ಉಳ್ಳಾಲ: ಬಸ್ ಚಾಲಕನ ಸಮಯಪ್ರಜ್ಞೆಯಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಮಹಿಳೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮಂಗಳೂರು : ಚಾಲಕನ ಸಮಯಪ್ರಜ್ಞೆ ಹಾಗೂ ಚಾಕಚಕ್ಯತೆಯಿಂದ ಪಾದಚಾರಿ ಮಹಿಳೆಯೊಬ್ಬರು ಬಸ್ ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಉಳ್ಳಾಲದ ತೌಡುಗೋಳಿ ಸಮೀಪದ ನರಿಂಗಾನದಲ್ಲಿ ಮಂಗಳವಾರ ನಡೆದಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದೆ. ಮಂಗಳವಾರ ತೌಡುಗೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹಿಳೆಯು ರಸ್ತೆ ದಾಟಲು … Continued

ಮಂಗಳೂರು: ಪಿಲಿಕುಳದಲ್ಲಿ ಹುಲಿಗಳ ನಡುವೆ ಕಾಳಗ – ಒಂದು ಹುಲಿ ಸಾವು

ಮಂಗಳೂರು: ಪಿಲಿಕುಳದ ಡಾ. ಶಿವರಾಮ ಕಾರಂತ ಜೈವಿಕ ಮೃಗಾಲಯದಲ್ಲಿ ನಡೆದ ಎರಡು ಹುಲಿಗಳ ಕಾಳಗದಲ್ಲಿ ಒಂದು ಹುಲಿ ಮೃತಪಟ್ಟಿದೆ ಎಂದು ವರದಿಯಾಗಿದೆ. ತನ್ನ ಸಂಗಾತಿಯೊಂದಿಗಿನ ಕಾದಾಟದಲ್ಲಿ 15 ವರ್ಷದ ಹೆಣ್ಣು ಹುಲಿ ಗಾಯಗೊಂಡಿತ್ತು. ಹೀಗಾಗಿ ನಿರಂತರ ಚಿಕಿತ್ಸೆ ನೀಡಲಾಗುತ್ತಿದ್ದರೂ, ಹೆಣ್ಣುಹುಲಿ ಇಂದು ಬುಧವಾರ (ಜೂನ್‌ 7) ಬೆಳಿಗ್ಗೆ ಸಾವಿಗೀಡಾಗಿದೆ. ಮೃತಪಟ್ಟ ಹುಲಿಯ ಮರಣೋತ್ತರ ಪರೀಕ್ಷಾ ವರದಿ … Continued

ವೀಡಿಯೊ…: ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌

ಮಂಗಳೂರು : ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದೇವಸ್ಥಾನದ ಮುಂಭಾಗದಲ್ಲಿ ಇಂದು, ಬುಧವಾರ ಮಧ್ಯಾಹ್ನ ಸಂಭವಿಸಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಪ್ರಯಾಣಿಕರು ಹಾಗೂ ಬಸ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಮಧ್ಯಾಹ್ನ 2:30 ರ ಸುಮಾರಿಗೆ ಗೋಲ್ಡನ್ ಟ್ರಾವೆಲ್ಸ್ ಎಂಬ ಹೆಸರಿನ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ … Continued

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ನಾಯಕ ರಮಾನಾಥ ರೈ

ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಪ್ರಕಟಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಈ ವಿಷಯ ಪ್ರಕಟಿಸಿದ್ದಾರೆ. … Continued

ಮಂಗಳೂರು : ಗೂಡ್ಸ್ ರೈಲಿನಡಿ ಸಿಲುಕಿ 17 ಎಮ್ಮೆಗಳು ಸಾವು

ಮಂಗಳೂರು : ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲಿನಡಿ ಬಿದ್ದು 17 ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ 12 ಗಂಟೆಯ ಸುಮಾರಿಗೆ ಸಂಭವಿಸಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗೂಡ್ಸ್‌ ರೈಲು ಹೋಗುವ ಸಂದರ್ಭದಲ್ಲಿ ಹಾರ್ನ್‌ ಶಬ್ದ ಹಾಕಿದರೂ ಎಮ್ಮೆಗಳಿಗೆ ಕೇಳಿಸದ ಕಾರಣ ರೈಲು … Continued

ಸಾರಿಗೆ ಬಸ್- ಕಾರು ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳು ಸೇರಿ ಆರು ಮಂದಿ ಸಾವು

ಮಡಿಕೇರಿ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಮಾರುತಿ ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಜನರು ಮೃತಪಟ್ಟ ಘಟನೆ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದ್ದು, ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಾರುತಿ … Continued

4 ವರ್ಷದ ಮಗಳೊಂದಿಗೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ, ಮತ್ತೋರ್ವ ಮಗಳು ಪಾರು

ಮಂಗಳೂರು: ನಗರದ ಕೊಡಿಯಾಲ್ ಗುತ್ತಿನಲ್ಲಿ ಮಹಿಳೆ ತನ್ನ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ. ಕೊಡಿಯಾಲ್ ಬೈಲ್ ಗುತ್ತು ಬಳಿ ಘಟನೆ ಸಂಭವಿಸಿದ್ದು ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. 12 ವರ್ಷದ ಯಜ್ಞಾ ಬದುಕುಳಿದಿದ್ದಾಳೆ. ವಿಜಯ ತನ್ನ ಇಬ್ಬರು ಮಕ್ಕಳಿಗೂ ಕುಣಿಕೆ ಹಾಕಿ ತಾನು … Continued

ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮಂಗಳೂರಿನಲ್ಲಿ ಆಸ್ಪತ್ರೆಗೆ ದಾಖಲು

ಮಂಗಳೂರು: ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳಲು ನಿನ್ನೆ, ಭಾನುವಾರ ದೆಹಲಿಯಿಂದ ಮಂಗಳೂರಿಗೆ ಆಗಮಿಸಿದ್ದ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿ ಕೊಂಡ ಹಿನ್ನೆಲೆ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರನ್ನು … Continued

ಫೆಬ್ರವರಿ 18ರಿಂದ ಎರಡು ದಿನಗಳ ಮಂಗಳೂರು ಲಿಟ್‌ಫೆಸ್ಟ್‌

ಮಂಗಳೂರು: ಭಾರತ ಫೌಂಡೇಶನ್‌ ಆಶ್ರಯದಲ್ಲಿ ಫೆಬ್ರವರಿ 18-19 ರಂದು ಎರಡು ದಿನಗಳ ಕಾಲ ಮಂಗಳೂರಿನ ಟಿಎಂಎ ಪೈ ಇಂಟರ್‌ನ್ಯಾಷನಲ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಮಂಗಳೂರು ಲಿಟ್‌ ಫೆಸ್ಟ್‌ನ ಐದನೇ ಆವೃತ್ತಿ ಮಂಗಳೂರು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಎರಡು ದಿನಗಳ ಈ ಸಮ್ಮೇಳನ ʼಭಾರತದ ಪರಿಕಲ್ಪನೆʼ (ʼThe Idea of Bharath) ಎಂಬ ಥೀಮ್‌ನಡಿಯಲ್ಲಿ ನಡೆಯಲಿದೆ. ಈ ಕುರಿತು … Continued

ಕಲುಷಿತ ಆಹಾರ ಸೇವನೆ: ಅಸ್ವಸ್ಥಗೊಂಡ ಮಂಗಳೂರು ನರ್ಸಿಂಗ್ ಕಾಲೇಜಿನ 173 ವಿದ್ಯಾರ್ಥಿನಿಯರು

ಮಂಗಳೂರು : ಕಲುಷಿತ ಆಹಾರ ಸೇವನೆಯಿಂದ ನಗರದ ನರ್ಸಿಂಗ್ ಕಾಲೇಜೊಂದರ 173 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಶಕ್ತಿನಗರದ ಹಾಸ್ಟೆಲ್‌’ನಲ್ಲಿ ಸೋಮವಾರ ನಡೆದ ವರದಿಯಾಗಿದೆ. ವಿದ್ಯಾರ್ಥಿನಿಯರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಸೇವಿಸಿದ್ದ ಹಾಸ್ಟೆಲ್’ನ ಆಹಾರ ಪದಾರ್ಥಗಳ ಮಾದರಿಗಳನ್ನು ಪರೀಕ್ಷೆಗಾಗಿ ಮೈಸೂರಿನ ಆಹಾರ ಸುರಕ್ಷತಾ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಹಾಸ್ಟೆಲ್‌’ನ … Continued