ಮಣಿಪುರ : ಮತಗಟ್ಟೆ ಮೇಲೆ ಗುಂಡಿನ ದಾಳಿ; ದಿಕ್ಕಾ ಪಾಲಾಗಿ ಓಡಿದ ಮತದಾರರು

ಇಂಫಾಲ್ : 2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಮಣಿಪುರದ ಮತಗಟ್ಟೆಯೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, ಗುಂಡಿನ ಸದ್ದು ಕೇಳುತ್ತಿದ್ದಂತೆ ಮತಗಟ್ಟೆಯಲ್ಲಿದ್ದ ಮತದಾರರು ದಿಕ್ಕಾ ಪಾಲಾಗಿ ಓಡಿದ್ದಾರೆ. ಬಿಷ್ಣುಪುರ ಜಿಲ್ಲೆಯ ಥಮನ್‌ಪೋಕ್ಪಿ ಮತದಾನ ಕೇಂದ್ರದಲ್ಲಿ ಕೇಂದ್ರದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದ್ದ ವೇಳೆ ಮತಗಟ್ಟೆಯೊಂದರ ಮೇಲೆ ಗುಂಡಿನ ದಾಳಿ ನಡೆದಿದೆ. … Continued

ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ರಾಹುಲ್ ಗಾಂಧಿಯವರ ಭಾರತ ನ್ಯಾಯ … Continued

ಐತಿಹಾಸಿಕ ಮೈಲಿಗಲ್ಲು…: ಕೇಂದ್ರದ ಜೊತೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ಮಣಿಪುರದ ಅತ್ಯಂತ ಹಳೆಯ ಸಶಸ್ತ್ರ ಗುಂಪು ಯು ಎನ್‌ ಎಲ್‌ ಎಫ್‌

ನವದೆಹಲಿ: ಐತಿಹಾಸಿಕ ಬೆಳವಣಿಗೆಯಲ್ಲಿ, ಭಾರತ ಸರ್ಕಾರ ಮತ್ತು ಮಣಿಪುರ ಸರ್ಕಾರವು ಬುಧವಾರ ನವದೆಹಲಿಯಲ್ಲಿ ಮಣಿಪುರದ ಅತ್ಯಂತ ಹಳೆಯ ಕಣಿವೆ ಮೂಲದ ಸಶಸ್ತ್ರ ಗುಂಪು ಯುನೈಟೆಡ್ ನ್ಯಾಷನಲ್ ಲಿಬರೇಶನ್ ಫ್ರಂಟ್ (UNLF) ಜೊತೆ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದೆ. ಶಾಂತಿ ಒಪ್ಪಂದವನ್ನು ಶ್ಲಾಘಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶಾನ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು … Continued

ಇಂಫಾಲ್ ವಿಮಾನ ನಿಲ್ದಾಣದ ಬಳಿ ‘ಯುಎಫ್‌ಒ’ ಕಂಡುಬಂದ ನಂತರ ನಂತರ ಎರಡು ರಫೇಲ್‌ ಯುದ್ಧ ವಿಮಾನ ಕಳುಹಿಸಿದ ವಾಯುಪಡೆ

ಇಂಫಾಲ್ (ಮಣಿಪುರ): ಭಾರತೀಯ ವಾಯು ಪಡೆಯ ಎರಡು ರಫೇಲ್ ಯುದ್ಧ ವಿಮಾನಗಳು ಮಣಿಪುರ ರಾಜಧಾನಿ ಇಂಫಾಲ್‌ಗೆ ರವಾನೆ ಆಗಿವೆ. ಇಂಫಾಲ್ ವಿಮಾನ ನಿಲ್ದಾಣದ ಬಳಿ ಗುರುತಿಸಲಾಗದ ಹಾರುವ ವಸ್ತು (UFO) ಹಾರಾಡುತ್ತಿವೆ ಎಂಬ ಮಾಹಿತಿ ಸಿಕ್ಕ ಕೂಡಲೇ ಭಾರತೀಯ ವಾಯು ಪಡೆ ತನ್ನ ಎರಡು ರಫೇಲ್ ಯುದ್ಧ ವಿಮಾನಗಳನ್ನ ಇಂಫಾಲ್‌ಗೆ ರವಾನಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. … Continued

‘ನಮ್ಮ ಮಕ್ಕಳೊಂದಿಗೆ ನಾವು ವೇಗವಾಗಿ ಓಡಿದೆವು, ಆದರೆ…ʼ : ಮಣಿಪುರದ ಮತ್ತೊಂದು ಸಾಮೂಹಿಕ ಅತ್ಯಾಚಾರ ಭಯಾನಕ ಘಟನೆ ಬೆಳಕಿಗೆ

ಇಂಫಾಲ : ಬುಧವಾರ ಎಫ್‌ಐಆರ್ ದಾಖಲಾದ ನಂತರ ಮಣಿಪುರದಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ. ಮೇ 3 ರಂದು ಜನಾಂಗೀಯ ಘರ್ಷಣೆಗಳು ನಡೆದಾಗ ಚುರಾಚಂದಪುರದ ತನ್ನ ಮನೆಯಿಂದ ಪಲಾಯನ ಮಾಡಲು ಪ್ರಯತ್ನಿಸುತ್ತಿದ್ದಾಗ ಕುಕಿ ಪುರುಷರು ತನ್ನ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆ ಎಂದು 37 ವರ್ಷದ ಮಹಿಳೆ ದೂರಿದ್ದಾರೆ. ಗುಂಪಿನಿಂದ ತಪ್ಪಿಸಿಕೊಳ್ಳಲು ನಾವು … Continued

ಮಣಿಪುರದಲ್ಲಿ ಸಾಂವಿಧಾನಿಕ ಯಂತ್ರಗಳ ಸಂಪೂರ್ಣ ಸ್ಥಗಿತ: ಸುಪ್ರೀಂ ಕೋರ್ಟ್

ನವದೆಹಲಿ: ಮಣಿಪುರದಲ್ಲಿ ತನಿಖೆಯ “ಆಲಸ್ಯ”ದ ಬಗ್ಗೆ ಸುಪ್ರೀಂ ಕೋರ್ಟ್ ಮಂಗಳವಾರ ಗಂಭೀರ ಕಳವಳ ವ್ಯಕ್ತಪಡಿಸಿದೆ ಮತ್ತು ರಾಜ್ಯದಲ್ಲಿ “ಕಾನೂನು ಮತ್ತು ಸುವ್ಯವಸ್ಥೆ ಯಂತ್ರದ ಸಂಪೂರ್ಣ ಸ್ಥಗಿತವಾಗಿದೆ ಎಂದು ಹೇಳಿದೆ. ಗಮನಾರ್ಹ ಸಮಯ ಕಳೆದರೂ ಯಾವುದೇ ಬಂಧನಗಳಿಲ್ಲ. ಮಣಿಪುರದಲ್ಲಿ ಚಾಲ್ತಿಯಲ್ಲಿರುವ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಯು ಸಾಂವಿಧಾನಿಕ ಯಂತ್ರಗಳ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಗಮನಿಸಿದ … Continued

ಮಣಿಪುರ ಬೆತ್ತಲೆ ಮೆರವಣಿಗೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಇಂಫಾಲ : ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಹೇಯ ಕೃತ್ಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಯುಮ್ಲೆಂಬಮ್ ನುಂಗ್ಸಿತೋಯ್ ಮೈತೆ (19) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈವರೆಗೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ ಐವರನ್ನು ಬಂಧಿಸಿದ್ದು, ವೈರಲ್ ವೀಡಿಯೊದಲ್ಲಿ … Continued

ಮಣಿಪುರ : ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿದ ಗುಂಪಿನ ಪ್ರಮುಖ ಆರೋಪಿ ಮನೆಗೆ ಬೆಂಕಿ ಹಚ್ಚಿದ ಮಹಿಳೆಯರು..

ಇಂಫಾಲ: ಮಣಿಪುರದಲ್ಲಿ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ವೀಡಿಯೊ ವೈರಲ್ ಆದ ಎರಡು ದಿನಗಳ ನಂತರ, ಪ್ರಮುಖ ಆರೋಪಿ ಹುಯಿರೆಮ್ ಹೆರೋದಾಸ್ ಮೈತೆಯ್ ಎಂಬಾತನ ಮನೆಯನ್ನು ಗುರುವಾರ ಸುಟ್ಟು ಹಾಕಲಾಗಿದೆ. ಮಹಿಳೆಯರ ಬೆತ್ತಲೆ ಮೆರವಣಿಗೆ ಕೃತ್ಯಕ್ಕೆ ಪ್ರತಿಕ್ರಿಯೆಯಾಗಿ ಪ್ರತಿಭಟನಾಕಾರರು, ಹೆಚ್ಚಾಗಿ ಮಹಿಳೆಯರು ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹಚ್ಚುವುದನ್ನು ದೃಶ್ಯಗಳು ತೋರಿಸಿದೆ. ಮಣಿಪುರದ … Continued

ಮಣಿಪುರ : ಕೇಂದ್ರ ಸಚಿವರ ಮನೆಗೆ ಬೆಂಕಿ ಹಚ್ಚಿದ ಸಾವಿರಾರು ಜನರ ಗುಂಪು

ನವದೆಹಲಿ: ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿರುವ ಮಣಿಪುರದಲ್ಲಿನ ಹಿಂಸಾಚಾರದ ಇತ್ತೀಚಿನ ಘಟನೆಯಲ್ಲಿ ಕಳೆದ ರಾತ್ರಿ ಕೇಂದ್ರ ಸಚಿವರೊಬ್ಬರ ಮನೆ ಮೇಲೆ 1,000 ಕ್ಕೂ ಹೆಚ್ಚು ಜನರ ಗುಂಪೊಂದು ದಾಳಿ ಮಾಡಿದೆ. ಘಟನೆಯ ವೇಳೆ ಕೇಂದ್ರ ಸಚಿವ ಆರ್‌.ಕೆ. ರಂಜನ್ ಸಿಂಗ್ ಅವರು ಇಂಫಾಲ್‌ನ ತಮ್ಮ ಮನೆಯಲ್ಲಿ ಇರಲಿಲ್ಲ … Continued

ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ; ಪ್ರಮುಖ ಆರೋಪಿ ಶರಣಾಗತಿ

ಇಂಫಾಲ: ಮಂಗಳವಾರ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದ್ದು, ಪ್ರಮುಖ ಆರೋಪಿ ಪೊಲೀಸರ ಮುಂದೆ ಶರಣಾಗಿದ್ದಾನೆ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಜೆಪಿ ಪಕ್ಷದ ರಾಜ್ಯ ಘಟಕದ ಮಾಜಿ ಸೈನಿಕರ ಕೋಶದ ಸಂಚಾಲಕ ಲೈಶ್ರಾಮ್ ರಾಮೇಶ್ವರ್ ಸಿಂಗ್ ಅವರನ್ನು ಕ್ಷೇತ್ರ ಲೈಕೈ ಪ್ರದೇಶದ ಅವರ ನಿವಾಸದ … Continued