19 ಲಕ್ಷಕ್ಕೆ ಇಂದು ಬಿಡ್ಡಿಂಗ್‌

ಮುಂಬೈ : ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ದಾವೂದ್ ಇಬ್ರಾಹಿಂ ಕುಟುಂಬದ ಒಡೆತನದ ನಾಲ್ಕು ಕೃಷಿ ಭೂಮಿ  ಶುಕ್ರವಾರ (ಜನವರಿ 5)  ಕೇವಲ ₹ 19 ಲಕ್ಷದ ಮೀಸಲು ಬೆಲೆಗೆ ಬಿಡ್‌ಗೆ ಹೋಗಲಿದೆ. ಈ ಭೂಮಿ ಭೂಗತ ಪಾತಕಿಯ ಪೂರ್ವಜರ ಆಸ್ತಿಯಾಗಿದ್ದು, ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಮುಂಬಾಕೆ ಗ್ರಾಮದಲ್ಲಿವೆ. ಹರಾಜುದಾರರ ಸಂಖ್ಯೆ ಸ್ಪಷ್ಟವಾಗಿಲ್ಲವಾದರೂ, ಈ ಹಿಂದೆ … Continued

ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 9 ಮಂದಿ ಸಾವು, ಹಲವರಿಗೆ ಗಾಯ

ನಾಗ್ಪುರ : ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಸ್ಫೋಟಕ ತಯಾರಿಕಾ ಕಂಪನಿಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ನಾಗ್ಪುರದ ಬಜಾರ್‌ಗಾಂವ್ ಪ್ರದೇಶದಲ್ಲಿ ಸೋಲಾರ್ ಇಂಡಸ್ಟ್ರೀಸ್‌ನ ಕಾಸ್ಟ್ ಬೂಸ್ಟರ್ ಘಟಕದಲ್ಲಿ ಬೆಳಿಗ್ಗೆ 9 ಗಂಟೆಗೆ ಸ್ಫೋಟ ಸಂಭವಿಸಿದೆ. ಸೋಲಾರ್ ಇಂಡಸ್ಟ್ರೀಸ್ ಕಾರ್ಖಾನೆಯ ಪ್ರವೇಶ ದ್ವಾರದಲ್ಲಿ ಹಲವಾರು ಆಂಬ್ಯುಲೆನ್ಸ್‌ಗಳನ್ನು … Continued

ಐಸಿಸ್ ಸಂಚು ಪ್ರಕರಣ : ಕರ್ನಾಟಕ, ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್​​ಐಎ ದಾಳಿ ; 13 ಜನರ ಬಂಧನ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency)ಯ ತಂಡಗಳು ಶನಿವಾರ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಲಾಗಿದೆ. ಬಂಧಿತರು ಪುಣೆ ಮೂಲದವರಾಗಿದ್ದು, ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ವಿವರಗಳ ಪ್ರಕಾರ, ಕರ್ನಾಟಕದ ಕೆಲವು … Continued

ರುಚಿಕರ ಆಹಾರ ನೀಡಿಲ್ಲವೆಂದು ತಾಯಿಯನ್ನೇ ಕೊಂದ ಮಗ….!

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವ್ಯಕ್ತಿಯೊಬ್ಬರು ತನಗೆ ಬೇಕಾದ ರುಚಿಕರವಾದ ಆಹಾರ ನೀಡಿಲ್ಲ ಎಂಬ ಕಾರಣಕ್ಕೆ ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ. … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued

ಮಹಾರಾಷ್ಟ್ರದಲ್ಲಿ ಕರ್ನಾಟಕದ ಬಸ್ಸಿಗೆ ಬೆಂಕಿ: ಮಹಾರಾಷ್ಟ್ರಕ್ಕೆ ಬಸ್‌ ಸಂಚಾರ ಸ್ಥಗಿತ

ಕಲಬುರಗಿ: ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಸಂಬಂಧ ಹೋರಾಟ ನಡೆಯುತ್ತಿದ್ದು, ಕರ್ನಾಟಕದ ಕೆಕೆಆರ್‌ಟಿಸಿ ಬಸ್‌ಗೆ ಸೋಮವಾರ ಬೆಂಕಿ ಹಚ್ಚಲಾಗಿದೆ. ಅದರ ನಂತರ ಮಹಾರಾಷ್ಟ್ರಕ್ಕೆ ಹೋಗುವ ಬಸ್ ಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಕೆಕೆಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ತಿಳಿಸಿದ್ದಾರೆ. ಬೀದರ್‌ ಜಿಲ್ಲೆಯ ಭಾಲ್ಕಿಯಿಂದ ಪುಣೆಗೆ ಸೋಮವಾರ ಹೊರಟಿದ್ದ ಬಸ್ (ಕೆಎ-38 ಎಫ್-1201) ಅನ್ನು ಮಹಾರಾಷ್ಟ್ರದ ಉಮರ್ಗಾ … Continued

ಉದ್ಧವ್‌ ಠಾಕ್ರೆ ಸ್ವಾರ್ಥ ಸಾಧನೆಗಾಗಿ ಹಮಾಸ್ ಜೊತೆಯೂ ಕೈಜೋಡಿಸಬಹುದು : ದಸರಾ ಸಮಾವೇಶದಲ್ಲಿ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ವಾಗ್ದಾಳಿ

ಮುಂಬೈ : ಉದ್ಧವ್ ಠಾಕ್ರೆ ಮತ್ತು ಅವರ ಶಿವಸೇನೆ ಬಣವು ತಮ್ಮ ಸ್ವಾರ್ಥ ಸಾಧಿಸಲು ಭಯೋತ್ಪಾದಕ ಗುಂಪುಗಳಾದ ಹಮಾಸ್ ಮತ್ತು ಲಷ್ಕರ್-ಎ-ತೊಯ್ಬಾ ಜೊತೆಯೂ ಕೈಜೋಡಿಸಬಹುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಮಂಗಳವಾರ ವಾಗ್ದಾಳಿ ನಡೆಸಿದ್ದಾರೆ. ಆಜಾದ್ ಮೈದಾನದಲ್ಲಿ ಮಂಗಳವಾರ ನಡೆದ ದಸರಾ ರ್ಯಾಲಿಯಲ್ಲಿ ಮಾತನಾಡಿದ ಶಿಂಧೆ, “ತಮ್ಮ ಸ್ವಾರ್ಥಕ್ಕಾಗಿ ಅವರು ಹಮಾಸ್ ಮತ್ತು ಲಷ್ಕರ್-ಎ-ತೊಯ್ಬಾದೊಂದಿಗೂ … Continued

ಮುಂಬೈ-ಗೋವಾ ಹೆದ್ದಾರಿಯಲ್ಲಿ ಕುಸಿದು ಬಿದ್ದ ನಿರ್ಮಾಣ ಹಂತದ ಮೇಲ್ಸೇತುವೆ | ವೀಡಿಯೊ

ಮುಂಬೈ-ಗೋವಾ ಚತುಷ್ಪಥ ಹೆದ್ದಾರಿಯ ನಿರ್ಮಾಣ ಹಂತದಲ್ಲಿದ್ದ ಪಿಲ್ಲರ್ ಸೋಮವಾರ ಚಿಪ್ಲುನ್‌ನಲ್ಲಿ ಕುಸಿದು ಬಿದ್ದಿದೆ. ಪಿಲ್ಲರ್ ಕುಸಿದ ಕೆಲವೇ ಕ್ಷಣಗಳಲ್ಲಿ ಮೇಲ್ಸೇತುವೆಯ ಒಂದು ಭಾಗವೂ ಕುಸಿದು ಬಿದ್ದಿದ್ದು, ನಿರ್ಮಾಣ ಸ್ಥಳದಲ್ಲಿ ಬಳಸುತ್ತಿದ್ದ ಕ್ರೇನ್ ಯಂತ್ರಕ್ಕೆ ಹಾನಿಯಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲುನ್ ನಗರದಲ್ಲಿ ಈ ಘಟನೆ ನಡೆದಿದೆ ಎಂದು … Continued