ದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ಗೆ 23 ಲಕ್ಷ ರೂ. ವಂಚನೆ: ಮಂಗಳೂರಿನಲ್ಲಿ ಆರೋಪಿ ಬಂಧನ

ನವದೆಹಲಿ: ದೆಹಲಿಯ ಹೋಟೆಲ್‌ನಿಂದ ಬಿಲ್ ಪಾವತಿಸದೆ ಚೆಕ್ ಔಟ್ ಮಾಡಿ ಪರಾರಿಯಾಗಿದ್ದ ವ್ಯಕ್ತಿಯನ್ನು ವಂಚನೆ ಘಟನೆಯ ಎರಡು ತಿಂಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ ಮಹಮದ್ ಷರೀಫ್ (41) ಎಂದು ಗುರುತಿಸಲಾಗಿದ್ದು, ಯುಎಇ ರಾಜಮನೆತನದ ಸದಸ್ಯನಂತೆ ಸೋಗು ಹಾಕಿಕೊಂಡು ನವದೆಹಲಿಯ ಲೀಲಾ ಪ್ಯಾಲೇಸ್ ಹೋಟೆಲ್‌ನಿಂದ 23.46 ಲಕ್ಷ … Continued

ಮಹಿಳಾ ಸಂವೇದನೆಯ ಕನ್ನಡದ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್‌ ವಿಧಿವಶ

ಮಂಗಳೂರು: ಕನ್ನಡದ ಪ್ರಮುಖ ಕಾದಂಬರಿಗಾರ್ತಿ ಹಾಗೂ ಮೇರು ಸಾಹಿತಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೇರಳದ ಕಾಸರಗೋಡು ಜಿಲ್ಲೆಯವರಾದ ಸಾರಾ ಅಬೂಬಕ್ಕರ್ ತಮ್ಮ ಸಾಹಿತ್ಯಗಳಲ್ಲಿ ಮುಸ್ಲಿಂ ಸಮುದಾಯದ ಕಟ್ಟರ್‌ ಸಂಪ್ರದಾಯಗಳನ್ನು ಬಲವಾಗಿ ಟೀಕಿಸುತ್ತಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಹಾಥಿಲ್‌ನಲ್ಲಿರುವ … Continued

ಮಂಗಳೂರು ಆಟೊ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ತಿರುವು ಪಡೆದುಕೊಂಡಿದ್ದು, ಇದೊಂದು ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ ಸೂದ್‌ ಭಾನುವಾರ ಟ್ವೀಟ್‌ ಮಾಡಿದ್ದಾರೆ. ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಾಗಿ ಸಂಭವಿಸಿದ್ದಲ್ಲ. ಗಂಭೀರ ಹಾನಿಯನ್ನು ಉಂಟುಮಾಡುವ ಉದ್ದೇಶದಿಂದ ನಡೆದ ಭಯೋತ್ಪಾದನೆಯ ಕೃತ್ಯವಾಗಿದೆ. ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ … Continued

ಮಂಗಳೂರು: ರಿಕ್ಷಾದಲ್ಲಿ ನಿಗೂಢ ಬೆಂಕಿ ಅವಘಡ-ಇಬ್ಬರಿಗೆ ಗಾಯ

ಮಂಗಳೂರು: ನಗರದ ಕಂಕನಾಡಿ ಠಾಣಾ ವ್ಯಾಪ್ತಿಯ ನಾಗುರಿಯಲ್ಲಿ ಶನಿವಾರ ಸಂಜೆ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸ್ಫೋಟದ ರೀತಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರಿಗೆ ಗಾಯಗಳಾಗಿವೆ. ಆಟೋದಲ್ಲಿ ನಿಗೂಢ ರೀತಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಫೋಟ ಸಂಭವಿಸಿದೆಯೇ ಎಂಬುದು ದೃಢಪಡಬೇಕಿದೆ. ಘಟನೆಯಲ್ಲಿ ಪ್ರಯಾಣಿಕ ಮತ್ತು ಆಟೋ ರಿಕ್ಷಾ ಚಾಲಕನಿಗೆ ಸುಟ್ಟ ಗಾಯಗಳಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಆಟೋ ಒಳಭಾಗ ಸುಟ್ಟು ಹೋಗಿದೆ … Continued

ಸಾರ್ವಜನಿಕರ ವ್ಯಾಪಕ ವಿರೋಧಕ್ಕೆ ಮಣಿದ ಜಿಲ್ಲಾಡಳಿತ: ದ್ವಿಚಕ್ರ ವಾಹನದ ಹಿಂಬದಿ ಸವಾರರಿಗೆ ನಿರ್ಬಂಧದ ಆದೇಶ ರದ್ದು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿಯ ಪುರುಷ ಸವಾರರಿಗೆ ನಿರ್ಬಂಧ ವಿಧಿಸಿ ಜಾರಿಗೆ ಮುಂದಾಗಿದ್ದ ಗುರುವಾರ ಬೆಳಿಗ್ಗೆಯ ಆದೇಶವನ್ನು ಸಂಜೆ ಜಿಲ್ಲಾಡಳಿತ ಹಿಂತೆಗೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯ ವೇಳೆಯಲ್ಲಿ ಅಪರಾಧ ಚಟುವಟಿಕೆ ತಡೆಗಟ್ಟುವ ನಿಟ್ಟಿನಲ್ಲಿ ಬೈಕ್ ಹಿಂಬದಿಯ ಸಾವರರಿಗೆ ಪ್ರಯಾಣ ನಿರ್ಬಂಧ ವಿಧಿಸಿ ಆದೇಶಿಸಲಾಗಿತ್ತು. ಈ ಆದೇಶಕ್ಕೆ ಸಾರ್ವಜನಿಕರಿಂದ ತೀವ್ರ … Continued

ಪ್ರವೀಣ್ ನೆಟ್ಟಾರ ಹತ್ಯೆ ಘಟನೆ ಮಾಸುವ ಮುನ್ನವೇ ದಕ್ಷಿಣ ಕನ್ನಡದಲ್ಲಿ ಮತ್ತೊಬ್ಬ ಯುವಕನ ಹತ್ಯೆ

ಮಂಗಳೂರು: ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಂಗಳೂರಿನಲ್ಲಿ ಮತ್ತೊಂದು ಹತ್ಯೆ ನಡೆದಿದೆ. ಗುರುವಾರ ರಾತ್ರಿ 8 ಗಂಟೆಗೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ. ಮಂಗಳೂರು ನಗರದ ಹೊರವಲಯದಲ್ಲಿರುವ ಸುರತ್ಕಲ್​ನ ಎಸ್.ಕೆ.ಮೊಬೈಲ್ಸ್​ ಅಂಗಡಿ ಬಳಿ ಮಹಮ್ಮದ್‌ ಫಾಜಿಲ್  (23) ಎಂಬವರ ಮೇಲೆ ಮಾರಣಾಂತಿಕ … Continued

ಶವವಾಗಿ ಪತ್ತೆಯಾದ ತಲಕಳ ಧರ್ಮ ಚಾವಡಿಯ ಸ್ವಾಮೀಜಿ

ಮಂಗಳೂರು: ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ (51) ತಮ್ಮ ಆಶ್ರಮ ತಲಕಳ ಧರ್ಮ ಚಾವಡಿಯಲ್ಲಿ ಶುಕ್ರವಾರ (ಜುಲೈ 22) ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸನ್ಯಾಸ ಸ್ವೀಕರಿಸುವ ಮೊದಲು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಪೂರ್ವಾಶ್ರಮದಲ್ಲಿ ದೇವಿಪ್ರಸಾದ್ ಶೆಟ್ಟಿ ಹೆಸರಿನಿಂದ ಗುರುತಿಸಲ್ಪಟ್ಟಿದ್ದು, ಅವರಿಗೆ ಮದುವೆಯಾಗಿದ್ದು, ಪತ್ನಿ ಹಾಗೂ ಮಗಳಿದ್ದಾಳೆ. ನಂತರ … Continued

ಮಂಗಳೂರು: ಮೂವರು ಮಕ್ಕಳನ್ನು ಬಾವಿಗೆ ನೂಕಿ ಸಾಯಿಸಿದ ತಂದೆ, ಪತ್ನಿಯನ್ನೂ ನೂಕಿ ಹತ್ಯೆಗೆ ಯತ್ನ

ಮಂಗಳೂರು: ತಂದೆಯೊಬ್ಬ ಶಾಲೆ ಮುಗಿಸಿ ಮನೆಗೆ ಬಂದ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಸಾಯಿಸಿದ ನಂತರ ಹಾಗೂ ಪತ್ನಿಯೊಂದಿಗೆ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ. ಮೃತ ಮಕ್ಕಳನ್ನು ರಶ್ಮಿತಾ (13), ಉದಯ (11), ದಕ್ಷಿತ್ … Continued

ಮಂಗಳೂರು: ಕೊಲೆ ಆರೋಪಿಗಳ ಕಾಲಿಗೆ ಪೊಲೀಸರಿಂದ ಗುಂಡೇಟು

ಮಂಗಳೂರು: ರೌಡಿ ಶೀಟರ್ ರಾಜಾ ಅಲಿಯಾಸ್ ರಾಘವೇಂದ್ರ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ಮೇಲೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ರಾಜಾ ಕೊಲೆ ಆರೋಪಿಗಳಾದ ಅರ್ಜುನ ಮೂಡುಶೆಡ್ಡೆ ಮತ್ತು ಮನೋಜ ಅವರನ್ನು ಬಂಧಿಸಲು ಠಾಣಾ ವ್ಯಾಪ್ತಿಯ ಗ್ಲೋಬಲ್ ಹೆರಿಟೇಜ್ ಲೇಔಟ್ ಬಳಿ ತೆರಳಿದಾಗ ಆರೋಪಿಗಳು ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ, ಈ ಸಂದರ್ಭದಲ್ಲಿ ಆತ್ಮರಕ್ಷಣೆಗೆ ಪೊಲೀಸರು … Continued

ಹೈಕೋರ್ಟ್‌ ಆದೇಶವಿದ್ದರೂ ಇಂದು ಮತ್ತೆ ಮಂಗಳೂರಿನಲ್ಲಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದ 12 ವಿದ್ಯಾರ್ಥಿನಿಯರು…!

ಮಂಗಳೂರು:ಹಿಜಾಬ್ ಧರಿಸಿ ಶಾಲಾ- ಕಾಲೇಜಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಈಗಾಗಲೇ ತೀರ್ಪು ನೀಡಿದೆ. ಆದಾಗ್ಯೂ ಹಂಪನಕಟ್ಟೆಯಲ್ಲಿರುವ ಮಂಗಳೂರು ವಿಶ್ವ ವಿದ್ಯಾಲಯ ಕಾಲೇಜಿನಲ್ಲಿ 12 ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಮೇ 26ಕ್ಕೆ ಹಿಜಾಬ್ ವಿರೋಧಿಸಿ ಕಾಲೇಜು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದರು. ಆ ಬಳಿಕ ಹಿಜಾಬ್​ಗೆ ಅವಕಾಶವಿಲ್ಲ ಎಂದು ಕಾಲೇಜು ಆಡಳಿತ ಮಂಡಳಿ ಸ್ಪಷ್ಟಪಡಿಸಿತ್ತು. ಆದರೂ … Continued