ಲೋಕಸಭೆ ಚುನಾವಣೆ: ಸುಮಲತಾ ಭೇಟಿ ಮಾಡಿದ ಕುಮಾರಸ್ವಾಮಿ

ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ ಅವರ ನಿವಾಸಕ್ಕೆ ಭಾನುವಾರ (ಮಾ. 31ರಂದು) ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ, ಸುಮಲತಾ ಅವರ ಪುತ್ರ ಅಭಿಷೇಕ ಅಂಬರೀಶ ಇದ್ದರು. ಮಂಡ್ಯದಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ (BJP JDS Alliance) ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಚ್‌.ಡಿ ಕುಮಾರಸ್ವಾಮಿ ಅವರು ಮುನಿಸು ಮರೆತು … Continued

ಅತ್ತಿಬೆಲೆ ಪ್ರಕರಣ: 3 ಅಧಿಕಾರಿಗಳ ಅಮಾನತಿಗೆ ಸಿಎಂ ಸೂಚನೆ

ಬೆಂಗಳೂರು: ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್‌ಪೆಕ್ಟರ್ ಮತ್ತು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಅಮಾನತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಪ್ರಕರಣದ ಸಂಬಂಧ ಇಂದು, ಮಂಗಳವಾರ ಸಭೆ ನಡೆಸಿದ ಅವರು, ಈ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಪಟಾಕಿ ವಿಚಾರದಲ್ಲಿ ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತವಾದ ಮಳಿಗೆಗೆ … Continued

ದೆಹಲಿಯಲ್ಲಿ ಮಾಜಿ ಉಪಪ್ರಧಾನಿ ಅಡ್ವಾಣಿ ಭೇಟಿ ಮಾಡಿದ ಪೇಜಾವರ ಶ್ರೀಗಳು

ನವದೆಹಲಿ: ಅಯೋಧ್ಯಾ ಶ್ರೀರಾಮಮಂದಿರ ತೀರ್ಥಕ್ಷೇತ್ರ ಟ್ರಸ್ಟ್​​ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉತ್ತರ ಭಾರತ ಪ್ರವಾಸದಲ್ಲಿದ್ದು, ನವದೆಹಲಿಯಲ್ಲಿ ಮಾಜಿ ಉಪ ಪ್ರಧಾನಿ ಎಲ್​.ಕೆ.ಅಡ್ವಾಣಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ. ಎಲ್​.ಕೆ. ಅಡ್ವಾಣಿ ಅವರನ್ನು ಅವರ ಮನೆಯಲ್ಲಿ ಭೇಟಿಯಾದ ಪೇಜಾವರ ಸ್ವಾಮೀಜಿ, ಶ್ರೀಕೃಷ್ಣನ ಪ್ರಸಾದ, ಸ್ಮರಣಿಕೆ, ಫಲಮಂತ್ರಾಕ್ಷತೆ ನೀಡಿ ಸ್ವಾಮೀಜಿಯವರು ಆಶೀರ್ವದಿಸಿದರು. ಈ ವೇಳೆ … Continued

ಪಂಚರಾಜ್ಯ ಚುನಾವಣೆ ವೈಫಲ್ಯ: ಎಐಸಿಸಿ ಸಭೆ ಕರೆಯಲು ಜಿ-23 ಸದಸ್ಯರ ಒತ್ತಾಯ

ನವದೆಹಲಿ: ಪಂಚರಾಜ್ಯ ಚುನಾವಣೆ ಫಲಿತಾಂಶಗಳು ಹೊರ ಬೀಳುತ್ತಿದ್ದಂತೆ ಕಾಂಗ್ರೆಸ್ ವಲಯದಲ್ಲಿ ರಾಜಕೀಯ ಬೆಳವಣಿಕೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಈಗ ಎಐಸಿಸಿಗೆ ಹೊಸ ಅಧ್ಯಕ್ಷರ ನೇಮಕ ಯಾವಾಗ ಎಂಬ ಪ್ರಶ್ನೆಗೆ ಮತ್ತೆ ಮುನ್ನಲೆಗೆ ಬಂದಿದೆ. ಐದು ರಾಜ್ಯಗಳಲ್ಲಿನ ಹೀನಾಯ ಸೋಲು ರಾಷ್ಟ್ರೀಯ ಪಕ್ಷ ಎನಿಸಿಕೊಂಡಿರುವ ಕಾಂಗ್ರೆಸ್ ವಲಯದ ನಾಯಕರ ನಿದ್ದೆ ಕೆಡಿಸಿದೆ. ಅದರಲ್ಲೂ ಎಐಸಿಸಿ ನಾಯಕರ ಸಭೆ … Continued

ಹಿಜಾಬ್‌ ವಿವಾದ: ಬೆಂಗಳೂರಲ್ಲಿ ಫೆಬ್ರವರಿ 22ರ ವರಗೆ ಶಾಲಾ -ಕಾಲೇಜು ಸುತ್ತ ನಿಷೇಧಾಜ್ಞೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದ ಜೋರಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳ ವರೆಗೆ ನಗರದಲ್ಲಿ ಶಾಲಾ ಕಾಲೇಜು ಸುತ್ತ ಸೆಕ್ಷನ್ 144 ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ನಗರದ ಶಾಲಾ-ಕಾಲೇಜುಗಳ ಸುತ್ತಮುತ್ತ ಯಾವುದೇ ರೀತಿಯ ಗುಂಪು ಅಥವಾ ಆಂದೋಲನ ನಿರ್ಬಂಧಿಸಲು ಫೆ.22 ರ ತನಕ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ … Continued

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು:ಕೇಂದ್ರದ ಪೂರ್ವಾನುಮತಿಗೆ ಸಂಪೂರ್ಣ ಮಾಹಿತಿ ಕಳುಹಿಸಲು ಸಿಎಂ ಸೂಚನೆ

ಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ. ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಜಲ ವಿದ್ಯುತ್ ಯೋಜನೆಯಿಂದಾಗಿ ಮುಳುಗಡೆಯಾಗಿರುವ ಪ್ರದೇಶದ ಸಂತ್ರಸ್ತರ ಸಮಸ್ಯೆಗಳ ಕುರಿತು ಇಂದು … Continued

ಸಿಎಂ ಬೊಮ್ಮಾಯಿ-ಬಿಎಸ್‌ವೈ ಜೊತೆಗೆ ಸಭೆ ನಂತರ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಆನಂದ್ ಸಿಂಗ್

ಬೆಂಗಳೂರು: ಪ್ರಬಲ ಖಾತೆಗೆ ಬಿಗಿಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ರಾಜೀನಾಮೆ ನಿರ್ಧಾರದಿಂದ ಈಗ ಹಿಂದೆ ಸರಿದಿದ್ದಾರೆ. ಬುಧವಾರ ಸಂಜೆ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ನಡೆಸಿದ ಸಭೆ ಯಶಸ್ವಿಯಾಗಿದ್ದು, ಅದರ ನಂತರ ಅವರು ರಾಜೀನಾಮೆ ನಿರ್ದಾರದಿಂದ ಹಿಂದೆ ಸರದಿದ್ದಾರೆ. ಈ ಹಿಂದೆ ಪ್ರತ್ಯೇಕ ಜಿಲ್ಲೆಗೆ ಪಟ್ಟು ಹಿಡಿದು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ … Continued

ದಿಢೀರ್‌ ಬೆಳವಣಿಗೆಯಲ್ಲಿ ಹೆಲಿಕ್ಯಾಪ್ಟರಿನಲ್ಲಿ ಬಿಎಸ್‌ವೈ ಮನೆಗೆ ಬಂದ ಸಚಿವ ಆನಂದ ಸಿಂಗ್‌..!

ಯಾದಗಿರಿ: ದಿಢೀರ್‌ ರಾಜಕೀಯ ಬೆಳವಣಿಗೆಯೊಂದರಲ್ಲಿ ಇಂದು (ಬುಧವಾರ) ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷ ನರಸಿಂಹ ನಾಯಕ ( ರಾಜುಗೌಡ) ಅವರು ಹೊಸಪೇಟೆಗೆ ತೆರಳಿ ಹೆಲಿಕ್ಯಾಪ್ಟರ್‌ನಲ್ಲಿ ಬೆಂಗಳೂರಿಗೆ ತೆರಳಿದ್ದು, ಸದ್ಯ ಮಾಜಿ ಮುಖ್ಯಮಂತ್ರಿ ನಿವಾಸದಲ್ಲಿದ್ದಾರೆ. ಬೆಂಗಳೂರಿಗೆ ಹೋಗುವ ಮೊದಲು ಅವರು ಹೊಸಪೇಟೆಯಲ್ಲಿ ಸಚಿವ ಆನಂದ … Continued

ಪ್ರವಾಹದಿಂದ ಬೆಳಗಾವಿ ಜಿಲ್ಲೆಯಲ್ಲಿ 1200 ಕೋಟಿ ಹಾನಿ; ತಕ್ಷಣವೇ 170 ಕೋಟಿ ರೂ.ಗಳ ಬಿಡುಗಡೆಗೆ ಮನವಿ

ಬೆಳಗಾವಿ: ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಗಮನಕ್ಕೆ ತಂದು ರಿಸ್ಥಿತಿ ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು. ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ (ಜು.25) ಬೆಳಗಾವಿ ಜಿಲ್ಲೆ ಪ್ರವಾಹ ಹಾನಿ ವೀಕ್ಷಣೆ … Continued

ಏಪ್ರಿಲ್ 8 ರಂದು ಸಿಎಂಗಳ ಜೊತೆ ಪ್ರಧಾನಿ ಮೋದಿ ಸಭೆ

ನವ ದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿರುವ‌ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕ್ರಮದ ಕುರಿತು ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 8 ರಂದು ರಾಜ್ಯಗಳ ‌ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಮಹಾರಾಷ್ಟ್ರ, ಕರ್ನಾಟಕ, ಕೇರಳ,‌ಪಂಜಾಬ್, ತಮಿಳುನಾಡು, ಚಂಢೀಗಡ,ಛತ್ತೀಸ್ ಗಡ, ದೆಹಲಿ ಪಶ್ವಿಮ‌ ಬಂಗಾಳ ಸೇರಿದಂತೆ 11 ರಾಜ್ಯ … Continued