ಮಹೇಶ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ … Continued

ಮಹೇಶ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು

ಮಂಗಳೂರು: ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡದಿಂದ 1 ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ತಿಮರೋಡಿ ವಿರುದ್ಧ ವಿವಿಧೆಡೆ 32 ಪ್ರಕರಣಗಳು ದಾಖಲಾಗಿದ್ದು, ಹೀಗಾಗಿ ಅವರನ್ನು ಒಂದು ವರ್ಷ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಿ ಸಹಾಯಕ ಆಯುಕ್ತರಾದ ಸ್ಟೆಲ್ಲಾ ವರ್ಗೀಸ್‌ ಆದೇಶಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಮೇಲೆ … Continued

ಧರ್ಮಸ್ಥಳ ಪ್ರಕರಣ | ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ವಿರುದ್ಧ ಹೊಸ ಸೆಕ್ಷನ್ ಹಾಕಿದ ಎಸ್‌ಐಟಿ

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪಿತ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ತನ್ನ ತನಿಖೆಯನ್ನು ವಿಸ್ತರಿಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ (Chinnayya) ವಿರುದ್ಧ ಹೊಸ ಸೆಕ್ಷನ್‌ಗಳನ್ನು ಹಾಕಿದೆ. ಸುಳ್ಳು ಸಾಕ್ಷ್ಯಾಧಾರ, ನಕಲಿ ದಾಖಲೆ ಮತ್ತು ಸುಳ್ಳು ಸಾಕ್ಷ್ಯಾಧಾರಗಳ ಸೃಷ್ಟಿಗೆ ಸಂಬಂಧಿಸಿದಂತೆ ದೂರುದಾರನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ … Continued

ಧರ್ಮಸ್ಥಳ ಪ್ರಕರಣ | ಮಹೇಶ ಶೆಟ್ಟಿ ತಿಮರೋಡಿ ನಿವಾಸದ ಮೇಲೆ ಎಸ್‌ಐಟಿ ದಾಳಿ : ಆರೋಪಿ ಚಿನ್ನಯ್ಯನ ಮೊಬೈಲ್‌ ಪತ್ತೆ…?

ಮಂಗಳೂರು : ಧರ್ಮಸ್ಥಳದಲ್ಲಿ ಹಲವಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪದ ಮೇಲೆ ಉಜಿರೆಯಲ್ಲಿರುವ ಮಹೇಶ ಶೆಟ್ಟಿ ತಿಮರೋಡಿ ಅವರ ನಿವಾಸದ ಮೇಲೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಮಂಗಳವಾರ (ಆಗಸ್ಟ್ 26) ದಾಳಿ ನಡೆಸಿದೆ ಎಸ್‌ಐಟಿಯಿಂದ ಬೆಳಿಗ್ಗೆ 9:20 ರ ಸುಮಾರಿಗೆ ದಾಳಿ ನಡೆದಿದ್ದು, … Continued

ಉಡುಪಿ : ಮಹೇಶ ಶೆಟ್ಟಿ ತಿಮರೋಡಿಗೆ ಜಾಮೀನು

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ ಬಗ್ಗೆ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಮಹೇಶ ಶೆಟ್ಟಿ ತಿಮರೋಡಿಗೆ ಉಡುಪಿ ನ್ಯಾಯಾಲಯವು ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಿ.ಎಲ್.ಸಂತೋಷ ವಿರುದ್ಧ ತಿಮರೋಡಿ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಉಡುಪಿ ಗ್ರಾಮಾಂತರ ಘಟಕದ ಅಧ್ಯಕ್ಷ ರಾಜೀವ … Continued

ಮಹೇಶ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ

ಬೆಳ್ತಂಗಡಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹೇಶ ಶೆಟ್ಟಿ ತಿಮರೋಡಿಯನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿ.ಎಲ್. ಸಂತೋಷ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿದ್ದು, ಉಡುಪಿ … Continued