ಹುಬ್ಬಳ್ಳಿ: ಸ್ಕೂಟಿಯಲ್ಲಿ ಹೋಗುವಾಗ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆ ಸಾವು
ಹುಬ್ಬಳ್ಳಿ: ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ ಶಿವಶಂಕರ ಕಾಲೋನಿ ಸಮೀಪ ಗುರುವಾರ ನಡೆದಿದೆ ಎಂದು ವರದಿಯಾಗಿದೆ. ಹುಬ್ಬಳ್ಳಿಯ ಭರತ ನಗರದ ನಿವಾಸಿಯಾಗಿರುವ ವಿದ್ಯಾ ಮಂಜುನಾಥ ಗೌಡರ (38) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅವರು ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. … Continued