ಮಂಗಳೂರು | ತಲಪಾಡಿಯಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು, ಹಲವರಿಗೆ ಗಾಯ

ಮಂಗಳೂರು : ಕೆ ಸಿರೋಡ್‌ ಸಮೀಪದ ತಲಪಾಡಿ ಟೋಲ್ ಗೇಟ್ ಬಳಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಬಸ್ ನಿಯಂತ್ರಣ ತಪ್ಪಿ ಬಸ್ ತಂಗುದಾಣ ಹಾಗೂ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬ ಐವರು … Continued

ಮಂಗಳೂರು | ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ

ಮಂಗಳೂರು : ಮಂಗಳೂರಿನ ಸೇಂಟ್ ಅಲೋಶಿಯಸ್ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಬಿಎ ವಿದ್ಯಾರ್ಥಿನಿ ರೆಮೋನಾ ಎವೆಟ್ ಪಿರೇರಾ, 170 ಗಂಟೆಗಳ ಭರತನಾಟ್ಯದ ನೃತ್ಯ ಪ್ರದರ್ಶಿಸಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್​ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ. ಇದು ವಿಶ್ವದಲ್ಲೇ ಮೊದಲನೆಯದು. ಈ ದಾಖಲೆಯ ಪ್ರಯಾಣವು ಜುಲೈ 21 ರಂದು ಆರಂಭವಾಯಿತು. ಜುಲೈ 21 ರಂದು … Continued

ಸಾಲ ಕೊಡಿಸುವುದಾಗಿ ಉದ್ಯಮಿಗಳಿಗೆ ಕೋಟ್ಯಂತರ ರೂ. ವಂಚನೆ ; ಮಂಗಳೂರಿನ ವಂಚಕ ಅರೆಸ್ಟ್‌ ; ತಪ್ಪಿಸಿಕೊಳ್ಳಲು ಮನೆಯಲ್ಲೇ ನಿಗೂಢ ಕೋಣೆ ಪತ್ತೆ…!

ಮಂಗಳೂರು : ಮಂಗಳೂರು ನಗರ ಪೊಲೀಸರು ಮಧ್ಯರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಜೆಪಿನಮೊಗರು ಪ್ರದೇಶದ ವಂಚಕ ರೋಹನ್ ಸಲ್ಡಾನಾ ಎಂಬಾತನನ್ನು ಬಂಧಿಸಿದ್ದಾರೆ. ಈತ ನಕಲಿ ಸಾಲ ಮತ್ತು ಭೂ ವ್ಯವಹಾರಗಳ ಮೂಲಕ ಶ್ರೀಮಂತ ಉದ್ಯಮಿಗಳಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಹೊತ್ತಿದ್ದಾನೆ. ಪೊಲೀಸ್ ಆಯುಕ್ತ ಸುಧೀರಕುಮಾರ ರೆಡ್ಡಿ ಮತ್ತು ಸಹಾಯಕ ಪೊಲೀಸ್ ಆಯುಕ್ತ ರವೀಶ ನಾಯಕ ನೇತೃತ್ವದ … Continued

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ: ಸಂಚಾರ ಬಂದ್

ಮಂಗಳೂರು: ಭಾರೀ ಮಳೆಯ ಪರಿಣಾಮ ದಕ್ಷಿಣ ಕನ್ನಡದ ಕಡಬ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಭಾರಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ನಡುವಿನ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭೂ ಕುಸಿತದಿಂದ ಬೆಂಗಳೂರಿನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಚಾರಕ್ಕೆ ಯಾವುದೇ ಅಡಚಣೆಗಳು ಎದುರಾಗಿಲ್ಲ. ಆದರೆ, ಮಂಗಳೂರಿನಿಂದ ಬೆಂಗಳೂರಿಗೆ … Continued

ಅಶೋಕ ಹಾಸ್ಯಗಾರ, ಬನಾರಿ, ಸಾಮಗ, ಸಿದ್ದಕಟ್ಟೆಗೆ ‘ಯಕ್ಷ ಮಂಗಳ ಪ್ರಶಸ್ತಿ’ ಪ್ರದಾನ

ಮಂಗಳೂರು : ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಯಕ್ಷಗಾನ ಸುಯೋಗವೆಂದರೆ ಎಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಡಾ.ಯು.ಆರ್ ರಾವ್ … Continued

ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶಕುಮಾರ ಎಂಬ ಮಗು ಬೀಡಿ ಮೋಟು ನುಂಗಿತ್ತು ಎಂದು ಹೇಳಲಾಗಿದೆ. ಶನಿವಾರ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ … Continued

ಭಾರಿ ಮಳೆಗೆ ಗುಡ್ಡ ಕುಸಿತ : ಶೃಂಗೇರಿ-ಮಂಗಳೂರು ರಸ್ತೆ ಸಂಚಾರ ಬಂದ್

ಚಿಕ್ಕಮಗಳೂರು : ರಾಜ್ಯದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತಗಳು ಸಂಭವಿಸುತ್ತಿವೆ. ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಬಳಿಯ ರಾಷ್ಟ್ರೀಯ ಹೆದ್ದಾರಿ 169ರ ಒಂದೇ ಸ್ಥಳದಲ್ಲಿ ಪದೇಪದೇ ಗುಡ್ಡ ಕುಸಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ಶೃಂಗೇರಿ-ಮಂಗಳೂರು ಮಾರ್ಗದ ರಸ್ತೆ ಸಂಚಾರವನ್ನು  ಬಂದ್ ಮಾಡಲಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ನೆಮ್ಮಾರು ಗ್ರಾಮದ ಬಳಿ ಗುಡ್ಡ … Continued

ಮಂಗಳೂರು | ಸೆಮಿನಾರ್ ತಪ್ಪಿಸಿಕೊಳ್ಳಲು ಆಸ್ಪತ್ರೆಗೆ ಬಾಂಬ್ ಬೆದರಿಕೆ ಕರೆ ಮಾಡಿ ಕೊನೆಗೂ ಸಿಕ್ಕಿಬಿದ್ದ ವೈದ್ಯಕೀಯ ವಿದ್ಯಾರ್ಥಿನಿ…!

 ಮಂಗಳೂರು : ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಬಾಂಬ್ ಬೆದರಿಕೆ ಪ್ರಕರಣ ನಾಟಕೀಯ ತಿರುವು ಪಡೆದುಕೊಂಡಿದ್ದು, ವಿಚಾರ ಸಂಕಿರಣವನ್ನು ತಪ್ಪಿಸಿಕೊಳ್ಳಲು ಹುಸಿ ಕರೆ ಮಾಡಿದ ಆರೋಪದ ಮೇಲೆ ಸ್ನಾತಕೋತ್ತರ (ಪಿಜಿ) ವೈದ್ಯಕೀಯ ವಿದ್ಯಾರ್ಥಿನಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಜೂನ್ 4 ರಂದು ಬೆಳಿಗ್ಗೆ 8:45 ರ ಸುಮಾರಿಗೆ ಆಸ್ಪತ್ರೆಯ ಆವರಣದಲ್ಲಿ ಬಾಂಬ್ ಇಡಲಾಗಿದೆ … Continued

ಮಂಗಳೂರು | ಗುಡ್ಡ ಕುಸಿದು ಅನಾಹುತ ; ಬಾಲಕಿ ಸೇರಿ ಇಬ್ಬರು ಸಾವು, ಅವಶೇಷಗಳಡಿ ಸಿಲುಕಿರುವ ಮೂವರ ರಕ್ಷಣೆಗೆ ಪ್ರಯತ್ನ

ಮಂಗಳೂರು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ದಕ್ಷಿಣ ಕನ್ನಡದ ಹಲvew ಅನಾಹುತಗಳು ಸಂಭವಿಸಿವೆ. ಕೆಲವೆಡೆ ಗುಡ್ಡ ಕುಸಿತ (Landslide) ಉಂಟಾಗಿದೆ. ಮಳೆ ಸಂಬಂಧಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದೇರಳಕಟ್ಟೆ ಮೊಂಟೆಪದವಿನ ಪಂಬದ ಹಿತ್ಲುವಿನಲ್ಲಿ ಗುಡ್ಡ ಕುಸಿದು ಮಣ್ಣು ಮನೆಗಳ ಮೇಲೆ ಬಿದ್ದಿದೆ. ಮನೆಗಳ ಅಡಿಯಲ್ಲಿ ಒಂದೇ ಕುಟುಂಬದ ಸಿಲುಕಿಕೊಂಡಿದ್ದಾರೆ. ಅವರಲ್ಲಿ ಓರ್ವ ಮಹಿಳೆ ಸಾವಿಗೀಡಾಗಿದ್ದಾರೆ. ಓರ್ವರನ್ನು … Continued

ದಕ್ಷಿಣ ಕನ್ನಡದಲ್ಲಿ ಸರಣಿ ಹತ್ಯೆ ; ಇಬ್ಬರು ಹಿರಿಯ ಪೊಲೀಸ್‌ ಅಧಿಕಾರಿಗಳ ಎತ್ತಂಗಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ (Dakshina Kannada) ನಡೆದ ಸಾಲು ಸಾಲು ಹತ್ಯೆಗಳ ಬಳಿಕ ಇಬ್ಬರು ಐಪಿಎಸ್‌ ಅಧಿಕಾರಿಗಳನ್ನು ಸರ್ಕಾರ ಎತ್ತಂಗಡಿ ಮಾಡಿದೆ. ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹಾಗೂ ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್.ಎನ್ ಅವರನ್ನು ಸರ್ಕಾರ ಏಕಕಾಲಕ್ಕೆ ವರ್ಗಾವಣೆ ಮಾಡಿ‌ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ … Continued