ಎನ್‌ ಕೌಂಟರ್‌ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ. ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ … Continued

ಭದ್ರತಾ ಸಿಬ್ಬಂದಿ ವಾಹನ ಸ್ಫೋಟಿಸಿದ ನಕ್ಸಲರು: 8 ಭದ್ರತಾ ಸಿಬ್ಬಂದಿ ಸೇರಿ 9 ಮಂದಿ ಸಾವು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಗುರಿಯಾಗಿಸಿ ಪ್ರಬಲ ಐಇಡಿ ಸಾಧನ ಸ್ಫೋಟಿಸಿದ್ದು, ದಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ)ನ ಎಂಟು ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ … Continued

ಎನ್‌ಕೌಂಟರ್‌ನಲ್ಲಿ 9 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ … Continued

8 ಗಂಟೆಗಳ ಕಾಲ ನಡೆದ ಎನ್‌ಕೌಂಟರ್‌ನಲ್ಲಿ 13 ಮಾವೋವಾದಿಗಳ ಹತ್ಯೆ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರದಲ್ಲಿ ಎಂಟು ಗಂಟೆಗಳ ಕಾಲ ನಡೆದ ಭದ್ರತಾ ಎನ್‌ಕೌಂಟರ್‌ನಲ್ಲಿ ಹತರಾದ ಮಾವೋವಾದಿಗಳ ಸಾವಿನ ಸಂಖ್ಯೆ 13 ಕ್ಕೆ ಏರಿದೆ. ಬುಧವಾರ ಬೆಳಿಗ್ಗೆ ಸಿಬ್ಬಂದಿ ಮತ್ತೆ ಮೂರು ಮೃತದೇಹಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳವಾರ ಬೆಳಗ್ಗೆ 6 ಗಂಟೆಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ … Continued

ವೀಡಿಯೊ…| ದಂತೇವಾಡದಲ್ಲಿ ನಕ್ಸಲರು ನಿರ್ಮಿಸಿಕೊಂಡ 130 ಮೀಟರ್ ಉದ್ದದ ಬೃಹತ್ ಸುರಂಗ ಪತ್ತೆ…!

ರಾಯ್ಪುರ: ಮಾವೋವಾದಿ ನಕ್ಸಲ್‌ ಪೀಡಿತ ಚತ್ತೀಸ್‌ಗಢದ ದಂತೇವಾಡ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭೂಗತ ಅಡಗುತಾಣವಾಗಿ ನಿರ್ಮಿಸಲಾದ 130 ಮೀಟರ್ ಉದ್ದದ ಸುರಂಗವನ್ನು ಪತ್ತೆ ಹಚ್ಚಿವೆ. ಮಾವೋವಾದಿಗಳೊಂದಿಗೆ ಗುಂಡಿನ ಚಕಮಕಿ ನಡೆಸಿ ಭದ್ರತಾ ಪಡೆಗಳು ಹಿಂತಿರುಗುತ್ತಿದ್ದಾಗ ಅಡಗುತಾಣ ಪತ್ತೆಯಾಗಿದೆ. 10 ಅಡಿ ಆಳದ ಸುರಂಗವನ್ನು ಮೊದಲು ಸ್ಥಳೀಯ ಬುಡಕಟ್ಟು ಯುವಕರನ್ನು ಒಳಗೊಂಡಿರುವ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) … Continued

ಚುನಾವಣೆಗೆ ಮೂರು ದಿನಗಳ ಮೊದಲು ಬಿಜೆಪಿ ನಾಯಕನ ಹತ್ಯೆ

ರಾಯ್‌ಪುರ: ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನಕ್ಕೆ ಮೂರು ದಿನಗಳ ಮೊದಲು ಮಾವೋವಾದಿಗಳು ಚುನಾವಣಾ ಪ್ರಚಾರದಲ್ಲಿದ್ದ ಬಿಜೆಪಿ ನಾಯಕನನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಿಜೆಪಿ ನಾಯಕ ರತನ್ ದುಬೆ ಅವರು ಬಿಜೆಪಿಯ ನಾರಾಯಣಪುರ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿದ್ದರು. ಜಿಲ್ಲೆಯ ಕೌಶಲನರ್ ಪ್ರದೇಶದಲ್ಲಿ ಶನಿವಾರ ಈ ಘಟನೆ ನಡೆದಿದೆ. ರತನ್‌ ದುಬೆ ಅವರು ಜಿಲ್ಲಾ … Continued