ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ತೋಟದ ಮನೆಯಲ್ಲಿ ಮನೆ ಕೆಲಸದಾಕೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ  ಕಾರಾಗೃಹ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಅಡಿಯಲ್ಲಿ (ಅತ್ಯಾಚಾರ) ಅಪರಾಧಕ್ಕಾಗಿ ರೇವಣ್ಣ ಅವರಿಗೆ ನ್ಯಾಯಾಲಯವು 10 ಲಕ್ಷ … Continued

ಅತ್ಯಾಚಾರ ಪ್ರಕರಣ | ಪ್ರಜ್ವಲ್‌ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು : ನಾಳೆ ಶಿಕ್ಷೆ ಪ್ರಮಾಣ ಪ್ರಕಟ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಆಗಸ್ಟ್ 1) ಪ್ರಕಟಿಸಿದೆ. ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ತೀರ್ಪು ಪ್ರಕಟಿಸಿದರು. ನಾಳೆ, … Continued

ಮುಡಾ ಪ್ರಕರಣ: ತನಿಖೆ ಮುಂದುವರಿಸಲು ಲೋಕಾಯುಕ್ತ ಪೊಲೀಸರಿಗೆ ವಿಶೇಷ ನ್ಯಾಯಾಲಯ ಅನುಮತಿ

ಬೆಂಗಳೂರು : ಮುಡಾ ಪ್ರಕರಣದಲ್ಲಿ ಮುಂದುವರಿದ ತನಿಖೆ ನಡೆಸಿ, ನಿರ್ಣಾಯಕ ವರದಿ ಸಲ್ಲಿಸಲು ಮೇ 7ಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಗಡುವು ನೀಡಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಪ್ರತಿಭಟನಾ ಅರ್ಜಿ ಹಾಗೂ ಮುಡಾ ಪ್ರಕರಣದಲ್ಲಿ ಪ್ರತಿಭಟನಾ ಅರ್ಜಿ ಸಲ್ಲಿಸಲು ತನಗೂ ಅನುಮತಿಸುವಂತೆ ಕೋರಿ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು … Continued

ಅಕ್ರಮ ಅದಿರು ಸಾಗಣೆ ಪ್ರಕರಣ: ಕಾರವಾರ ಕಾಂಗ್ರೆಸ್‌ ಶಾಸಕ ಸತೀಶ ಸೈಲ್‌ ಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು : ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಸಾವಿರಾರು ಮೆಟ್ರಿಕ್‌ ಟನ್‌ ಅದಿರು ಸಾಗಣೆ ಮಾಡಿ ರಾಜ್ಯದ ಬೊಕ್ಕಸಕ್ಕೆ ನೂರಾರು ಕೋಟಿ ನಷ್ಟ ಉಂಟು ಮಾಡಿರುವ ಆರು ಕ್ರಿಮಿನಲ್‌ ಪ್ರಕರಣಗಳಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ ಸೇರಿ ಏಳು ಮಂದಿಗೆ ಏಳು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಅಲ್ಲದೆ, ಒಟ್ಟಾರೆ ₹44.65 ಕೋಟಿ … Continued

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ … Continued

ಜಾತಿ ನಿಂದನೆ ಪ್ರಕರಣ : ಶಾಸಕ ಮುನಿರತ್ನಗೆ ಜಾಮೀನು ಮಂಜೂರು

ಬೆಂಗಳೂರು : ಬಿಬಿಎಂಪಿ ಮಾಜಿ ಸದಸ್ಯನಿಗೆ ಜಾತಿ ಉಲ್ಲೇಖಿಸಿ ನಿಂದಿಸಿದ ಆರೋಪದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಗುರುವಾರ ಜಾಮೀನು ಮಂಜೂರು ಮಾಡಿದೆ. ಬಿಬಿಎಂಪಿ ಮಾಜಿ ಸದಸ್ಯ ವೇಲು ನಾಯ್ಕರ್‌ ನೀಡಿದ್ದ ದೂರಿನ ಅನ್ವಯ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾಗಿರುವ ಜಾತಿ ನಿಂದನೆ ಆರೋಪದ ಪ್ರಕರಣದಲ್ಲಿ ಜಾಮೀನು ಕೋರಿ ರಾಜರಾಜೇಶ್ವರಿ … Continued

ಮುಡಾ ಹಗರಣ | ಸಿಎಂ ಸಿದ್ದರಾಮಯ್ಯ ವಿರುದ್ಧದ ಖಾಸಗಿ ದೂರು ; ಆದೇಶ ಕಾಯ್ದಿರಿಸಿದ ವಿಶೇಷ ಕೋರ್ಟ್‌

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ 14 ನಿವೇಶನ ಪಡೆದಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ವಿಶೇಷ ತನಿಖಾ ದಳ ಅಥವಾ ಬೇರಾವುದೇ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸುವುದರ ಕುರಿತಾದ ಆದೇಶವನ್ನು ಬೆಂಗಳೂರಿನ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಸೂರಜ ರೇವಣ್ಣ ನಿರೀಕ್ಷಣಾ ಜಾಮೀನು ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಯುವಕನ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಜೀವ ಬೆದರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಡಿಎಸ್‌ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಆದೇಶವನ್ನು ಜುಲೈ 18ಕ್ಕೆ ಕಾಯ್ದಿರಿಸಿದೆ. ಸೂರಜ್‌ ಬೆಂಬಲಿಗ ಎನ್ನಲಾಗಿರುವ ಎಂ.ಎಲ್‌. ಶಿವಕುಮಾರ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ … Continued

ಅತ್ಯಾಚಾರ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ವಿಶೇಷ ನ್ಯಾಯಾಲಯ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆಯಲ್ಲಿ ದಾಖಲಾಗಿರುವ ಮೊದಲನೇ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸತ್ರ ನ್ಯಾಯಾಲಯವು ಬುಧವಾರ ಜಾಮೀನು ನಿರಾಕರಿಸಿದೆ. ಪ್ರಜ್ವಲ್‌ ರೇವಣ್ಣರ ಜಾಮೀನು ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಮಂಗಳವಾರ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಬುಧವಾರ ಪ್ರಕಟಿಸಿದ್ದಾರೆ. ಪ್ರಜ್ವಲ್‌ … Continued

ಅತ್ಯಾಚಾರ ಆರೋಪದ ಪ್ರಕರಣ: ಪ್ರಜ್ವಲ್‌ ರೇವಣ್ಣ 6 ದಿನ ಎಸ್‌ಐಟಿ ಕಸ್ಟಡಿಗೆ

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶುಕ್ರವಾರ ಬೆಳಗ್ಗೆ ಜರ್ಮನಿಯಿಂದ ವಾಪಸ್ಸಾಗುವಾಗ ಬೆಂಗಳೂರು ವಿಮಾನ ನಿಲ್ದಾಣದಿಂದ ಬಂಧಿಸಲಾಗಿದ್ದು, ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಅವರನ್ನು ಜೂನ್ 6ರವರೆಗೆ ಎಸ್‌ಐಟಿ ಕಸ್ಟಡಿಗೆ ಕಸ್ಟಡಿಗೆ ನೀಡಿದೆ. ಬಂಧಿತ ಪ್ರಜ್ವಲ್‌ ಅವರನ್ನು ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ವಿಶೇಷ ಮ್ಯಾಜಿಸ್ಟ್ರೇಟ್‌ ಕೆ.ಎನ್‌. ಶಿವಕುಮಾರ … Continued