ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ. ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ … Continued

ಹೊಸ ಪ್ರವೃತ್ತಿಯ ಸೈಬರ್ ವಂಚನೆ : ನಕಲಿ ವಿಚಾರಣೆ, ಡೀಪ್‌ಫೇಕ್ ಬಳಕೆ, ಸ್ಕೈಪ್ ಕರೆ, ಡಿಜಿಟಲ್ ಅರೆಸ್ಟ್ ; ವಂಚಕರಿಂದ ಮಹಿಳೆಗೆ 11 ಲಕ್ಷ ರೂ. ಮೋಸ

ನೋಯ್ಡಾ ನಿವಾಸಿಯೊಬ್ಬರು ಹೊಸ ಪ್ರವೃತ್ತಿಯ ಸೈಬರ್ ವಂಚನೆಗೆ ಒಳಗಾದ ಬಗ್ಗೆ ದೂರು ನೀಡಿದ ನಂತರ ಉತ್ತರ ಪ್ರದೇಶ ಪೊಲೀಸರು ತನಿಖೆಯನ್ನು ಪ್ರಾರಂಭಿಸಿದ್ದಾರೆ, ಇದರಲ್ಲಿ ಅವರು ₹ 11 ಲಕ್ಷಕ್ಕೂ ಹೆಚ್ಚು ಹಣವನ್ನು ಕಳೆದುಕೊಂಡಿದ್ದಾರೆ ಮತ್ತು ಒಂದು ದಿನದವರೆಗೆ “ಡಿಜಿಟಲ್ ಬಂಧನ” ದಲ್ಲಿ ಅವರನ್ನು ಇರಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. .. ನೋಯ್ಡಾದ ಸೈಬರ್ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ₹ 538 ಕೋಟಿ ಮೌಲ್ಯದ ಜೆಟ್ ಏರ್‌ವೇಸ್‌ನ ಆಸ್ತಿ ವಶ

ನವದೆಹಲಿ: ಜೆಟ್ ಏರ್‌ವೇಸ್ (ಇಂಡಿಯಾ) ಲಿಮಿಟೆಡ್‌ಗೆ ಸಂಬಂಧಿಸಿದ ಆಪಾದಿತ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ₹ 500 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯವು ಜಪ್ತಿ ಮಾಡಿದೆ. ಜೆಟ್ ಏರ್‌ವೇಸ್‌ನ ಸಂಸ್ಥಾಪಕ ನರೇಶ ಗೋಯಲ್, ಪತ್ನಿ ಅನಿತಾ ಗೋಯಲ್ ಮತ್ತು ಪುತ್ರ ನಿವಾನ್ ಗೋಯಲ್ ಸೇರಿದಂತೆ ಲಂಡನ್, ದುಬೈ ಮತ್ತು ಭಾರತದ ಕೆಲವು ರಾಜ್ಯಗಳಲ್ಲಿ … Continued

ನ್ಯಾಯಾಲಯದಲ್ಲಿ ರಾಜಕೀಯ ಭಾಷಣ ಮಾಡಿದ್ದಕ್ಕೆ ಎಎಪಿಯ ಸಂಜಯ್ ಸಿಂಗ್ ಗೆ ಎಚ್ಚರಿಕೆ ನೀಡಿದ ಕೋರ್ಟ್‌

ನವದೆಹಲಿ: ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ಎಎಪಿ ಸಂಸದ ಸಂಜಯ ಸಿಂಗ್ ಅವರಿಗೆ “ರಾಜಕೀಯ ಭಾಷಣ” ನೀಡದಂತೆ ಎಚ್ಚರಿಕೆ ನೀಡಿದೆ. ದೆಹಲಿ ಮದ್ಯ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಹಾಜರುಪಡಿಸಿದ ರಾಜ್ಯಸಭಾ ಸದಸ್ಯ ಸಂಜಯ ಸಿಂಗ್‌ ಅವರು ಕೈಗಾರಿಕೋದ್ಯಮಿ ಗೌತಮ ಅದಾನಿ ಅವರ ಹೆಸರನ್ನು ನ್ಯಾಯಾಲಯದಲ್ಲಿ ಪ್ರಸ್ತಾಪಿಸಿದ್ದರು. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ ಗೋಯಲ್ ಆಸ್ತಿಗಳನ್ನು ಶೋಧಿಸಿದ ಇ.ಡಿ.

ನವದೆಹಲಿ: ವಿದೇಶಿ ವಿನಿಮಯ ಕಾನೂನು ಉಲ್ಲಂಘನೆಗೆ ಸಂಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ಬುಧವಾರ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಮತ್ತು ಅವರ ಸಹಚರರ ಆಸ್ತಿಗಳನ್ನು ಶೋಧಿಸಿದೆ ಎಂದು ವರದಿಯಾಗಿದೆ. 2019ರ ಆರಂಭದಲ್ಲಿ, ಅಬುಧಾಬಿಯ ಎತಿಹಾದ್ ಏರ್‌ವೇಸ್‌ನಿಂದ ಜೆಟ್‌ನಲ್ಲಿ $ 150 ಮಿಲಿಯನ್ ಹೂಡಿಕೆ ಮಾಡಿದ ನಂತರ ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ : ರಿಯಲ್ ಎಸ್ಟೇಟ್ ಸಂಸ್ಥೆ ಸೂಪರ್‌ಟೆಕ್‌ ಅಧ್ಯಕ್ಷನ ಬಂಧನ

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಯಲ್ ಎಸ್ಟೇಟ್ ಕಂಪನಿ ಸೂಪರ್‌ಟೆಕ್‌ನ ಅಧ್ಯಕ್ಷ ಆರ್‌.ಕೆ. ಅರೋರಾ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮಂಗಳವಾರ ನಡೆದ ಮೂರನೇ ಸುತ್ತಿನ ವಿಚಾರಣೆಯ ನಂತರ ಅರೋರಾ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿಗೆ 8 ದಿನಗಳ ಇ.ಡಿ. ಕಸ್ಟಡಿ

ಚೆನ್ನೈ : ಚೆನ್ನೈನ ಸ್ಥಳೀಯ ನ್ಯಾಯಾಲಯವು ಬಂಧಿತ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು 8 ದಿನಗಳ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ನೀಡಿದೆ. ವಿ. ಸೆಂಥಿಲ್ ಬಾಲಾಜಿ ಅವರು ಶುಕ್ರವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಚೆನ್ನೈ ಮೆಟ್ರೋಪಾಲಿಟನ್ ಸೆಷನ್ ನ್ಯಾಯಾಲಯಕ್ಕೆ ಹಾಜರಾದರು. ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಏತನ್ಮಧ್ಯೆ, ಉದ್ಯೋಗಕ್ಕಾಗಿ ನಗದು ಹಣ … Continued

ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ ದೇಶಮುಖಗೆ ಜಾಮೀನು

ಮುಂಬೈ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಹಾಗೂ ಎನ್‌ಸಿಪಿ ನಾಯಕ ಅನಿಲ ದೇಶಮುಖ್ ಅವರಿಗೆ ಬಾಂಬೆ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಜಾಮೀನು ಅಕ್ಟೋಬರ್ 13 ರಂದು ಜಾರಿಗೆ ಬರಲಿದೆ ಎಂದು ಹೈಕೋರ್ಟ್ ಹೇಳಿದೆ. ದೇಶಮುಖ ಅವರಿಗೆ 1 ಲಕ್ಷ ರೂಪಾಯಿಗಳನ್ನು ಶ್ಯೂರಿಟಿಯಾಗಿ ಠೇವಣಿ ಇಡುವಂತೆ ಮತ್ತು … Continued

ವಿಧಾನಸಭೆ ಅಧಿವೇಶನ, ಭಾರತ್‌ ಜೋಡೊ ಯಾತ್ರೆ ನಡುವೆಯೇ ಡಿಕೆಶಿಗೆ ಇ.ಡಿ ಸಮನ್ಸ್‌

ಬೆಂಗಳೂರು: ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ) ಸಮನ್ಸ್ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್​ನಲ್ಲಿ ಸೂಚಿಸಲಾಗಿದೆ. ಈ ಕುರಿತು ಟ್ವೀಟ್‌ ಮಾಡಿ ಮಾಹಿತಿ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು, ಭಾರತ್‌ ಜೋಡೊ ಯಾತ್ರೆ ಹಾಗೂ ವಿಧಾನಸಭೆ … Continued

200 ಕೋಟಿ ಸುಲಿಗೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪಿ ಎಂದು ಹೆಸರಿಸಿದ ಇ.ಡಿ

ನವದೆಹಲಿ: ₹ 200 ಕೋಟಿ ಮೊತ್ತದ ಸುಲಿಗೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ. ಸುಲಿಗೆ ಪ್ರಕರಣದ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ದೆಹಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಈ ನಟಿಯನ್ನು … Continued