ಮುಡಾ ಮಾಜಿ ಆಯುಕ್ತ ನಟೇಶಗೆ ನೀಡಿದ್ದ ಸಮನ್ಸ್‌ ವಜಾ: ಇ.ಡಿ. ಮೇಲ್ಮನವಿ ವಿಚಾರಣೆಗೆ ಪರಿಗಣಿಸಿದ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ ಎಂ ಪಾರ್ವತಿಗೆ 14 ನಿವೇಶನಗಳನ್ನು ಹಂಚಿಕೆ ಮಾಡಿದ್ದ ಅವಧಿಯಲ್ಲಿ ಮುಡಾ ಆಯುಕ್ತರಾಗಿದ್ದ ಡಾ. ಡಿ ಬಿ ನಟೇಶ ಅವರ ಮನೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿ, ಸಮನ್ಸ್‌ ಜಾರಿ ಮಾಡಿದ್ದನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಜಾರಿ ನಿರ್ದೇಶನಾಲಯವು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್‌ ಸೋಮವಾರ … Continued

ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ದೊಡ್ಡ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಜಾರಿ ಮಾಡಿದ್ದ ಸಮನ್ಸ್‌/ನೋಟಿಸ್‌ ಹಾಗೂ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) … Continued

ಮುಡಾ ಹಗರಣ : ಲೋಕಾಯುಕ್ತದಿಂದ ನ್ಯಾಯಾಲಯಕ್ಕೆ 11000 ಪುಟಗಳ ವರದಿ ಸಲ್ಲಿಕೆ

ಬೆಂಗಳೂರು: ಮುಡಾ ಹಗರಣಕ್ಕೆ (MUDA scam) ಸಂಬಂಧಿಸಿದಂತೆ ಇಂದು, ಗುರುವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ (Lokayukta) ಪೊಲೀಸ್ ಟಿ.ಉದೇಶ ಅವರು ಒಟ್ಟು 11 ಸಾವಿರ ಪುಟಗಳ ತನಿಖೆಯ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ,  ಸಿದ್ಧಾರಮಯ್ಯ ಹಾಗೂ ಇತರ ಮೂವರ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆ ಇದೆ ಎಂದು ಲೋಕಾಯುಕ್ತ ಪೊಲೀಸರು ಅವರಿಗೆ ಕ್ಲೀನ್‌ಚಿಟ್‌ನೀಡಿದ್ದಾರೆ. … Continued

ಮುಡಾ ಪ್ರಕರಣ : ಹೈಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ … Continued

ಮುಡಾದ ದಟ್ಟಗಳ್ಳಿಯ ಜಮೀನು ಜಪ್ತಿ ಪ್ರಕರಣ | ಆತುರದ ಕ್ರಮಕ್ಕೆ ಮುಂದಾಗುವುದು ಬೇಡ : ಇ.ಡಿ.ಗೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆಯ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ದಟ್ಟಗಳ್ಳಿಯಲ್ಲಿರುವ ಜಮೀನನ್ನು ಜಾರಿ ನಿರ್ದೇಶನಾಲಯ (ಇ ಡಿ) ಜಪ್ತಿ ಮಾಡಿದ್ದು, ಸದ್ಯ ಈ ಕುರಿತು ಯಾವುದೇ ಆತುರದ ಕ್ರಮಕ್ಕೆ ಮುಂದಾಗುವುದು ಬೇಡ ಎಂದು ಕರ್ನಾಟಕ ಹೈಕೋರ್ಟ್‌ ಬುಧವಾರ ಇ.ಡಿ.ಗೆ ನಿರ್ದೇಶಿಸಿದೆ. ಇ.ಡಿ. ಕ್ರಮದ ವಿರುದ್ಧ … Continued

ಮುಡಾ ಪ್ರಕರಣ | ಸಿಎಂ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಾದ- ಪ್ರತಿವಾದ ಆಲಿಸಿ … Continued

ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ … Continued

ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued

ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, … Continued

ಮುಡಾ ಹಗರಣ | ಸಿದ್ದರಾಮಯ್ಯ ಪತ್ನಿಗೆ ಭೂ ಹಂಚಿಕೆ ಅಕ್ರಮ ; ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ. ಪತ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸುವಲ್ಲಿ ಮಹತ್ವದ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಲೋಕಾಯುಕ್ತಕ್ಕೆ ತನ್ನ ಇತ್ತೀಚೆಗೆ ಬರೆದ ಪತ್ರದಲ್ಲಿ ಶಾಸನಬದ್ಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿವೇಶನಗಳನ್ನು “ಕಾನೂನುಬಾಹಿರವಾಗಿ” ಹಂಚಲಾಗಿದೆ ಎಂದು ಹೇಳಿಕೊಂಡಿದೆ. … Continued