ಬೆಳಗಾವಿ | ಕನ್ನಡಿಗರ ವಿರುದ್ಧ ನಾಲಿಗೆ ಹರಿಬಿಟ್ಟ ಎಂಇಎಸ್ ಮುಖಂಡನ ಬಂಧನ

ಬೆಳಗಾವಿ: ಎಂಇಎಸ್ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗೆ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಎಂಇಎಸ್ ಯುವ ಮುಖಂಡ ಶುಭಂ ಶೆಳಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಈಚೆಗೆ ಬೆಳಗಾವಿ ಬಳಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತನ್ನ ಫೇಸ್‌ಬುಕ್‌ ಖಾತೆಯಲ್ಲಿ ಸಮರ್ಥಿಸಿಕೊಂಡಿದ್ದರು. ಕರ್ನಾಟಕದಲ್ಲಿರುವ ಕನ್ನಡ ಸಂಘಟನೆಗಳು … Continued

ಕರ್ನಾಟಕ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಿದ ಎಂಇಎಸ್ ನಾಯಕರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದಂದು ಕರಾಳ ದಿನ ಆಚರಣೆ ಮಾಡಿದ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ವಿರುದ್ಧ ಪೊಲೀಸರು ಕ್ರಮ ಜರುಗಿಸಲು ಮುಂದಾಗಿದ್ದಾರೆ. ಸಮಿತಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತ ಕರಾಳ ದಿನಾಚರಣೆಗೆ ಅನುಮತಿ ನೀಡದೇ ಇದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೀದಿಗಿಳಿದುಕರಾಳ ದಿನ ಆಚರಣೆ ಮಾಡಿದ್ದರು. … Continued

ಕರಾಳ ದಿನಕ್ಕೆ ಕರೆ: ಎಂಇಎಸ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬೆಳಗಾವಿಯಲ್ಲಿ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ … Continued

ಬೆಳಗಾವಿ ಅಧಿವೇಶನಕ್ಕೆ ಪ್ರತಿಯಾಗಿ ಮಹಾಮೇಳಾವ ಆಯೋಜನೆ ; ಮಹಾ ಸಿಎಂ ಶಿಂಧೆ, ಪವಾರ, ಠಾಕ್ರೆಗೆ ಅಹ್ವಾನ

ಬೆಳಗಾವಿ : ಬೆಳಗಾವಿಯಲ್ಲಿ ಡಿಸೆಂಬರ್ 19ರಿಂದ ವಿಧಾನ ಮಂಡಲದ ಚಳಿಗಾಲದ ವಿಶೇಷ ಅಧಿವೇಶನ ಆರಂಭವಾಗಲಿದೆ. ಪ್ರತಿ ವರ್ಷದಂತೆ ಇದಕ್ಕೆ ಪ್ರತಿಯಾಗಿ ಅಧಿವೇಶನ ಸಮಯದಲ್ಲೇ ಎಂಇಎಸ್ ಮಹಾಮೇಳಾವನ್ನು ಡಿಸೆಂಬರ್ 19 ರಂದು ಆಯೋಜಿಸಿದೆ. ಈ ವರ್ಷ ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ ಹಿನ್ನೆಲೆಯಲ್ಲಿ ಎಂಇಎಸ್ ಈ ಬಾರಿ ಮಹಾಮೇಳಾವವನ್ನು ಜೋರಾಗಿ ನಡೆಸಲು ತಯಾರಿ ನಡೆಸುತ್ತಿದೆ. ಡಿಸೆಂಬರ್ 19 … Continued

ಎಂಇಎಸ್ ಪುಂಡಾಟಿಕೆ; ಡಿಕೆಶಿ ಖಂಡನೆ

ಬೆಂಗಳೂರು:ಅನಗೊಳದಲ್ಲಿ ಸ್ವಾತಂತ್ರ್ಯ ವೀರ ಸೇನಾನಿ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ಭಗ್ನ ಸೇರಿದಂತೆ ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉಗ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಎಂಇಎಸ್ ಕನ್ನಡದ್ರೋಹಿ, ನಾಡದ್ರೋಹಿ ಕೃತ್ಯವನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ. ಅದನ್ನು ನಾವು ಬಲವಾಘಿ ಖಂಡಿಸುತ್ತೇವೆ ಎಂದು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಎಂಇಎಸ್ ನಾಯಕರ ಮುಖಕ್ಕೆ ಮಸಿ, ನಾಳೆ ಬೆಳಗಾವಿ ಬಂದ್‌ಗೆ ಕರೆ

ಬೆಳಗಾವಿ: ಬೆಳಗಾವಿ ವ್ಯಾಕ್ಸಿನ್ ಡಿಪೋದಲ್ಲಿ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಮಸಿ ಬಳಿದಿದ್ದಾರೆ. ಕರ್ನಾಟಕ ಸರಕಾರ ಬೆಳಗಾವಿಯಲ್ಲಿ ವಿಧಾನಮಂಡಲದ ಅಧಿವೇಶನ ನಡೆಸುತ್ತಿದೆ. ಆದರೆ ಇದಕ್ಕೆ ಪರ್ಯಾಯವಾಗಿ ಎಂಇಎಸ್ ಮಹಾಮೇಳಾವ್ ನಡೆಸಲು ಎಂಇಎಸ್ ಮಹಾಮೇಳಾವಕ್ಕೆ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ ನಿನ್ನೆ ತಡರಾತ್ರಿಯಲ್ಲಿ ಕಾರ್ಯಕರ್ತರು ವೇದಿಕೆ ನಿರ್ಮಿಸಿದ್ದರು. ಇಂದು … Continued

ಕನ್ನಡಿಗರಿಗೆ ಧಮ್ಕಿ: ಎಂಇಎಸ್ ಮುಖಂಡ ಸಾಳುಂಕೆ ಪುಂಡಾಟಿಕೆ

ಬೆಳಗಾವಿ: ಕನ್ನಡಿಗರಿಗೆ ಗೊಡ್ಡು ಬೆದರಿಕೆ ಹಾಕಿ ಬೆಳಗಾವಿಯ ಎಂಇಎಸ್ ಮುಖಂಡ ಶುಭಂ ಸಾಳುಂಕೆ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡಿಗರಿಗೆ ಧಮ್ಕಿ ಹಾಕಿ ಎಚ್ಚರಿಕೆ ನೀಡಿದ್ದಕ್ಕೆ ಈಗ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಬೆಳಗಾವಿಯಲ್ಲಿ ಎಂಇಎಸ್ ಮತ್ತು ಶಿವಸೇನೆ ಎರಡೂ ಒಂದಾಗಿವೆ ಎಂದು ಹೇಳಿದ್ದ ಸಾಳುಂಕೆ ಹಳದಿ, ಕೆಂಪು ಬಣ್ಣದ ಶಾಲು ಧರಿಸಿದವರನ್ನು ನಾವು ಕಂಡಲ್ಲಿ ಹೊಡೆಯುತ್ತೇವೆ, ನಮ್ಮ … Continued