ಟಿಎಂಸಿಗೆ ಮತ್ತೊಂದು ಆಘಾತ : ರಾಜ್ಯಸಭೆ ಸ್ಥಾನಕ್ಕೆ ನಟಿ ಕೋಯೆಲ್ ಮಲ್ಲಿಕ್ ರಾಜೀನಾಮೆ ; ಬಿಜೆಪಿ ಸೇರ್ಪಡೆ ವದಂತಿಗೆ ಬಲ

ನವದೆಹಲಿ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಗುರುವಾರ ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ಬಂಗಾಳಿ ಚಿತ್ರರಂಗದ ಖ್ಯಾತ ನಟಿ ಹಾಗೂ ರಾಜಕಾರಣಿ ಕೋಯೆಲ್ ಮಲ್ಲಿಕ್ (ರುಕ್ಮಿಣಿ ಮಲ್ಲಿಕ್) ಅವರು ತಮ್ಮ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೋಯೆಲ್ ಮಲ್ಲಿಕ್ ಅವರು ಈ ವರ್ಷದ ಏಪ್ರಿಲ್ 6ರಂದು ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ, … Continued

ವಿಡಿಯೋ | ರ್ಯಾಲಿ ಬಳಿಕ ಗದ್ದಲದ ನಡುವೆ ಜನರನ್ನು ನಿಯಂತ್ರಿಸುವಾಗ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಬರೂಯಿಪುರದಲ್ಲಿ 11 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣವನ್ನು ಖಂಡಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಕೋಲ್ಕತ್ತಾದಲ್ಲಿ ನಡೆದ ಪ್ರತಿಭಟನಾ ರ್ಯಾಲಿ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಯಿತು. ರ್ಯಾಲಿಯ ವೇಳೆ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ತೀವ್ರ ವಾಗ್ವಾದ ಮತ್ತು ಘರ್ಷಣೆ … Continued

ಮಮತಾಗೆ ಮತ್ತೊಂದು ಭಾರಿ ಆಘಾತ ; ತಿಂಗಳ ಹಿಂದಷ್ಟೇ ರಾಜ್ಯಾಧ್ಯಕ್ಷೆಯಾಗಿ ನೇಮಕವಾಗಿದ್ದ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ !

ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅನುಭವಿಸಿದ ಹಿನ್ನಡೆಯ ನಂತರ ಪಕ್ಷದ ಸಂಘಟನೆಯನ್ನು ಪುನರ್ರಚಿಸಿದ್ದ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಇದೀಗ ಮತ್ತೊಂದು ಭಾರೀ ಆಘಾತ ಎದುರಾಗಿದೆ. ಜೂನ್ 3ರಂದು ಟಿಎಂಸಿಯ ಪಶ್ಚಿಮ ಬಂಗಾಳ ರಾಜ್ಯಾಧ್ಯಕ್ಷೆಯಾಗಿ ನೇಮಕಗೊಂಡಿದ್ದ ಚಂದ್ರಿಮಾ ಭಟ್ಟಾಚಾರ್ಯ, ಕೇವಲ ಒಂದು ತಿಂಗಳಲ್ಲೇ ಪಕ್ಷದ ಎಲ್ಲ ಹುದ್ದೆಗಳಿಗೆ … Continued

ತೃಣಮೂಲ Vs ತೃಣಮೂಲ ಕದನ ತೀವ್ರ : ಪಕ್ಷದ ಪ್ರಧಾನ ಕಚೇರಿಯನ್ನೇ ತಮ್ಮ ವಶಕ್ಕೆ ತೆಗೆದುಕೊಂಡ ಬಂಡಾಯ ಬಣ

ಕೊಲ್ಕತ್ತಾ: ರಿತಬ್ರತ ಬ್ಯಾನರ್ಜಿ ನೇತೃತ್ವದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಬಂಡಾಯ ಬಣವು ಕೊಲ್ಕತ್ತಾದ ಮೆಟ್ರೋಪಾಲಿಟನ್ ಪ್ರದೇಶದಲ್ಲಿರುವ ಪಕ್ಷದ ಮುಖ್ಯ ಕಚೇರಿಯನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಫಿರ್ಹಾದ್ ಹಕೀಮ್, ಸಂದೀಪನ್ ಸಹಾ, ಜಾವೇದ್ ಖಾನ್ ಹಾಗೂ ಪಕ್ಷದ ಖಜಾಂಚಿ ಅಕ್ರುಜ್ಜಮಾನ ಸೇರಿದಂತೆ ಹಲವು ಶಾಸಕರೊಂದಿಗೆ ಕಚೇರಿಗೆ ಆಗಮಿಸಿದ ಬಂಡಾಯ ಬಣದ ನಾಯಕರು, ಕಚೇರಿಯ … Continued

ಮಮತಾಗೆ ಮತ್ತೊಂದು ಬಿಗ್ ಶಾಕ್: ಬಂಡಾಯ ಬಣ ಸೇರಿದ ಸುದೀಪ ಬಂದೋಪಾಧ್ಯಾಯ; ಭೂಪೇಂದ್ರ ಯಾದವ್ ಭೇಟಿ

ಕೋಲ್ಕತ್ತಾ/ನವದೆಹಲಿ: 2026 ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಪಕ್ಷದೊಳಗಿನ ಒಡಕನ್ನು ಇನ್ನಷ್ಟು ಹೆಚ್ಚಿಸುವ ಬೆಳವಣಿಗೆಯೊಂದರಲ್ಲಿ ಟಿಎಂಸಿಯೊಳಗೆ ಪ್ರತ್ಯೇಕ ಬಣವಾಗಿ ಗುರುತಿಸುವಂತೆ ಕೋರಿ ಪಕ್ಷದ ಭಿನ್ನಮತೀಯ ಸಂಸದರ ಪಾಳಯ ಸಲ್ಲಿಸಿದ ಪತ್ರಕ್ಕೆ ಹಿರಿಯ ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ಸಹಿ ಹಾಕಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.  ಪಕ್ಷದ ಹಿರಿಯ ನಾಯಕ … Continued

ಅಭಿಷೇಕ ಬೇಕೋ ಅಥವಾ ನಾವು ಬೇಕೋ ಆಯ್ಕೆ ಮಾಡಿ’ ; ಮಮತಾಗೆ ಗಡುವು ನೀಡಿದ ಆಪ್ತ ಕಲ್ಯಾಣ ಬ್ಯಾನರ್ಜಿ

 ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಭಿನ್ನಮತ ಈಗ ಸಾರ್ವಜನಿಕವಾಗಿ ಸ್ಫೋಟಗೊಂಡಿದೆ. ಇತ್ತೀಚಿನ ದಿನಗಳಲ್ಲಿ ಹಲವು ನಾಯಕರು ಮತ್ತು ಸಂಸದರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದ ಅಂತರ ಕಾಯ್ದುಕೊಳ್ಳುತ್ತಿದ್ದರೂ, ಪಕ್ಷ ಹಾಗೂ ಮಮತಾ ಬ್ಯಾನರ್ಜಿಗೆ ನಿಷ್ಠರಾಗಿ ಉಳಿದಿದ್ದ ಹಿರಿಯ ಸಂಸದ ಕಲ್ಯಾಣ ಬ್ಯಾನರ್ಜಿ ಅವರು ಗುರುವಾರ ಮಮತಾ ಬ್ಯಾನರ್ಜಿ ಮತ್ತು … Continued

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್: ಟಿಎಂಸಿ ರಾಜ್ಯಸಭಾ ಸದಸ್ಯತ್ವಕ್ಕೆ ಸುಶ್ಮಿತಾ ದೇವ್ ರಾಜೀನಾಮೆ

ನವದೆಹಲಿ: ಪಕ್ಷದೊಳಗಿನ ಭಿನ್ನಮತ ಮತ್ತು ಸರಣಿ ಬಂಡಾಯದಿಂದ ಕಂಗಾಲಾಗಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ (TMC) ಸುಪ್ರಿಮೋ ಮಮತಾ ಬ್ಯಾನರ್ಜಿಗೆ ಮತ್ತೊಂದು ತೀವ್ರ ಆಘಾತ ಎದುರಾಗಿದೆ. ಟಿಎಂಸಿ ಹಿರಿಯ ನಾಯಕಿ ಸುಶ್ಮಿತಾ ದೇವ್ ಅವರು ಬುಧವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿಗಳಾದ ಸಿ. ಪಿ. ರಾಧಾಕೃಷ್ಣನ್ … Continued

ನಕಲಿ ಸಹಿ ಪ್ರಕರಣ: ಮಮತಾ ಬ್ಯಾನರ್ಜಿ ನಿವಾಸ , ಅಭಿಷೇಕ ಕಚೇರಿ ಮೇಲೆ ಏಕಕಾಲದಲ್ಲಿ ಸಿಐಡಿ ದಾಳಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕರ ನಕಲಿ ಸಹಿ ಪ್ರಕರಣಕ್ಕೆ ಸಂಬಂಧಿಸಿದಂತೆ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳು ಗುರುವಾರ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ಈ ಬೆನ್ನಲ್ಲೇ ಅವರ ಸೋದರಳಿಯ ಹಾಗೂ … Continued

ದೀದಿ ಪಕ್ಷದಲ್ಲಿ ‘ಮಹಾಬಂಡಾಯ’ | ಸ್ಪೀಕರ್‌ಗೆ 20 ಟಿಎಂಸಿ ಸಂಸದರ ಪತ್ರ ; ಪ್ರತ್ಯೇಕ ಪಕ್ಷ ರಚಿಸುವ ಸಾಧ್ಯತೆ ; ಎನ್‌ಡಿಎ ಒಕ್ಕೂಟ ಸೇರಲು ಸಜ್ಜು !

ನವದೆಹಲಿ: ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದಲ್ಲಿ ಭಾರಿ ರಾಜಕೀಯ ಭೂಕಂಪ ಸಂಭವಿಸಿದೆ.  ಟಿಎಂಸಿ ಪಕ್ಷದ 20ಕ್ಕೂ ಹೆಚ್ಚು ಲೋಕಸಭಾ ಸದಸ್ಯರು ಸ್ಪೀಕರ್ ಓಂ ಬಿರ್ಲಾ ಅವರಿಗೆ ಪತ್ರ ಬರೆದಿದ್ದು, ಲೋಕಸಭೆಯಲ್ಲಿ ಟಿಎಂಸಿಯ ಪ್ರತ್ಯೇಕ ಬಣವೊಂದು ಶೀಘ್ರದಲ್ಲೇ ಅಸ್ತಿತ್ವಕ್ಕೆ ಬರಲಿದ್ದು, ಸೂಕ್ತ ಸಮಯದಲ್ಲಿ ಅಂತಿಮ ನಿರ್ಧಾರ ಪ್ರಕಟವಾಗಲಿದೆ ಎಂದು ಮೂಲಗಳು ತಿಳಿಸಿವೆ. ಪಕ್ಷದೊಳಗಿನ ಭಿನ್ನಮತ … Continued

ಸಂಸತ್ತಿನಲ್ಲಿ ಟಿಎಂಸಿಗೆ ಮೊದಲ ಆಘಾತ: ರಾಜ್ಯಸಭಾ ಸ್ಥಾನ-ಪಕ್ಷಕ್ಕೆ ಹಿರಿಯ ನಾಯಕ ಸುಖೇಂದು ಶೇಖರ ರಾಯ್ ರಾಜೀನಾಮೆ !

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷಕ್ಕೆ ಸಂಸತ್ತಿನಲ್ಲಿ ಮೊದಲ ದೊಡ್ಡ ಹಿನ್ನಡೆಯಾಗಿದೆ. ಪಕ್ಷದ ಹಿರಿಯ ರಾಜ್ಯಸಭಾ ಸಂಸದ ಸುಖೇಂದು ಶೇಖರ ರಾಯ್ ಅವರು ಸೋಮವಾರ ತಮ್ಮ ರಾಜ್ಯಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಲ್ಲದೆ, ಟಿಎಂಸಿ ಪಕ್ಷವನ್ನೂ ತೊರೆದಿದ್ದಾರೆ. ಪಶ್ಚಿಮ ಬಂಗಾಳದ ಬಹುಪಾಲು ಟಿಎಂಸಿ ಶಾಸಕರು ಬಂಡಾಯವೆದ್ದಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಪಕ್ಷವು … Continued