1200 ಟ್ರ್ಯಾಕ್ಟರ್‌ಗಳೊಂದಿಗೆ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಪುನರಾರಂಭಿಸಲು 14000 ರೈತರು ಸಜ್ಜು : ದೆಹಲಿಯಲ್ಲಿ ಹೈ ಅಲರ್ಟ್

ನವದೆಹಲಿ : ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಗೆ ಸಂಬಂಧಿಸಿದಂತೆ ಕೇಂದ್ರದೊಂದಿಗಿನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರೈತರು ಇಂದು, ಬುಧವಾರ ಪಂಜಾಬ್-ಹರಿಯಾಣ ಗಡಿಯಿಂದ ತಮ್ಮ ‘ದೆಹಲಿ ಚಲೋ’ ಪ್ರತಿಭಟನಾ ಮೆರವಣಿಗೆ ಪುನರಾರಂಭಿಸುತ್ತಿದ್ದಾರೆ. ಪೊಲೀಸ್ ಬ್ಯಾರಿಕೇಡ್‌ಗಳನ್ನು ಕೆಡವಲು ಪ್ರತಿಭಟನಾಕಾರರು ತಂದ ಉಪಕರಣಗಳನ್ನು ವಶಪಡಿಸಿಕೊಳ್ಳುವಂತೆ ಹರಿಯಾಣ ಪೊಲೀಸರು ಪಂಜಾಬ್ ಪೊಲೀಸರಿಗೆ ಒತ್ತಾಯಿಸಿದ್ದಾರೆ. ಸುಮಾರು 14,000 ರೈತರು 1,200 ಟ್ರ್ಯಾಕ್ಟರ್ … Continued

ಕನಿಷ್ಠ ಬೆಂಬಲ ಬೆಲೆ : ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತರು, ಫೆ.21ರಂದು ದೆಹಲಿ ಚಲೋ ಮೆರವಣಿಗೆ ಪುನರಾರಂಭ

ನವದೆಹಲಿ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನೀಡುವ ಕೇಂದ್ರ ಸರ್ಕಾರದ ಹೊಸ ಯೋಜನೆಯಲ್ಲಿ ರೈತರ ಹಿತಾಸಕ್ತಿ ಇಲ್ಲ ಎಂದು ರೈತ ಸಂಘಟನೆಗಳು ಕೇಂದ್ರ ಸರ್ಕಾರ ಮುಂದಿಟ್ಟ ಪ್ರಸ್ತಾಪವನ್ನು ಸೋಮವಾರ ತಿರಸ್ಕರಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ನಂತರ, ಪ್ರತಿಭಟನಾನಿರತ ರೈತರು ಫೆಬ್ರವರಿ 21 ರ ಬೆಳಿಗ್ಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆ ಪುನರಾರಂಭಿಸುವುದಾಗಿ ಹೇಳಿದ್ದಾರೆ. ಪ್ರಸ್ತಾವನೆಯಲ್ಲಿ … Continued

ರೈತರು-ಕೇಂದ್ರದ ಮಧ್ಯೆ ಸಭೆ ; ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿಗೆ 5 ವರ್ಷ ಕನಿಷ್ಠ ಬೆಂಬಲ ಬೆಲೆ ಪ್ರಸ್ತಾಪ, ಪ್ರತಿಭಟನೆಗೆ ತಾತ್ಕಾಲಿಕ ತಡೆ, ಪ್ರಸ್ತಾವ ಕುರಿತು 2 ದಿನ ಚರ್ಚೆ

ನವದೆಹಲಿ: ರೈತಪರ ಸಂಘಟನೆಗಳೊಂದಿಗಿನ ತಡರಾತ್ರಿ ಸಂಧಾನ ಬಹುತೇಕ ಸಫಲವಾಗಿದೆ ಎಂದು ಹೇಳಲಾಗಿದ್ದು, ‘ದ್ವಿದಳ ಧಾನ್ಯ, ಮೆಕ್ಕೆಜೋಳ, ಹತ್ತಿ ಬೆಳೆಗಳನ್ನು 5 ವರ್ಷಗಳ ವರೆಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ)ಯಲ್ಲಿ ಖರೀದಿಸುವ ಕುರಿತು ಪ್ರಸ್ತಾಪ ಮುಂದಿಡಲಾಗಿದೆ ಎಂದು ಸಂಧಾನ ಮಾತುಕತೆಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ದ್ವಿದಳ ಧಾನ್ಯಗಳು, … Continued

ತೆಂಗು ಬೆಳೆಗಾರರಿಗೆ ಗುಡ್ ನ್ಯೂಸ್ : ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

ನವದೆಹಲಿ: ಕೊಬ್ಬರಿಗೆ ಬೆಂಬಲ ಬೆಲೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮಿಲ್ಲಿಂಗ್ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಲಿಗೆ 11,160 ರೂ.ಗಳೆಂದು ನಿಗದಿ ಪಡಿಸಲಾಗಿದೆ. ಅಂದರೆ ಪ್ರತಿ ಕ್ವಿಂಟಲ್‌ಗೆ 300 ರೂ. ಹೆಚ್ಚಿಸಲಾಗಿದೆ. ಅಂತೆಯೇ, ಚೆಂಡು ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ … Continued

ಎಂಎಸ್‌ಪಿ, ಎಫ್‌ಐಆರ್‌ಗಳ ಹಿಂಪಡೆಯುವಿಕೆ, ಸಚಿವ ಅಜಯ್ ಮಿಶ್ರಾ ವಜಾ: ಬೇಡಿಕೆಗಳ ಪಟ್ಟಿ ಮುಂದಿಟ್ಟ ಎಸ್‌ಕೆಎಂ, ಹೋರಾಟ ಮುಂದುವರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ, 40ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್‌ ಮೋರ್ಚಾ ಭಾನುವಾರ (ನವೆಂಬರ್ 21 ) ದೆಹಲಿ-ಹರಿಯಾಣ ಗಡಿಯ ಸಮೀಪವಿರುವ ಸಿಂಘು ಪ್ರತಿಭಟನಾ ಸ್ಥಳದಲ್ಲಿ ಮುಂದಿನ ಮಾರ್ಗೋಪಾಯಗಳ ಕುರಿತು ಚರ್ಚಿಸಲು ಸಭೆ ನಡೆಸಿತು. ನವೆಂಬರ್ 22 ರಂದು ಲಕ್ನೋದಲ್ಲಿ … Continued

ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿ ಮಾಡಿ: ಪ್ರಧಾನಿಗೆ ಟಿಕಾಯಿತ್‌ ಆಗ್ರಹ

ನವ ದೆಹಲಿ: ಹೊಸ ವಿವಾದಾತ್ಮಕ ಕೃಷಿ-ಮಾರುಕಟ್ಟೆ ಕಾನೂನುಗಳನ್ನು ರದ್ದುಪಡಿಸುವುದರ ಜೊತೆಗೆ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೆ ತರಬೇಕು ಎಂಬ ರೈತರ ಬೇಡಿಕೆಯನ್ನುರಾಕೇಶ ಟಿಕಾಯಿತ್‌ ಪುನರುಚ್ಚರಿಸಿದ್ದಾರೆ ಸೋಮವಾರ ರಾಜ್ಯಸಭೆಯಲ್ಲಿ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಮುಂದುವರಿಯಲಿದೆ ಎಂಬ ಪ್ರಧಾನಿ ನರೇಂದ್ರ ಮೋದಿ  ಘೋಷಣೆಗೆ ಪ್ರತಿಕ್ರಿಯಿಸಿದ ರೈತ ಮುಖಂಡ ರಾಕೇಶ್ ಟಿಕಾಯಿತ್‌ ಎಂಎಸ್‌ಪಿ ಕಾನೂನಿಗೆ ಒತ್ತಾಯಿಸಿದರು … Continued