ಖ್ಯಾತ ನಟ ಅಜಿತ್ ನೋಡಲು ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ; ನಟನ ಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು..

ಚೆನ್ನೈ: ಪದ್ಮಭೂಷಣ ಪುರಸ್ಕೃತ ಖ್ಯಾತ ನಟ ಅಜಿತಕುಮಾರ ಅವರಿಗೆ ಬುಧವಾರ ವಿಮಾನ ನಿಲ್ದಾಣದಲ್ಲಿ ಕಾಲಿಗೆ ಗಾಯವಾಗಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿಯನ್ನು ಪಡೆದ ನಂತರ ಮಂಗಳವಾರ ನವದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಬಂದಿದ್ದ ನಟನನ್ನು ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದು, ಇದರಿಂದಾಗಿ ಅವರು ಗಾಯಗೊಂಡರು. … Continued