ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಮಂಗಳೂರು : ಕರ್ಣಾಟಕ ಬ್ಯಾಂಕ್ ಹಿರಿಯ ಅಧಿಕಾರಿ ಶವವಾಗಿ ಪತ್ತೆ

ಮಂಗಳೂರು: ಚಾಕುವಿನಿಂದ ಇರಿದುಕೊಂಡು ಕರ್ನಾಟಕ ಬ್ಯಾಂಕಿನ ಹಿರಿಯ ಅಧಿಕಾರಿಯೊಬ್ಬರು ಬೋಂದೆಲ್ ನಲ್ಲಿರುವ ಅಪಾರ್ಟ್ ಮೆಂಟಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾದ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ನಗರದ ಪಂಪ್‌ವೆಲ್‌ನಲ್ಲಿರುವ ಕರ್ಣಾಟಕ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಚೀಫ್ ಕಂಪ್ಲೇಂಟ್ ಆಫೀಸರ್(ಸಿಸಿಒ) ಆಗಿರುವ ವಾದಿರಾಜ ಕೆ.ಎ.(51) ಎಂಬವರು ಮೃತಪಟ್ಟ ವ್ಯಕ್ತಿ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು … Continued

ವಿಎಚ್‌ಪಿ ಮುಖಂಡನ ಮೇಲೆ ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ ಪಂಪ್‌ವೆಲ್ ವಿರುದ್ಧ ಮಂಗಳೂರು ನಗರ ದಕ್ಷಿಣ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಮಂಗಳೂರಿನ ಮಂಗಳಾದೇವಿ ಜಾತ್ರೆಯಲ್ಲಿ ಭಗವಾಧ್ವಜ ಕಟ್ಟಿರುವ ಹಿಂದೂಗಳ ಮಳಿಗೆಗಳಲ್ಲಿ ಮಾತ್ರವೇ ಹಿಂದೂ ಗ್ರಾಹಕರು ವ್ಯಾಪಾರ ಮಾಡಬೇಕು … Continued

ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಮಂಗಳೂರು ಅಭಿವೃದ್ಧಿ ಪ್ರಾಧಿಕಾರ ಸಿಬ್ಬಂದಿ

ಮಂಗಳೂರು: ನೌಕರನೊಬ್ಬ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಕಚೇರಿಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ನಡೆದಿದೆ. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿ ಇಲ್ಲಿನ ಮುಡಾ ಕಚೇರಿ ಉರ್ವದ ಸ್ಟೋರ್ ರೂಂನಲ್ಲಿ ಜೂನ್ 2 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಪಡೀಲ ಮೂಲದ ಕೀರ್ತನ್ (30) ಎಂದು ಗುರುತಿಸಲಾಗಿದೆ. ಅವರು ಮಂಗಳೂರು … Continued

ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಹಾಡಹಗಲೇ ಚೂರಿಯಿಂದ ಇರಿದು ಸಿಬ್ಬಂದಿ ಕೊಲೆ

ಮಂಗಳೂರು : ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಶುಕ್ರವಾರ ನಡೆದ ವರದಿಯಾಗಿದೆ. ಕೊಲೆಯಾದ ಸಿಬ್ಬಂದಿಯನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಎಂದು ಹೇಳಲಾಗಿದೆ. ಮಧ್ಯಾಹ್ನ ಮುಸುಕು ಹಾಕಿಕೊಂಡು ಬಂದಿದ್ದ ವ್ಯಕ್ತಿ ಈ ಕೃತ್ಯ ಎಸಗಿದ್ದು, ಜ್ಯುವೆಲ್ಲರಿ ಮಾಲೀಕ ಊಟಕ್ಕೆಂದು ತೆರಳಿದ್ದಾಗ ಮುಸಕುಕುಧಾರಿ … Continued

ಮಂಗಳೂರು: ಅಪಾರ್ಟ್ಮೆಂಟಿನಲ್ಲಿ ದಂಪತಿ ಶವವಾಗಿ ಪತ್ತೆ

ಮಂಗಳೂರು: ಮಂಗಳೂರಿನ ಬಿಜೈನ ಅಪಾರ್ಟ್‌ಮೆಂಟ್‌ ಒಂದರಲ್ಲಿ ದಂಪತಿ ಶವವಾಗಿ ಪತ್ತೆಯಾಗಿದೆ. ಮೃತರನ್ನು ಬಿಜೈ ನಿವಾಸಿಗಳಾದ ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದರು. ಇವರನ್ನು ನೋಡಿಕೊಳ್ಳಲು ರಾತ್ರಿ ಮತ್ತು ಬೆಳಿಗ್ಗೆ ಹೊತ್ತಿನಲ್ಲಿ ಇಬ್ಬರು ಹೋಮ್ ನರ್ಸ್‌ಗಳು ಬಂದು ಹೋಗುತ್ತಿದ್ದರು. … Continued

ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ

ನವದೆಹಲಿ: ದೆಹಲಿಯ ಹೋಟೆಲ್‌ನಿಂದ ಬಿಲ್ ಪಾವತಿಸದೆ ಚೆಕ್ ಔಟ್ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ವಂಚನೆ ಘಟನೆಯ ಎರಡು ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದ್ದು, ಯುಎಇ ರಾಜಮನೆತನದ ಸದಸ್ಯನಂತೆ ಸೋಗು ಹಾಕಿಕೊಂಡು ನವದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ನಿಂದ 23.46 ಲಕ್ಷ … Continued

ಮಹಿಳಾ ಸಂವೇದನೆಯ ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್‌ ವಿಧಿವಶ

ಮಂಗಳೂರು: ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಹಾಗೂ ಮೇರು ಸಾಹಿತಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ತಮ್ಮ ಸಾಹಿತ್ಯಗಳಲ್ಲಿ ಮುಸ್ಲಿಂ ಸಮುದಾಯದ ಕಟ್ಟರ್‌ ಸಂಪ್ರದಾಯಗಳನ್ನು ಬಲವಾಗಿ ಟೀಕಿಸುತ್ತಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಹಾಥಿಲ್‌ನಲ್ಲಿರುವ … Continued

ಮಂಗಳೂರು ಆಟೊ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ತಿರುವು ಪಡೆದುಕೊಂಡಿದ್ದು, ಇದೊಂದು ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ ಸೂದ್‌ ಭಾನುವಾರ ಟ್ವೀಟ್‌ ಮಾಡಿದ್ದಾರೆ. ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಾಗಿ ಸಂಭವಿಸಿದ್ದಲ್ಲ. ಗಂಭೀರ ಹಾನಿಯನ್ನು ಉಂಟುಮಾಡುವ ಉದ್ದೇಶದಿಂದ ನಡೆದ ಭಯೋತ್ಪಾದನೆಯ ಕೃತ್ಯವಾಗಿದೆ. ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ … Continued

ಮಂಗಳೂರು: ರಿಕ್ಷಾದಲ್ಲಿ ನಿಗೂಢ ಬೆಂಕಿ ಅವಘಡ-ಇಬ್ಬರಿಗೆ ಗಾಯ

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟದ ರೀತಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯಗಳಾಗಿವೆ. ಆಟೋದಲ್ಲಿ ನಿಗೂಢ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟ ಸಂಭವಿಸಿದೆಯೇ ಎಂಬುದು ದೃಢಪಡಬೇಕಿದೆ. ಘಟನೆಯಲ್ಲಿ ಪ್ರಯಾಣಿಕ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆಟೋ ಒಳಭಾಗ ಸುಟ್ಟು ಹೋಗಿದೆ … Continued