ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಮಾಸ್ಕ್‌ ಮ್ಯಾನ್‌ ಜೊತೆ ಕೆಲಸ ಮಾಡಿದ್ದ ಕೆಲಸಗಾರ

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಆಗುತ್ತಿದೆ. ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಹೇಳಿಕೆ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ಎಂದು ಹೇಳಿಕೊಂಡಿರುವ ವ್ಯಕ್ತಿ ನೀಡಿರುವ ಹೇಳಿಕೆ ಪ್ರಕರಣದ ಬಗ್ಗೆ ಮತ್ತೊಂದು ಟ್ವಿಸ್ಟ್‌ ನೀಡಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ … Continued

ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಬೆಳಗಾವಿ : ಟಿಕೆಟ್‌ ತೋರಿಸಿ ಎಂದು ಕೇಳಿದ್ದಕ್ಕೆ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ ಘಟನೆ ಬೆಳಗಾವಿಯ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದ್ದು, ಘಟನೆಯಲ್ಲಿ ಓರ್ವ ವ್ಯಕ್ತಿ ಮತಪಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಂಡಿಚೇರಿ-ಮುಂಬೈ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಖಾನಾಪುರ ತಾಲೂಕಿನ ಲೋಂಡಾ ಬಳಿ ಈ ಘಟನೆ ನಡೆದಿದೆ. ಚಾಲುಕ್ಯ ಎಕ್ಸ್‌ಪ್ರೆಸ್‌ … Continued