ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ದೊಡ್ಡ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಜಾರಿ ಮಾಡಿದ್ದ ಸಮನ್ಸ್‌/ನೋಟಿಸ್‌ ಹಾಗೂ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) … Continued

ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿ ಅರ್ಜಿ | ಸಿಎಂಗೆ ಹೈಕೋರ್ಟ್‌ ನೋಟಿಸ್‌ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ

ಬೆಂಗಳೂರು : ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್‌ 25ರ ವರೆಗೆ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬುದರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್‌ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ದಾವೆ ದಾಖಲಿಸಲು ಕೋರಿ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಕೆ

ಬೆಂಗಳೂರು : ತಮ್ಮ ವಿರುದ್ಧ ಕೀಳು ಅಭಿರುಚಿಯ ಹೇಳಿಕೆಯನ್ನು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಬೆಂಗಳೂರಿನ ಜನಪ್ರತಿನಿಧಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮನವಿ ಆಧರಿಸಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಶುರುವಾಯ್ತು ಇ.ಡಿ.ಸಂಕಷ್ಟ ;ಇಸಿಐಆರ್ ದಾಖಲು

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (ಮುಡಾ) ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಪ್ರಕರಣ ದಾಖಲಿಸಿದೆ. ಜಾರಿ ನಿರ್ದೇಶನಾಲವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣದಡಿ ದಾಖಲಿಸಿದ್ದು, ಇದರಿಂದ ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಈಗ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ವಿಶೇಷ ನ್ಯಾಯಾಲಯದ … Continued

ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ಮುಡಾ ಹಗರಣ: ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಕುಮಾರಸ್ವಾಮಿ

ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ಹಾಗೂ ತಮ್ಮ ಕುಟುಂಬದ ಪಾತ್ರವೇ ಇಲ್ಲ ಎಂದು ಹೇಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಂದು ದಾಖಲೆ ಬಿಡುಗಡೆ ಮಾಡಿ ಉತ್ತರ ನೀಡಿದ್ದಾರೆ. ಎಕ್ಸ್ ಖಾತೆಯಲ್ಲಿ ಮುಡಾ ದಾಖಲೆ ಪೋಸ್ಟ್ ಮಾಡಿರುವ ಅವರು, ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವ ಮುಡಾ … Continued