ಮಂಗಳೂರು | ಸುಹಾಸ ಶೆಟ್ಟಿ ಕೊಲೆ ಪ್ರಕರಣ: 8 ಜನರ ಬಂಧನ

ಮಂಗಳೂರು: ಗುರುವಾರ ನಡೆದ ಸುಹಾಸ ಶೆಟ್ಟಿ ಕೊಲೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದ್ದು, ಅವರ ಹಿನ್ನೆಲೆ ಸೇರಿದಂತೆ ಇತರ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಅವರ ಹಿನ್ನೆಲೆ, ಘಟನೆಗೆ ಕಾರಣವಾದ ಅಂಶಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಅಬ್ದುಲ್ ಸಫ್ವಾನ್, ನಿಯಾಜ್, … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ನಾನು ಭಾರತವನ್ನು ದ್ವೇಷಿಸುತ್ತೇನೆ…; ಮಂಗಳೂರು ವೈದ್ಯೆಯ ದೇಶ ವಿರೋಧಿ ಪೋಸ್ಟ್‌ ; ದೂರು ದಾಖಲು ; ಕೆಲಸದಿಂದಲೇ ವಜಾ

ಮಂಗಳೂರು : ದಕ್ಷಿಣ ಕನ್ನಡದ ಮಂಗಳೂರಿನ ವೈದ್ಯೆಯೊಬ್ಬರು ದೇಶ ವಿರೋಧಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಹೆಚ್​ಆರ್ ಆಕೆಯ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಹಾಗೂ ಹೈಲ್ಯಾಂಡ್ ಆಸ್ಪತ್ರೆ ಆಕೆಯನ್ನು ವಜಾಗೊಳಿಸಿದೆ ಎಂದು ತಿಳಿದುಬಂದಿದೆ. ಮಂಗಳೂರಿನ ವೈದ್ಯೆ ಅಫೀಫಾ ಫಾತಿಮಾ ಎಂಬಾಕೆ ದೇಶ ವಿರೋಧಿ ಪೋಸ್ಟ್‌ ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ … Continued

ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ಪ್ರಚೋದನಕಾರಿ ಹೇಳಿಕೆ : ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್‌ ಐಆರ್‌

ಮಂಗಳೂರು : ಕಾಂಗ್ರೆಸ್ ನಾಯಕರೊಬ್ಬರು ನೀಡಿದ ದೂರಿನ ಹಿನ್ನಲೆಯಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ. ಮಾರ್ಚ್ 9 ರಂದು ವಿಎಚ್‌ಪಿ ಆಯೋಜಿಸಿದ್ದ ಕೊರಗಜ್ಜನ‌ ಆದಿಕ್ಷೇತ್ರಕ್ಕೆ ನಮ್ಮ‌ನಡೆ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡುವಾಗ, ಅನ್ಯ ಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ … Continued

ವೀಡಿಯೊ | ಮಂಗಳೂರು : ಕಾರು ಗುದ್ದಿಸಿ ಯುವಕನ ಕೊಲ್ಲಲು ಯತ್ನ, ಆದರೆ ಡಿಕ್ಕಿಯಾಗಿ ಕಾಂಪೌಂಡಿನಲ್ಲಿ ತಲೆಕೆಳಗಾಗಿ ನೇತಾಡಿದ ಮಹಿಳೆ…!

ಮಂಗಳೂರು : ಬಿಎಸ್‌ಎನ್‌ಎಲ್‌ (BSNL) ನಿವೃತ್ತ ಉದ್ಯೋಗಿಯೊಬ್ಬರು ತಮ್ಮ ಕಾರನ್ನು ತಮ್ಮ ಪಕ್ಕದವ ಮನೆಯವರ ಮೋಟರ್‌ ಬೈಕ್‌ಗೆ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆಸಿ ಕೊಲ್ಲು ಪ್ರಯತ್ನಕ್ಕೆ ಮುಂದಾಗಿದ್ದು, ಆದರೆ ಅದರ ಬದಲು ಸಮೀಪ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದಿದೆ. ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್​ ಮೇಲೆ ನೇತಾಡಿದ್ದಾರೆ. ಈ ಎದೆ ಝಲ್ ಎನಿಸುವಂಥ ಭೀಕರ … Continued

ಮಂಗಳೂರಲ್ಲಿ ವ್ಯಕ್ತಿ ಆತ್ಮಹತ್ಯೆ ; ಮಹಿಳಾ ಸಿಐಎಸ್ಎಫ್ ಅಧಿಕಾರಿ ವಿರುದ್ಧ ಶೋಷಣೆ ಆರೋಪ

ಮಂಗಳೂರು: ಸಿಐಎಸ್ಎಫ್ ಮಹಿಳಾ ಅಧಿಕಾರಿಯಿಂದ ವಂಚನೆ ಮತ್ತು ಶೋಷಣೆಗೆ ಒಳಗಾಗಿದ್ದೇನೆ ಎಂದು ಆರೋಪಿಸಿ ಉತ್ತರ ಪ್ರದೇಶದ ವ್ಯಕ್ತಿಯೊಬ್ಬರು ಮಂಗಳೂರಿನಲ್ಲಿ ಜೀವನವನ್ನೇ ಕೊನೆಗೊಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿಷೇಕ ಸಿಂಗ್ (40) ರಾವ್ ಮತ್ತು ರಾವ್ ಸರ್ಕಲ್ ಬಳಿಯ ಲಾಡ್ಜ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 20 ನಿಮಿಷಗಳ … Continued

ಮಂಗಳೂರು | ಕೋಟೆಕಾರು ಬ್ಯಾಂಕ್‌ ದರೋಡೆ : ಮೂವರು ಆರೋಪಿಗಳ ಬಂಧನ

ಮಂಗಳೂರು : ಮಂಗಳೂರು ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್ ಶಾಖೆಯಲ್ಲಿ ಎರಡು ದಿನಗಳ ಹಿಂದೆ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ತಮಿಳುನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ. ಮುಂಬೈ ಮೂಲದ ಗ್ಯಾಂಗ್ ನಿಂದ ದರೋಡೆಯಾಗಿದ್ದು, ತಮಿಳುನಾಡು ಮೂಲದ ಮುರುಗಂಡಿ ದೇವರ್, ಪ್ರಕಾಶ ಅಲಿಯಾಸ್ ಜೋಶ್ವಾ ,ಮನಿವೆನನ್ ಬಂಧಿತರು. ಬಂಧಿತರಿಂದ ಕಳ್ಳತನಕ್ಕೆ … Continued

ಮಂಗಳೂರು | ಬಂದೂಕು ತೋರಿಸಿ ಬ್ಯಾಂಕ್‌ ದರೋಡೆ ; ₹10 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿ

ಮಂಗಳೂರು : ಬೀದರಿನಲ್ಲಿ ಗುರುವಾರ ನಡೆದಿರುವ ಎಟಿಎಂ ವ್ಯಾನ್ ದರೋಡೆ ಪ್ರಕರಣ ನಡೆದ ಮಾರನೇ ದಿನ ಶುಕ್ರವಾರ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ತಾಲೂಕಿನ ಕೆ.ಸಿ ರೋಡ್ ಜಂಕ್ಷನ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಯಲ್ಲಿ ಹಾಡಹಾಗಲೇ ದರೋಡೆ ನಡೆದಿದ್ದು, ಬ್ಯಾಂಕ್ ಶಾಖೆಗೆ ನುಗ್ಗಿದ ಐವರು … Continued