ಹೈದರಾಬಾದ್‌ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್‌ ಬೆದರಿಕೆ : ಬೆಂಗಳೂರಿನ ಟೆಕ್ಕಿ ಬಂಧನ

ಹೈದರಾಬಾದ್‌ : ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಮೇಲ್ ಕಳುಹಿಸಿದ್ದಕ್ಕಾಗಿ ಬೆಂಗಳೂರಿನ 34 ವರ್ಷದ ಮಾಜಿ ಐಟಿ ಉದ್ಯೋಗಿಯನ್ನು ಸೈಬರಾಬಾದ್ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಬಿಹಾರ ಮೂಲದ ಆರೋಪಿ ವೈಭವ ತಿವಾರಿ ಫೆಬ್ರವರಿ 15 ಮತ್ತು 18 ರಂದು ಆರ್‌ಜಿಐ ವಿಮಾನ ನಿಲ್ದಾಣಕ್ಕೆ ಎರಡು ಬೆದರಿಕೆ ಇ ಮೇಲ್‌ಗಳನ್ನು ಕಳುಹಿಸಿದ್ದಾನೆ. … Continued

ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಓರ್ವನ ಬಂಧನ

ಬೆಂಗಳೂರು : ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕ ಹೊಂದಿರುವ ಶಂಕೆ ಮೇರೆಗೆ ಬೆಂಗಳೂರಿನಲ್ಲಿ ಶಂಕಿತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ಐಎಸ್ ​ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಆರೀಫ್​ ಎಂಬಾತನನ್ನು ಬಂಧಿಸಿದ್ದಾರೆ. ಶಂಕಿತ ಉಗ್ರ ಆರೀಫ್ ಅಲ್​ಖೈದಾ ಉಗ್ರ ಸಂಘಟನೆ ಜೊತೆ ಸಂಪರ್ಕದಲ್ಲಿದ್ದ ಎಂಬ ಶಂಕಿಸಲಾಗಿದೆ. … Continued

ಖ್ಯಾತ ಟೇಬಲ್ ಟೆನ್ನಿಸ್ ಆಟಗಾರ್ತಿಗೆ ಸಾಮಾಜಿಕ ಜಾಲ ತಾಣದಲ್ಲಿ ಕಿರುಕುಳ: ಆರೋಪಿ ಬಂಧನ

ಹೈದರಾಬಾದ್: ಖ್ಯಾತ ಟೇಬಲ್​ ಟೆನ್ನಿಸ್​ ಆಟಗಾರ್ತಿ ನೈನಾ ಜೈಸ್ವಾಲ್​ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ಹೈದರಾಬಾದ್​ನ ಸೈಬರ್​ ಕ್ರೈಂ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಶ್ರೀಕಾಂತ್​ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಟ್ವಿಟರ್‍ ಮತ್ತು ಇನ್‌ಸ್ಟಾಗ್ರಾಂನಲ್ಲಿ ನೈನಾ ಅವರಿಗೆ ಅಶ್ಲೀಲವಾಗಿ ಸಂದೇಶಗಳನ್ನು ಕಳುಹಿಸುತ್ತಿದ್ದ. ನೈನಾ ಹಲವು ಬಾರಿ ಈತನಿಗೆ ಎಚ್ಚರಿಕೆ ನೀಡಿದ ಹೊರತಾಗಿಯೂ … Continued