ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ಮತ್ತೊಂದು ಪಟ್ಟಿ ಬಿಡುಗಡೆ ; ಜೆಪಿ ನಡ್ಡಾ, ಅಶೋಕ ಚವಾಣ ಸ್ಪರ್ಧೆ-ಶಿವಸೇನೆಯಿಂದ ಮಿಲಿಂದ್‌ ದಿಯೋರಾ ಕಣಕ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕಾಂಗ್ರೆಸ್ ತೊರೆದು ಒಂದು ದಿನದ ಮೊದಲು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ ಅವರು ಫೆಬ್ರವರಿ 27 ರಂದು ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಕ್ರಮವಾಗಿ ಗುಜರಾತ್ ಮತ್ತು ಮಹಾರಾಷ್ಟ್ರದಿಂದ ಪಕ್ಷದಿಂದ ಸ್ಪರ್ಧಿಸಲಿದ್ದಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪ್ರಸ್ತುತ … Continued

ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ಶಿವಸೇನೆಗೆ ಸೇರಿದ ಮಿಲಿಂದ್ ದಿಯೋರಾ

ಮುಂಬೈ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ತೊರೆದ ಕೆಲವೇ ಗಂಟೆಗಳ ನಂತರ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಭಾನುವಾರ ಸೇರ್ಪಡೆಯಾಗಿದ್ದಾರೆ. ಮಿಲಿಂದ್‌ ಅವರಿಗೆ ಕೇಸರಿ ಧ್ವಜವನ್ನು ನೀಡಿದ ಏಕನಾಥ ಶಿಂಧೆ ಅವರು ಶಿವಸೇನೆಗೆ ಸೇರ್ಪಡೆಗೊಂಡರು. ಪದಗ್ರಹಣ ಸಮಾರಂಭದಲ್ಲಿ, ದಿಯೋರಾ ಅವರಿಗೆ ಇದು ತುಂಬಾ ಭಾವನಾತ್ಮಕ ದಿನ ಎಂದು ಹೇಳಿದರು. … Continued

ಕಾಂಗ್ರೆಸ್‌ ತೊರೆಯುತ್ತಿರುವ ರಾಹುಲ್ ಗಾಂಧಿ ತಂಡದ ನಾಯಕರು : 2019ರಿಂದ ಕಾಂಗ್ರೆಸ್ ತೊರೆದ ಪ್ರಮುಖ ನಾಯಕರು ಇವರು…

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಕಾರ್ಯಕರ್ತರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ ತನ್ನ ಭಾರತ ಜೋಡಿ ನ್ಯಾಯ ಯಾತ್ರೆಗೆ ಮುಂಚಿತವಾಗಿ ಇಂದು, ಭಾನುವಾರ ದೊಡ್ಡ ಆಘಾತವನ್ನು ಅನುಭವಿಸಿದೆ. ಪಕ್ಷದ ಮಹಾರಾಷ್ಟ್ರದ ವರ್ಚಸ್ವಿ ನಾಯಕ ಮಿಲಿಂದ್ ದಿಯೋರಾ ಅವರು ರಾಜೀನಾಮೆ ನೀಡಿದ್ದು, ಇದು ಪಕ್ಷದೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದೆ ಎಂದು … Continued

ಕಾಂಗ್ರೆಸ್ಸಿಗೆ ಗುಡ್‌ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ : ಇಂದೇ ಸಿಎಂ ಏಕನಾಥ ಶಿಂಧೆ ಶಿವಸೇನೆ ಸೇರುವ ಸಾಧ್ಯತೆ

ನವದೆಹಲಿ: ಮಾಜಿ ಕೇಂದ್ರ ಸಚಿವ ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ನಿರೀಕ್ಷೆಯಿದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ, ಪಕ್ಷದೊಂದಿಗಿನ ನನ್ನ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿದ್ದೇನೆ” ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. “ಎಲ್ಲಾ ನಾಯಕರು, … Continued

ಬೃಹನ್‌ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೂ ಮೊದಲು ಮಹಾರಾಷ್ಟ್ರ ವಿಕಾಸ ಅಘಾಡಿಯಲ್ಲಿ ಬಿರುಕು…!

ಮುಂಬೈ: ಮಹಾರಾಷ್ಟ್ರದ ಮೂರು ಪಕ್ಷಗಳ ಮೈತ್ರಿಕೂಟ ಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಕಾಂಗ್ರೆಸ್‌ ನಾಯಕ ಮಿಲಿಂದ್ ದೇವೋರಾ  ಮುಂಬೈನಲ್ಲಿ ಮುಂಬರುವ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಲಾಭ ಪಡೆಯಲು ಮಹಾ ವಿಕಾಸ್ ಅಘಾಡಿ ಮೈತ್ರಿಕೂಟದ ಪಾಲುದಾರ ಶಿವಸೇನೆಯು ವಾರ್ಡ್‌ಗಳನ್ನು ಪುನರ್‌ರಚನೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಹಾಗೂ ಶಿವಸೇನೆಯು ಸಮ್ಮಿಶ್ರ ಧರ್ಮ ಉಳಿಸಿಕೊಂಡಿಲ್ಲ ಎಂದು ಹೇಳಿದ್ದಾರೆ. ತನ್ನ … Continued