ಮುಡಾ ಹಗರಣ : 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿದ ಇ.ಡಿ.; ಅಧಿಕಾರಿಗಳಿಗೆ ಶುರುವಾಯ್ತು ಭಯ…

ಬೆಂಗಳೂರು : ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.) ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸಿದ್ದ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ. ಸೋಮವಾರವಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದು ಮಲ್ಲಿಕಾರ್ಜುನ, ಭೂಮಿ ಮಾರಾಟ ಮಾಡಿದ್ದ ದೇವರಾಜ ವಿರುದ್ಧ ಅಕ್ರಮ ಹಣ ವರ್ಗಾವಣೆ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಪತ್ನಿ ವಾಪಸ್​ ನೀಡಿದ್ದ 14 ನಿವೇಶನಗಳ ಖಾತೆ ರದ್ದು…!

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆ ಹಾಗೂ ಕ್ರಯಪತ್ರವನ್ನು ಮುಡಾ ರದ್ದುಗೊಳಿಸಿದೆ ಎಂದು ವರದಿಯಾಗಿದೆ. ಹಗರಣದ ಕೇಂದ್ರಬಿಂದುವಾಗಿರುವ 14 ನಿವೇಶನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಯಿಂದ ಹಿಂಪಡೆಯಲು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಒಪ್ಪಿಗೆ … Continued

ಮುಡಾ ಪ್ರಕರಣಕ್ಕೆ ಮಹತ್ವದ ಟ್ವಿಸ್ಟ್‌ : 14 ನಿವೇಶನ ಹಿಂದಿರುಗಿಸಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ ; ಮುಡಾ ಆಯುಕ್ತರಿಗೆ ಪತ್ರ….!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎನ್. ಪಾರ್ವತಿ ಅವರು ತಮ್ಮ ಕುಟುಂಬದ ವಿರುದ್ಧದ ಪ್ರಕರಣಗಳ ಕೇಂದ್ರ ಬಿಂದುವಾಗಿರುವ ಭೂಮಿಯನ್ನು ಹಿಂದಿರುಗಿಸುವುದಾಗಿ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ)ಕ್ಕೆ ಪತ್ರ ಬರೆದಿದ್ದಾರೆ. ತನ್ನ ಆತ್ಮಸಾಕ್ಷಿಯಂತೆ ನಡೆಯುತ್ತಿದ್ದೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ. “ಈ ಪ್ಲಾಟ್‌ಗಳನ್ನು ಹಿಂದಿರುಗಿಸುವುದರ ಜೊತೆಗೆ, ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆಗೆ ನಾನು … Continued

ಮುಡಾ ಹಗರಣ ​: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ; ಇ.ಡಿ.ಗೆ ದೂರು ನೀಡಿದ ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗುತ್ತಿದ್ದ ಬೆನ್ನಲ್ಲೇ RTI ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಜಾರಿ ನಿರ್ದೇಶನಾಲಯಕ್ಕೂ(ED) ದೂರು ಸಲ್ಲಿಸಿದ್ದಾರೆ. ಒಂದು ವೇಳೆ ಈ ಪ್ರಕರಣ ದಾಖಲಾದಲ್ಲಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಬಹುದಾಗಿದೆ. ಬೆಂಗಳೂರು ಶಾಂತಿನಗರದಲ್ಲಿರುವ ಜಾರಿ ನಿರ್ದೇಶನಾಲಯದ ಜಂಟಿ ನಿರ್ದೇಶಕರಿಗೆ ಇ ಮೇಲ್ ನಲ್ಲಿ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಕರ್ನಾಟಕದಲ್ಲಿ ಸಿಬಿಐಗೆ ನೀಡಿದ್ದ ಮುಕ್ತ ತನಿಖೆಗೆ ಅನುಮತಿ ಅಧಿಸೂಚನೆ ವಾಪಸ್‌ ; ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಗುರುವಾರ ತನ್ನ ಒಪ್ಪಿಗೆಯನ್ನು ಹಿಂಪಡೆದಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ … Continued

ಸಿದ್ದರಾಮಯ್ಯ ವಿರುದ್ಧ ತನಿಖೆ ಏಕೆ ಅಗತ್ಯ ? ಹೈಕೋರ್ಟ್ ಹೇಳಿದ್ದೇನು…?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಮರೆಯಲ್ಲಿ ಇಲ್ಲ ಎಂದು ಒಪ್ಪಿಕೊಳ್ಳುವುದು ಕಷ್ಟ. ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ತೀರ್ಪಿನಲ್ಲಿ ಹೇಳಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಸೆಕ್ಷನ್ 17 ಎ ಭ್ರಷ್ಟಾಚಾರ ನಿರ್ಮೂಲನೆ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued