‘ಯುಗಾಂತ್ಯ’ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ; ಮಲ್ಲಿಕಾರ್ಜುನ ಖರ್ಗೆ ಪತ್ರ

ನವದೆಹಲಿ: 33 ವರ್ಷಗಳ ಸುದೀರ್ಘ ಸಂಸದೀಯ ಪಯಣಕ್ಕೆ ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಅವರು ಮಂಗಳವಾರ ಅಂತ್ಯ ಹಾಡಿದ್ದಾರೆ. ರಾಜ್ಯಸಭೆಯಿಂದ ಬುಧವಾರ (ಏಪ್ರಿಲ್‌ 3) ನಿವೃತ್ತರಾಗಲಿರುವ ಭಾರತದ ಮಾಜಿ ಪ್ರಧಾನಿ ಮತ್ತು ಪಕ್ಷದ ಹಿರಿಯ ನಾಯಕ ಮನಮೋಹನ ಸಿಂಗ್ ಅವರಿಗೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಸಿಂಗ್ ನಿವೃತ್ತಿಯನ್ನು ‘ಯುಗಾಂತ್ಯ’ ಎಂದು ಖರ್ಗೆ … Continued

ಲೋಕಸಭೆ ಚುನಾವಣೆ : ಕಾಂಗ್ರೆಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ (Congress)ನಿಂದ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಲಾಗಿದೆ. ರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್‌ ಒಟ್ಟು 40 ಸ್ಟಾರ್‌ ಪ್ರಚಾರಕರ ಹೆಸರನ್ನು ಘೋಷಣೆ ಮಾಡಿದೆ. ಪಟ್ಟಿಯಲ್ಲಿ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ಸಹ ಸೇರಿದ್ದಾರೆ. … Continued

ಈ ಕಾರಣಗಳಿಗಾಗಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದೇ ಇರಬಹುದು…: ಮೂಲಗಳು

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಿರುವ ಸಾಧ್ಯತೆಯಿದೆ. ಕಳೆದ ವಾರ ಗುಲ್ಬರ್ಗ ಕ್ಷೇತ್ರಕ್ಕೆ ಚರ್ಚಿಸಲಾದ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಅವಿರೋಧ ಆಯ್ಕೆಯಾಗಿತ್ತು. ಆದರೆ ಅವರು ತಮ್ಮ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ನಾಮನಿರ್ದೇಶನ ಮಾಡುವ ಸಾಧ್ಯತೆಯಿದೆ ಎಂದು ಅವರ ನಿಕಟ ಮೂಲಗಳು … Continued

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಝಡ್ ಪ್ಲಸ್ ಭದ್ರತೆ

ನವದೆಹಲಿ: ಲೋಕಸಭೆ ಚುನಾವಣೆಗೆ ಮುನ್ನ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಗೃಹ ಸಚಿವಾಲಯವು ಝಡ್ ಪ್ಲಸ್ ಭದ್ರತೆ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಖರ್ಗೆಯವರ ಬೆದರಿಕೆ ಗ್ರಹಿಕೆಯನ್ನು ಆಧರಿಸಿ ಗೃಹ ಸಚಿವಾಲಯವು ಈ ತಿಂಗಳ ಆರಂಭದಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅದು ಹೇಳಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆಯ … Continued

ಪ್ರಧಾನಿ ಭೇಟಿಯಾದ ಕೆಲವೇ ದಿನಗಳಲ್ಲಿ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ ಕಾಂಗ್ರೆಸ್‌…!

ನವದೆಹಲಿ : ಪಕ್ಷದ ವಿರುದ್ಧ ಅಶಿಸ್ತು ಮತ್ತು ಪಕ್ಷಕ್ಕೆ ಮುಜುಗರ ತರುವ ಪುನರಾವರ್ತಿತ ಹೇಳಿಕೆಗಳ ಬಗ್ಗೆ ಬಂದ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ (ಫೆಬ್ರವರಿ 10) ಪಕ್ಷದ ಹಿರಿಯ ನಾಯಕ ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಿದ್ದಾರೆ. ಪ್ರಮೋದ ಕೃಷ್ಣಂ ಅವರನ್ನು ಪಕ್ಷದಿಂದ ಹೊರಹಾಕಬೇಕೆಂಬ ಉತ್ತರ ಪ್ರದೇಶ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಎಐಸಿಸಿ ಅಧ್ಯಕ್ಷ ಖರ್ಗೆಗೆ ನಿಂದನೆ ಆರೋಪ: ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ತಡೆ

ಕಲಬುರಗಿ : ಕಾಂಗ್ರೆಸ್‌ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಿ ಗುರಿಯಾಗಿ ಜಾತಿ ನಿಂದನೆ ಪ್ರಕರಣ ಎದುರಿಸುತ್ತಿರುವ ನಮೋ ಬ್ರಿಗೇಡ್‌ ಮುಖ್ಯಸ್ಥ ಚಕ್ರವರ್ತಿ ಸೂಲಿಬೆಲೆ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ನ ಕಲಬುರ್ಗಿ ಪೀಠವು ಮಂಗಳವಾರ ತಡೆಯಾಜ್ಞೆ ನೀಡಿದೆ. ರಾಜಕೀಯ ಕಾರಣಕ್ಕಾಗಿ ತನ್ನ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿ ಚಕ್ರವರ್ತಿ … Continued

ಇಂಡಿಯಾ ಮೈತ್ರಿಕೂಟಕ್ಕೆ ಪ್ರಧಾನಿ ಮುಖದ ಅಗತ್ಯವಿಲ್ಲ, ಮೈತ್ರಿಕೂಟದ ಹೆಸರಲ್ಲೇ ಮತ ಕೇಳಬೇಕು: ಶರದ್ ಪವಾರ್

ನವದೆಹಲಿ: ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ಗೆ ಪ್ರಧಾನಿ ಅಭ್ಯರ್ಥಿಯ ಅಗತ್ಯವಿಲ್ಲ, ಏಕೆಂದರೆ ನಾವು ಮೈತ್ರಿಕೂಟದ ಹೆಸರಿನಲ್ಲಿ ಹೆಸರಿನಲ್ಲಿ ಮತ ಕೇಳಬೇಕು ಎಂದು ಹಿರಿಯ ರಾಜಕಾರಣಿ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಪವಾರ್ ಅವರು, “ಪ್ರಧಾನಿ ಅಭ್ಯರ್ಥಿಯನ್ನು ಘೋಷಿಸುವ ಅಗತ್ಯವಿಲ್ಲ ಎಂದು ನಾವು ಭಾವಿಸುತ್ತೇವೆ ಮತ್ತು … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued