ಮೂರು ಅಂತಸ್ತಿನ ಕಟ್ಟಡದ ಛಾವಣಿಯಿಂದ 4 ತಿಂಗಳ ಮಗು ಎಸೆದ ಮಂಗ
ಬರೇಲಿ: ಉತ್ತರ ಪ್ರದೇಶದ ಬರೇಲಿಯ ಗ್ರಾಮಾಂತರ ಪ್ರದೇಶದಲ್ಲಿ ಕೋತಿಯೊಂದು ಮೂರು ಅಂತಸ್ತಿನ ಮನೆಯ ಛಾವಣಿಯಿಂದ ನಾಲ್ಕು ತಿಂಗಳ ಗಂಡು ಮಗುವನ್ನು ಎಸೆದ ಪರಿಣಾಮ ಅದು ಮೃತಪಟ್ಟಿದೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಘಟನೆ ಕುರಿತು ವರದಿಯಾಗಿದ್ದು, ತನಿಖೆ ನಡೆಸಲು ಅರಣ್ಯ ಇಲಾಖೆಯ ತಂಡವನ್ನು ಕಳುಹಿಸಲಾಗಿದೆ ಎಂದು ಬರೇಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಲಲಿತ್ ವರ್ಮಾ ತಿಳಿಸಿದ್ದಾರೆ. … Continued