ಅತ್ಯಾಚಾರ ಆರೋಪದ ಪ್ರಕರಣ ; ಶಾಸಕ ಮುನಿರತ್ನಗೆ ಜಾಮೀನು

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಂಗಳವಾರ ಜಾಮೀನು ನೀಡಿದೆ. ಇದೇ ಪ್ರಕರಣದಲ್ಲಿ ಇತರೆ ಮೂವರು ಆರೋಪಿಗಳಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ. ಮಾಜಿ ಸಚಿವ ಮುನಿರತ್ನ ಅವರ ಜಾಮೀನು ಅರ್ಜಿಯನ್ನು ವಿಶೇಷ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ. ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. … Continued