ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued

ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, … Continued

ಮುಡಾ ಹಗರಣ | ಸಿದ್ದರಾಮಯ್ಯ ಪತ್ನಿಗೆ ಭೂ ಹಂಚಿಕೆ ಅಕ್ರಮ ; ತನಿಖೆ ಪ್ರಗತಿ ಬಗ್ಗೆ ಲೋಕಾಯುಕ್ತಕ್ಕೆ ಇ.ಡಿ. ಪತ್ರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ಹಸ್ತಾಂತರಿಸುವಲ್ಲಿ ಮಹತ್ವದ ಅವ್ಯವಹಾರ ನಡೆದಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಹೇಳಿದೆ. ಜಾರಿ ನಿರ್ದೇಶನಾಲಯ (ಇಡಿ) ಕರ್ನಾಟಕ ಲೋಕಾಯುಕ್ತಕ್ಕೆ ತನ್ನ ಇತ್ತೀಚೆಗೆ ಬರೆದ ಪತ್ರದಲ್ಲಿ ಶಾಸನಬದ್ಧ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ನಿವೇಶನಗಳನ್ನು “ಕಾನೂನುಬಾಹಿರವಾಗಿ” ಹಂಚಲಾಗಿದೆ ಎಂದು ಹೇಳಿಕೊಂಡಿದೆ. … Continued

ಸಿಬಿಐನಿಂದ ಮುಡಾ ಪ್ರಕರಣದ ತನಿಖೆ ಕೋರಿ ಅರ್ಜಿ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ಆರೋಪ ಒಳಗೊಂಡ ಮುಡಾ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನಿಗಾವಣೆಯಲ್ಲಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇಂದು, ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ … Continued

ಮುಡಾ ಹಗರಣ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಕಾಂಗ್ರೆಸ್‌

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಕ್ರಮವಾಗಿ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಶನಿವಾರ ಮತ್ತೊಂದು ದೂರು ದಾಖಲಿಸಿದೆ. ಸ್ನೇಹಮಹಿ ಕೃಷ್ಣ ಅವರನ್ನು ತಕ್ಷಣ ಬಂಧಿಸಿ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ವಕ್ತಾರ ಎಂ.ಲಕ್ಷಣ ಅವರು ಶನಿವಾರ ಮೈಸೂರಿನ ಲಕ್ಷ್ಮಿಪುರಂ … Continued

ಮುಡಾ ಪ್ರಕರಣ: ನ.23ಕ್ಕೆ ಸಿಎಂ ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧದ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ವಜಾ ಮಾಡಿದ್ದ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಹೈಕೋರ್ಟ್‌ನ ವಿಭಾಗೀಯ ಪೀಠದಲ್ಲಿ ನವೆಂಬರ್‌ 23ರಂದು ವಿಚಾರಣೆ ನಡೆಸಲಿದೆ. … Continued

ಮುಡಾ ಹಗರಣ | ನೋಂದಣಿಗೂ ಮೊದಲೇ ಶುಲ್ಕ ಪಾವತಿ : ಸ್ನೇಹಮಯಿ ಕೃಷ್ಣ ಆರೋಪ ; ಸಿದ್ದರಾಮಯ್ಯ ವಿರುದ್ಧ ದಾಖಲೆ ಬಿಡುಗಡೆ

ಬೆಂಗಳೂರು: ಮುಡಾ ಹಗರಣದ (MUDA Scam) ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ದೂರುದಾರರಾದ ಸ್ನೇಹಮಯಿ ಕೃಷ್ಣ ಮತ್ತೊಂದು ಆರೋಪ ಮಾಡಿದ್ದು, ಈ ಸಂಬಂದ ದಾಖಲೆ ಬಿಡುಗಡೆ ಮಾಡಿದ್ದಾರೆ. ನಿವೇಶನ ನೋಂದಣಿಯಾಗುವ ಮುನ್ನವೇ ನೋಂದಣಿ ಶುಲ್ಕ ಪಾವತಿ ಮಾಡಲಾಗಿದೆ ಎಂದು ಸ್ನೇಹಮಯಿ ಕೃಷ್ಣ ಅವರು ಆರೋಪಿಸಿದ್ದು, ಈ ಸಂಬಂಧ ಫೇಸ್‌ಬುಕ್‌ನಲ್ಲಿ ದಾಖಲೆಯೊಂದನ್ನು ಹಂಚಿಕೊಂಡಿದ್ದಾರೆ. … Continued

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ ಐ ಆರ್‌

ಮೈಸೂರು : ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಬುಧವಾರ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಮಂಗಳವಾರ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ನೀಡಿದ್ದ ದೂರಿನ ಆಧಾರದ ಮೇಲೆ. ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ದೇವರಾಜ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಸಚಿವ ಜಮೀರ್ ಅಹ್ಮದ್‌ ಗೆ ಕಾನೂನು ಸಂಕಷ್ಟ ; ಅಗತ್ಯ ಕ್ರಮಕ್ಕೆ ರಾಜ್ಯಪಾಲರ ಸೂಚನೆ

ಬೆಂಗಳೂರು: ನ್ಯಾಯಾಂಗ ನಿಂದನೆ ಆರೋಪದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಅಡ್ವೊಕೇಟ್ ಜನರಲ್​ಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾದ ಟಿ.ಜೆ. ಅಬ್ರಹಾಂ ಅವರು, ವಸತಿ ಸಚಿವ ಜಮೀರ್‌ ಅಹಮದ್ ಖಾನ್‌ ಮುಡಾ ಪ್ರಕರಣ … Continued

ಮುಡಾ ಹಗರಣ : ಸತತ ಎರಡು ಗಂಟೆಗಳ ಕಾಲ ಸಿಎಂ ಸಿದ್ದರಾಮಯ್ಯ ವಿಚಾರಣೆ ನಡೆಸಿದ ಲೋಕಾಯುಕ್ತ ಪೊಲೀಸರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಇಂದು, ಬುಧವಾರ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದರು. ಲೋಕಾಯುಕ್ತ ಪೊಲೀಸರು ಸತತ 2 ತಾಸುಗಳ ಕಾಲ ಸಿದ್ದರಾಮಯ್ಯ ಅವರನ್ನು ವಿಚಾರಣೆ ನಡೆಸಿದ್ದು, ಅವರಿಗೆ ಸುಮಾರು 40 ಕ್ಕೂ ಹೆಚ್ಚು ಪ್ರಶ್ನೆಗಳನ್ನು ಕೇಳಲಾಯಿತು ಎಂದು ಹೇಳಲಾಗಿದೆ. ಸಿದ್ದರಾಮಯ್ಯ ಅವರು ಲೋಕಾಯುಕ್ತ ತನಿಖೆ ಎದುರಿಸುತ್ತಿರುವ ಕರ್ನಾಟಕದ … Continued