ಮಮತಾ ಬ್ಯಾನರ್ಜಿ ಹಣೆಗೆ “ದೊಡ್ಡ ಗಾಯ”: ತೃಣಮೂಲ ಕಾಂಗ್ರೆಸ್

ನವದೆಹಲಿ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ದೊಡ್ಡ ಗಾಯವಾಗಿದೆ ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ತಿಳಿಸಿದೆ. ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ಮಮತಾ ಬ್ಯಾನರ್ಜಿ ಅವರ ಹಣೆಯ ಮಧ್ಯದಲ್ಲಿ ಆಳವಾದ ಗಾಯವಾಗಿರುವುದು ಮತ್ತು ಮುಖದ ಮೇಲೆ ರಕ್ತ ಬಿದ್ದಿರುವ ಫೋಟೋಗಳನ್ನು ತೃಣಮೂಲ ಕಾಂಗ್ರೆಸ್ ಹಂಚಿಕೊಂಡಿದೆ. ಆದರೆ … Continued

ತನ್ನ ಸಹೋದರನ ಜೊತೆ ಸಂಬಂಧ ಕಡಿದುಕೊಂಡ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ…! ಕಾರಣವೇನೆಂದರೆ…

ಕೋಲ್ಕತ್ತಾ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹೌರಾ ಲೋಕಸಭಾ ಕ್ಷೇತ್ರಕ್ಕೆ ಪ್ರಸೂನ್ ಬ್ಯಾನರ್ಜಿ ಅವರಿಗೆ ಪುನಃ ಟಿಕೆಟ್‌ ನೀಡಿರುವ ತೃಣಮೂಲ ಕಾಂಗ್ರೆಸ್‌ನ ನಿರ್ಧಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ತಮ್ಮ ಸಹೋದರ ಬಾಬುನ್ ಬ್ಯಾನರ್ಜಿ ಅವರ ಜೊತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಹೇಳಿದ್ದಾರೆ. “ನನ್ನ ಕುಟುಂಬ ಮತ್ತು ನಾನು ಬಬುನ್ ಜೊತೆಗಿನ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಲೋಕಸಭೆ ಚುನಾವಣೆ : ಬಂಗಾಳದಲ್ಲಿ ಇಂಡಿಯಾ ಮೈತ್ರಿಕೂಟವಿಲ್ಲ ; ಎಲ್ಲ 42 ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರು ಘೋಷಿಸಿದ ಟಿಎಂಸಿ, ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣಗೆ ಟಿಕೆಟ್‌

ಕೋಲ್ಕತ್ತಾ: ಮುಂಬರುವ ಲೋಕಸಭೆ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ರಾಜ್ಯದ ಎಲ್ಲ 42 ಲೋಕಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಭಾನುವಾರ ಪ್ರಕಟಿಸಿದೆ. ಬ್ರೀಗ್ರೇಡ್ ಗ್ರೌಂಡ್ ಸಮಾವೇಶದಲ್ಲಿ ಡೈಮಂಡ್ ಹಾರ್ಬರ್ ಕ್ಷೇತ್ರದಿಂದ ಸ್ಪರ್ಧಿಸಲಿರುವ ಅಭಿಷೇಕ್ ಬ್ಯಾನರ್ಜಿ ಅವರು ಹೆಸರುಗಳನ್ನು ಪ್ರಕಟಿಸಿದರು. ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಬಹರಂಪುರದಿಂದ ತೃಣಮೂಲ ಅಭ್ಯರ್ಥಿಯಾಗಿ ಲೋಕಸಭೆ … Continued

ಪಶ್ಚಿಮ ಬಂಗಾಳದಲ್ಲಿ ಇದೇ ಮೊದಲ ಬಾರಿಗೆ ರಾಮನವಮಿಗೆ ʼಸಾರ್ವತ್ರಿಕ ರಜೆʼ ಘೋಷಣೆ; ಇದ್ಯಾವ ನಾಟಕ ಎಂದ ಬಿಜೆಪಿ

ಕೋಲ್ಕತ್ತಾ: ಈ ವರ್ಷದ ಏಪ್ರಿಲ್ 18ರ ರಾಮ ನವಮಿಯನ್ನು ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ರಜೆ ಎಂದು ಘೋಷಿಸಲಾಗಿದೆ. ದುರ್ಗಾ ಪೂಜೆ, ಕಾಳಿ ಪೂಜೆ ಮತ್ತು ಸರಸ್ವತಿ ಪೂಜೆ ಇವು ಪಶ್ಚಿಮ ಬಂಗಾಳದ ಪ್ರಮುಖ ಹಬ್ಬಗಳು. ರಾಮ ನವಮಿಗೆ ಇದೇ ಮೊದಲ ರಾಜ್ಯದಲ್ಲಿ ಸಾರ್ವಜನಿಕ ರಜೆ ಘೋಷಿಸಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಮಮತಾ ಬ್ಯಾನರ್ಜಿಯವರ ತೃಣಮೂಲ … Continued

ಈಗ ಚುನಾವಣೆ ನಡೆದರೆ ಎನ್‌ಡಿಎ ಎಷ್ಟು ಗೆಲ್ಲಲಿದೆ..? ಇಂಡಿಯಾ ಮೈತ್ರಿಕೂಟ ಗೆಲ್ಲುವುದೆಷ್ಟು..? : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್ ಹೇಳಿದ್ದೇನೆಂದರೆ…

ನವದೆಹಲಿ: ಈಗಲೇ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 378 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಮಂಗಳವಾರ (ಮಾರ್ಚ್ 5) ಹೇಳಿದೆ. ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಬ್ಲಾಕ್ (ತೃಣಮೂಲ ಕಾಂಗ್ರೆಸ್ ಇಲ್ಲದೆ) 98 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಮಮತಾ … Continued

ತೃಣಮೂಲ ಸಂಸದೆ ಮಿಮಿ ಚಕ್ರವರ್ತಿ ರಾಜೀನಾಮೆ ಘೋಷಣೆ : ಮಮತಾ ಬ್ಯಾನರ್ಜಿಗೆ ಸಲ್ಲಿಕೆ

ಕೋಲ್ಕತ್ತಾ: ನಟಿಮತ್ತು ತೃಣಮೂಲ ಕಾಂಗ್ರೆಸ್ ಸಂಸದೆ ಮಿಮಿ ಚಕ್ರವರ್ತಿ ಅವರು ತಮ್ಮ ಕ್ಷೇತ್ರದ ಸ್ಥಳೀಯ ಪಕ್ಷದ ನಾಯಕತ್ವದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಮಿಮಿ ಚಕ್ರವರ್ತಿ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ, ಆದರೆ ಅದನ್ನು ಇನ್ನೂ ಅಂಗೀಕರಿಸಲಾಗಿಲ್ಲ. ಆದಾಗ್ಯೂ, ಅವರು … Continued

ಹಿಂದಿ ಭಾಷಿಕ ರಾಜ್ಯಗಳಲ್ಲಿ ಕಾಂಗ್ರೆಸ್‌ 40 ಸ್ಥಾನ ಗೆಲ್ಲುವುದು ಅನುಮಾನ: ಮಮತಾ ಬ್ಯಾನರ್ಜಿ

ಕೋಲ್ಕತ್ತ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಿಂದಿ ಭಾಷಿಕ ರಾಜ್ಯಗಳಲ್ಲಿ ಬಿಜೆಪಿ ಎದುರು ಕಾಂಗ್ರೆಸ್‌ 40 ಸ್ಥಾನಗಳನ್ನು ಪಡೆಯುವ ಬಗ್ಗೆ ಅನುಮಾನವಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳಕ್ಕೆ ಉಳಿಸಿಕೊಂಡಿರುವ ಬಾಕಿಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ನಡೆದ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಂಗಾಳದ ಮೂಲಕ ಸಂಚರಿಸುವ ಭಾರತ … Continued

ಕೋಲ್ಕತ್ತಾಗೆ ತೆರಳುತ್ತಿದ್ದಾಗ ಕಾರು ಅಪಘಾತದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದೆ. ಪೂರ್ವ ಬುರ್ದ್ವಾನ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮ ಮುಗಿಸಿ ಅವರು ಕೋಲ್ಕತ್ತಾಗೆ ಹಿಂತಿರುಗುತ್ತಿದ್ದರು. ಅಪಘಾತದಲ್ಲಿ ಅವರ ತಲೆಗೆ ಸಣ್ಣಪುಟ್ಟ ಗಾಯವಾಗಿದೆ. ವರದಿಗಳ ಪ್ರಕಾರ, ಮತ್ತೊಂದು ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮಮತಾ ಬ್ಯಾನರ್ಜಿ ಕಾರು ಚಾಲಕ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದಾನೆ. ಹಠಾತ್ … Continued

ಇಂಡಿಯಾ ಮೈತ್ರಿಕೂಟದ ಅಧ್ಯಕ್ಷರಾಗಿ ಖರ್ಗೆ ನೇಮಕ : ಸಂಚಾಲಕನ ಹುದ್ದೆ ತಿರಸ್ಕರಿಸಿದ ನಿತೀಶಕುಮಾರ; ವರದಿ

ನವದೆಹಲಿ: ಸರಣಿ ಸಭೆಗಳು ಮತ್ತು ಚರ್ಚೆಗಳ ನಂತರ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶನಿವಾರ ವಿಪಕ್ಷಗಳ ಮೈತ್ರಿಕೂಟವಾದ ಇಂಡಿಯಾ ಬ್ಲಾಕ್‌ನ ಅಧ್ಯಕ್ಷರನ್ನಾಗಿ ಹೆಸರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧಿಕೃತ ಘೋಷಣೆಗೆ ಕಾಯಬೇಕಿದೆ ಎಂದು ಕೆಲವು ರಾಷ್ಟ್ರೀಯ ಸುದ್ದಿ ಮಧ್ಯಮಗಳು ವರದಿ ಮಾಡಿವೆ. ಸೀಟು ಹಂಚಿಕೆ ಕಾರ್ಯಸೂಚಿ, “ಭಾರತ್ ಜೋಡೊ ನ್ಯಾಯ … Continued