ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇ.ಡಿ. ದಾಳಿ

ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ … Continued

ಬಿಜೆಪಿ ಶಾಸಕ ಸುನಿಲಕುಮಾರ ಪೊಲೀಸ್ ವಶಕ್ಕೆ

ಬೆಂಗಳೂರು: ‘ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ’ ಎಂದು ಆಗ್ರಹಿಸಿ ನಗರದ ಸದಾಶಿವನಗರ ಪೊಲೀಸ್ ಠಾಣೆ ಎದುರು ಗುರುವಾರ ಬೆಳಿಗ್ಗೆ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲಕುಮಾರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯಲ್ಲಿ ಬಂಧನ ಮಾಡಿರುವ ಕರಸೇವಕರ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ (BJP) ನಿತ್ಯ ಪ್ರತಿಭಟನೆ … Continued

ಜಗತ್ತಿನಲ್ಲಿ ಲೂಟಿಕೋರರು, ದರೋಡೆಕೋರರು ಇದ್ರೆ ಅದು ರಾಜಕಾರಣಿಗಳು : ಶಾಸಕ ರಾಜು ಕಾಗೆ ಹೇಳಿಕೆ ಚರ್ಚೆಗೆ ಗ್ರಾಸ

ಬೆಳಗಾವಿ : ರಾಜಕೀಯ ವ್ಯವಸ್ಥೆ ತುಂಬಾ ಕೆಟ್ಟೋಗಿದೆ. ರಾಜಕಾರಣಿಗಳಲ್ಲಿ ಯಾವುದೇ ಪಾವಿತ್ರ್ಯ ಉಳಿದಿಲ್ಲ. ಜಗತ್ತಿನಲ್ಲಿ ಲೂಟಿ ಮಾಡುವವರು ದರೋಡೆ ಮಾಡುವವರು ಇದ್ದರೆ ಅದು ರಾಜಕಾರಣಿಗಳು ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದ್ದು, ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗುಳಕೋಡ ಗ್ರಾಮದಲ್ಲಿ ಖಾಸಗಿ ಶಾಲೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ರಾಜಕಾರಣಿಗಳ ವಿರುದ್ಧ … Continued

ವೀಡಿಯೊ…: ರಾಹುಲ್ ಗಾಂಧಿ 50 ವರ್ಷದ ಮುದುಕಿಗೆ ಏಕೆ ಫ್ಲೈಯಿಂಗ್ ಕಿಸ್ ಕೊಡ್ತಾರೆ ? ; ಮತ್ತೊಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ ಶಾಸಕಿ ಹೇಳಿಕೆ

ನವದೆಹಲಿ: ರಾಹುಲ್ ಗಾಂಧಿ ಅವರ ‘ಫ್ಲೈಯಿಂಗ್ ಕಿಸ್’ ವಿವಾದದ ನಡುವೆ, ಬಿಹಾರದ ಕಾಂಗ್ರೆಸ್ ಶಾಸಕಿ ನೀತು ಸಿಂಗ್ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ವ್ಯಂಗ್ಯವಾಡುವ ಮೂಲಕ ಈಗ ಹೊಸ ವಿವಾದ ಸೃಷ್ಟಿಸಿದ್ದಾರೆ. ಹುಡುಗಿಯರ ಕೊರತೆಯಿಲ್ಲ, ಹೀಗಾಗಿ ರಾಹುಲ್‌ ಗಾಂಧಿ 50 ವರ್ಷದ ಮಹಿಳೆಗೆ ಏಕೆ ಫ್ಲೈಯಿಂಗ್ ಕಿಸ್ ನೀಡುತ್ತಾರೆ ಎಂದು ನೀತು ಸಿಂಗ್‌ … Continued

ನಾರದ ಕುಟುಕು ಪ್ರಕರಣ: ಟಿಎಂಸಿ ಸಚಿವರ ಜಾಮೀನಿಗೆ ತಡೆ ನೀಡಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ: ನಾರದ ಕುಟುಕು ಪ್ರಕರಣದಲ್ಲಿ ಸೋಮವಾರ ಬಂಧಿಸಲ್ಪಟ್ಟ ನಾಲ್ವರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ನಾಯಕರಿಗೆ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ನೀಡಿದ ಜಾಮೀನಿಗೆ ಕೋಲ್ಕತ್ತಾ ಹೈಕೋರ್ಟ್ ತಡೆ ನೀಡಿದೆ. ಆರೋಪಿಗಳು ಬುಧವಾರದ ವರೆಗೆ ಕೇಂದ್ರ ತನಿಖಾ ದಳ (ಸಿಬಿಐ) ವಶದಲ್ಲಿರುತ್ತಾರೆ. ಇದಕ್ಕೂ ಮುನ್ನ ಸೋಮವಾರ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯವು ಆಡಳಿತಾರೂಢ ಟಿಎಂಸಿ … Continued

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ … Continued

ಸಂಸದರು, ಸಚಿವರು, ಶಾಸಕರಿಗೆ ಹೊಸ ಕಾರು ಖರೀದಿಗೆ ಸರ್ಕಾರದ ಸಮ್ಮತಿ..!

ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆಪವೊಡ್ಡುವ ರಾಜ್ಯ ಸರ್ಕಾರ ಇಂತಹ ಸಂದರ್ಭದಲ್ಲೂ ಸಚಿವರು ಮತ್ತು ಶಾಸಕರಿಗಾಗಿ ಹೊಸ ಕಾರುಗಳ ಖರೀದಿಗೆ ಅನುಮತಿ ನೀಡಿದೆ. 32 ಸಚಿವರು ಹಾಗೂ 28 ಸಂಸದರಿಗೆ ತಲಾ 23 ಲಕ್ಷ ರೂ.ಗಳಂತೆ ಹೊಸ ಕಾರುಗಳನ್ನು ಖರೀದಿಸಲು ಸಮ್ಮತಿಸಿದೆ. ವಿಶೇಷವೆಂದರೆ ಈ ಹಿಂದೆ ಇದೇ ಕಾರುಗಳನ್ನು ಖರೀದಿಸಲು 21 ಲಕ್ಷ ರೂ.ಗಳನ್ನು ನಿಗದಿಪಡಿಸಲಾಗಿತ್ತು. … Continued