ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಉದ್ಯಮಿ ಮುಮ್ತಾಜ್ ಅಲಿ ಮೃತದೇಹ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮಾಜಿ ಶಾಸಕ ಮೊಯಿದ್ದೀನ್ ಬಾವಾ ಅವರ ಸಹೋದರ ಹಾಗೂ ಉದ್ಯಮಿ ಮುಮ್ತಾಜ್ ಅಲಿ ಅವರ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಸತತ 28 ಗಂಟೆಗಳ ಕಾರ್ಯಾಚರಣೆ ಬಳಿಕ ಮುಮ್ತಾಝ್ ಅಲಿ ಅವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಇಂದು ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಭಾನುವಾರ ಮುಂಜಾನೆ ಮೂರು ಗಂಟೆಗೆ ಸುಮಾರಿಗೆ ಮನೆಯಿಂದ ಹೋಗಿದ್ದ ಮುಮ್ತಾಜ್ … Continued

ಸಂಬಂಧಿಕರಿಗೆ ಲಿವರ್ ದಾನ ಮಾಡಿದ್ದ ಉಪನ್ಯಾಸಕಿ ಅಸ್ವಸ್ಥಗೊಂಡು ಸಾವು

ಮಂಗಳೂರು : ಸಂಬಂಧಿ ಮಹಿಳೆಯೊಬ್ಬರಿಗೆ ಲಿವರ್ ದಾನ ಮಾಡಿ ಅವರ ಜೀವ ಉಳಿಸಿದ್ದ ನಗರದ ಉಪನ್ಯಾಸಕಿಯೊಬ್ಬರು ಕೆಲದಿನಗಳ ನಂತರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಉಪನ್ಯಾಸಕಿಯಾಗಿದ್ದ ಅರ್ಚನಾ ಕಾಮತ್ (33) ಅವರು ತಮ್ಮ ಸಂಬಂಧಿಕರಿಗೆ ಪಿತ್ತಜನಕಾಂಗ (ಲಿವರ್‌) ದಾನ ಮಾಡಿದ ನಂತರ ಹಠಾತ್‌ ಆರೋಗದಯಲ್ಲಿ ಏರುಪೇರಾಗಿ ಮೃತಪಟ್ಟಿದ್ದಾರೆ. ತನ್ನ ಪತಿಯ ಸಂಬಂಧಿ ಮಹಿಳೆಗೆ ಅನಾರೋಗ್ಯ ಉಂಟಾಗಿದ್ದು, ಅವರಿಗೆ … Continued

ಹಳೆ ಮನೆ ಕೆಡವುತ್ತಿದ್ದಾಗ ಅವಘಡ : ಇಬ್ಬರು ಸಾವು

ಮಂಗಳೂರು: ಜೆಸಿಬಿಯಿಂದ ಹಳೆ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಅಲ್ಲಿಯೇ ಕೆಳಗೆ ನಿಂತು ನೋಡುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಮಂಗಳೂರಿನಲ್ಲಿ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಮನೆ ಮಾಲೀಕ ಜೇಮ್ಸ್ ಜತ್ತನ್ನ (56) ಹಾಗೂ ಅಡ್ವಿನ್ ಹೆರಾಲ್ಡ್ ಮಾಬೇನ್ (54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ … Continued

ಕನ್ನಡದ ಹಿರಿಯ ನಟಿ ಪದ್ಮಜಾ ರಾವ್ ​ಗೆ ಮೂರು ತಿಂಗಳು ಜೈಲು ಶಿಕ್ಷೆ

ಮಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಕನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಪದ್ಮಜಾ ರಾವ್ ಅವರಿಗೆ ನಗರದ ಎಂಟನೇ ಜೆಎಂಎಫ್‌ಸಿ ನ್ಯಾಯಾಲಯ ಮೂರು ತಿಂಗಳ ಸಾದಾ ಜೈಲು ಶಿಕ್ಷೆ ಹಾಗೂ 40.20 ಲಕ್ಷ ರೂ. ದಂಡ ವಿಧಿಸಿದೆ. ನಟಿ ಪದ್ಮಜಾ ರಾವ್ ಅವರು ಜೂನ್ 17, 2020 ರಂದು 40 ಲಕ್ಷ ರೂ.ಗಳ ಕೈ … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ಮಂಗಳೂರು | ಖೋಟಾ ನೋಟು ಚಲಾವಣೆ ಯತ್ನ : ನಾಲ್ವರ ಬಂಧನ

ಮಂಗಳೂರು : ಕೇರಳದಿಂದ ಮಂಗಳೂರು ನಗರಕ್ಕೆ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತಾರಾಜ್ಯ ಖೋಟಾ ನೋಟು ಚಲಾವಣೆ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಹಾಗೂ ಈ ಸಂಬಂಧ ನಾಲ್ವರನ್ನು ಬಂಧಿಸಿದ್ದು, ಅವರಿಂದ 500 ರೂಪಾಯಿ ಮುಖಬೆಲೆಯ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ 500 ರೂಪಾಯಿ ಮುಖಬೆಲೆಯ ಖೋಟಾ ನೋಟುಗಳನ್ನು … Continued

ಮಂಗಳೂರು : ವಿದ್ಯಾರ್ಥಿನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು ; ಎಮರ್ಜೆನ್ಸಿ ಸೈರನ್ ಹಾಕಿಕೊಂಡು ಬಸ್ಸನ್ನು ಆಸ್ಪತ್ರೆಗೆ ಒಯ್ದು ಜೀವ ಉಳಿಸಿದ ಚಾಲಕ…!

ಮಂಗಳೂರು : ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಬಸ್ ಚಾಲಕ ಬಸ್ಸನ್ನು ಅಂಬ್ಯುಲೆನ್ಸ್ ರೀತಿಯಲ್ಲಿ ಓಡಿಸಿ ಕೇವಲ ಆರು ನಿಮಿಷದಲ್ಲಿ ಆಸ್ಪತ್ರೆಗೆ ಕೊಂಡೊಯ್ದು ಆಕೆಯ ಪ್ರಾಣ ರಕ್ಷಣೆ ಮಾಡಿದ್ದಾರೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್​ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ ಹೆಸರಿನ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿಯೊಬ್ಬರಿಗೆ ಹಠಾತ್‌ … Continued

ಬೆಂಗಳೂರು-ಮಂಗಳೂರು ನಡುವೆ ಸಂಚರಿಸುವ ಎಲ್ಲ ರೈಲುಗಳು ಆಗಸ್ಟ್‌ 4ರ ವರೆಗೆ ರದ್ದು

ಮಂಗಳೂರು: ಎಡಕುಮೇರಿ ಹಾಗೂ ಕಡಗರವಳ್ಳಿ ನಡುವೆ ಸಂಭವಿಸಿದ ಭೂಕುಸಿತ ಹಿನ್ನೆಲೆಯಲ್ಲಿ ಆಗಸ್ಟ್‌ 4 ರವರೆಗೆ ಕರಾವಳಿಯಿಂದ ಬೆಂಗಳೂರಿಗೆ ತೆರಳುವ ಹಾಗೂ ಆಗಮಿಸುವ ರೈಲುಗಳನ್ನು ರದ್ದುಗೊಳಿಸಲಾಗಿದೆ. ಆಗಸ್ಟ್‌ 4ರವರೆಗೆ 14 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಬೆಂಗಳೂರು – ಕಣ್ಣೂರು ಎಕ್ಸ್‌ಪ್ರೆಸ್‌ ರೈಲನ್ನು ಜುಲೈ 29 ರಿಂದ ಆಗಸ್ಟ್‌ 3 ರವರೆಗೆ, ಕಣ್ಣೂರು – ಬೆಂಗಳೂರು ಎಕ್ಸ್‌ಪ್ರೆಸ್‌ … Continued

ಮಂಗಳೂರು-ಮಡಗಾಂವ ಜಂಕ್ಷನ್ ನಡುವೆ ವಿಶೇಷ ರೈಲು

ಮಂಗಳೂರು: ಮಂಗಳೂರು-ಮಡಗಾಂವ ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲ್ವೆ ಸೇವೆಯನ್ನು ಇದೀಗ ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20, 21 ಮತ್ತು 22ರಂದು ಈ ಎರಡು ಜಂಕ್ಷನ್‌ಗಳ ನಡುವೆ ಸಂಚರಿಸಲಿದೆ. ಬೆಳಗ್ಗೆ 6ಕ್ಕೆ ಮಡಗಾಂವ ಜಂಕ್ಷನ್ ನಿಂದ ಹೊರಡುವ ರೈಲು ಮಧ್ಯಾಹ್ನ … Continued

ಮಂಗಳೂರು : ಕುತ್ತಾರು ಕೊರಗಜ್ಜನ ಕೋಲದಲ್ಲಿ ಬಾಲಿವುಡ್‌ ನಟಿ ಕತ್ರಿನಾ ಕೈಫ್, ಕ್ರಿಕೆಟಿಗ ಕೆಎಲ್ ರಾಹುಲ್ ಭಾಗಿ

ಮಂಗಳೂರು: ತುಳುನಾಡಿನ ಅತ್ಯಂತ ಕಾರಣಿಕ ದೈವವಾಗಿರುವ ಕುತ್ತಾರು ಕೊರಗಜ್ಜನ ಕಟ್ಟೆಯಲ್ಲಿ ಭಾನುವಾರ ನಡೆದ ಹರಕೆಯ ಕೋಲದಲ್ಲಿ ಬಾಲಿವುಡ್‌ ಖ್ಯಾತ ನಟಿ ಕತ್ರಿನಾ ಕೈಫ್ , ಭಾರತದ ಕ್ರಿಕೆಟ್ ತಂಡದ ಖ್ಯಾತನಾಮ ಆಟಗಾರ ಕೆ.ಎಲ್. ರಾಹುಲ್, ಖ್ಯಾತ ಚಲನಚಿತ್ರ ನಟ ಸುನಿಲ್ ಶೆಟ್ಟಿ ಕುಟುಂಬದವರು ಭಾಗಿಯಾಗಿದ್ದರು. ನಟಿ ಕತ್ರಿನಾ ಕೈಫ್, ಅವರ ಪತಿ ವಿಕ್ಕಿ ಕೌಶಲ್, ನಟ … Continued