ವಿಧಾನ ಪರಿಷತ್‌ ಸ್ಥಾನಕ್ಕೆ ಬಿಜೆಪಿಯ ಸಿ.ಪಿ.ಯೋಗೇಶ್ವರ ರಾಜೀನಾಮೆ…!

ಹುಬ್ಬಳ್ಳಿ: ರಾಮನಗರ ಜಿಲ್ಲೆಯ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ವಿಧಾನ ಪರಿಷತ್ ಸದಸ್ಯ ಹಾಗೂ ಚನ್ನಪಟ್ಟಣ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಪಿ. ಯೋಗೇಶ್ವರ ಅವರು ಸೋಮವಾರ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು, ಸೋಮವಾರ ಸಂಜೆ ಹುಬ್ಬಳ್ಳಿಗೆ ತೆರಳಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು … Continued

ಮಂಗಳೂರು : ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಮನೆ ಮೇಲೆ ಕಲ್ಲು ತೂರಾಟ

ಮಂಗಳೂರು : ಕಾಂಗ್ರೆಸ್ ನಾಯಕ ಹಾಗೂ ವಿಧಾನಪರಿಷತ್ ಸದಸ್ಯ ಐವನ್​ ಡಿಸೋಜಾ ಅವರ ಮನೆ ಮೇಲೆ ಬುಧವಾರ ರಾತ್ರಿ ಕಲ್ಲು ತೂರಾಟ ನಡೆಸಲಾಗಿದೆ. ಬುಧವಾರ ರಾತ್ರಿ ಸುಮಾರು 11 ಗಂಟೆಗೆ ಘಟನೆ ನಡೆದಿದೆ ಎನ್ನಲಾಗಿದಗ್ದು, ಈ ವೇಳೆ ಐವನ್ ಡಿಸೋಜಾ ಬೆಂಗಳೂರಿನಲ್ಲಿ ಪಕ್ಷದ ಸಭೆಗೆ ಹೋಗಿದ್ದರು. ಸುಮಾರು 5 ರಿಂದ 6 ಜನರ ಗುಂಪು ರಾತ್ರಿ … Continued

ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಷರತ್ತು ಬದ್ಧ ಜಾಮೀನು ಮಂಜೂರು

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ಜಾಮೀನು ಕೋರಿ ಸೂರಜ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ … Continued

ಲೋಕಸಭೆ ಚುನಾವಣೆ ಸನಿಹದಲ್ಲಿ ಜೆಡಿಎಸ್‌ ಗೆ ಶಾಕ್‌ : ವಿಧಾನ ಪರಿಷತ್ ಸ್ಥಾನಕ್ಕೆ ಮರಿತಿಬ್ಬೇಗೌಡ ರಾಜೀನಾಮೆ

ಹುಬ್ಬಳ್ಳಿ: ವಿಧಾನ ಪರಿಷತ್ತಿನ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಗುರುವಾರ ಸಭಾಪತಿ ಹೊರಟ್ಟಿ ನಿವಾಸದಲ್ಲಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ಅಂಗೀಕರಿಸಿದ್ದಾರೆ. ಮರಿತಿಬ್ಬೇಗೌಡರು ಸ್ವ ಇಚ್ಛೆಯಿಂದ ರಾಜೀನಾಮೆ ಕೊಡುತ್ತಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ರಾಜೀನಾಮೆ ಅಂಗೀಕಾರ ಮಾಡಲಾಗಿದೆ” ಎಂದು ಸಭಾಪತಿ ಹೊರಟ್ಟಿ ತಿಳಿಸಿದ್ದಾರೆ. ರಾಜೀನಾಮೆ … Continued

ಹಣ ಇದ್ರೆ ಮಾತ್ರ ಜೆಡಿಎಸ್‌ಲ್ಲಿ​ ಟಿಕೆಟ್, ಜೆಡಿಎಸ್​ ಅಭ್ಯರ್ಥಿಗೆ ಮತ ಕೇಳಲ್ಲ: ವರಿಷ್ಠರ ವಿರುದ್ಧ ಬಹಿರಂಗವಾಗೇ ಅಸಮಾಧಾನ ಹೊರಹಾಕಿದ ಮರಿತಿಬ್ಬೇಗೌಡ

ಮಂಡ್ಯ: ಮಂಡ್ಯ: ಹಣ ಇದ್ದರೆ ಮಾತ್ರ ಜೆಡಿಎಸ್‌ನಲ್ಲಿ ಟಿಕೆಟ್ ಸಿಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಮರಿತಿಬ್ಬೇಗೌಡ ಜೆಡಿಎಸ್‌ ವರಿಷ್ಠರ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ತಮ್ಮ ಬೆಂಬಲಿಗ ಕೀಲಾರ ಜಯರಾಂಗೆ ಟಿಕೆಟ್ ನೀಡಲಿಲ್ಲ ಎಂದು ಅಸಮಾಧಾನಗೊಂಡಿರುವ ಮರಿತಿಬ್ಬೇಗೌಡ ಅವರು, ನಾನು ಜೆಡಿಎಸ್​ ಅಭ್ಯರ್ಥಿ ಪರವಾಗಿ ಮತ ಕೇಳುವುದಿಲ್ಲ ಎಂದು … Continued

ಶಿಕ್ಷಕ ಸಮುದಾಯದ ಧ್ವನಿ ಹೊರಟ್ಟಿಗೆ ಈಗ ಸಭಾಪತಿ ಗೌರವ

ನಿಸ್ವಾರ್ಥ ಸೇವೆಯಿಂದ ಜನಮೆಚ್ಚಿನ ನಾಯಕರಾಗಿರುವ ರಾಜಕಾರಣಿಗಳಲ್ಲಿ ಸಂಖ್ಯೆ ತುಂಬ ಕಡಿಮೆ. ಅಂತಹ ಮಹಾನ್ ಮುತ್ಸದ್ದಿಗಳಲ್ಲಿ ವಿಧಾನ ಪರಿಷತ್ತಿನ ನೂತನ ಸಭಾಪತಿಗಳಾದ ಬಸವರಾಜ ಹೊರಟ್ಟಿಯವರು ಒಬ್ಬರು. ಕುದುರೆ ವ್ಯಾಪಾರದಿಂದ, ಕಲುಷಿತ ಸಾಗರವಾಗಿರುವ ಇಂದಿನ ಆಯಾರಾಂ-ಗಯಾರಾಂ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದಿನಿಂದಲೂ ಪಕ್ಷ ನಿಷ್ಠೆ ಹೊಂದಿ, ಜನಾನುರಾಗಿಯಾಗಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದ ಕೆಲವು ರಾಜಕಾರಣಿಗಳಲ್ಲಿ ಬಸವರಾಜ ಹೊರಟ್ಟಿ ಪ್ರಮುಖರಾಗಿದ್ದಾರೆ. … Continued