ಮುಂಬೈ | ಬಾಲಿವುಡ್‌ ನಟ-ನಿರ್ಮಾಪಕ ಧೀರಜಕುಮಾರ ನಿಧನ

ಮುಂಬೈ :  ಓಂ ನಮಃ ಶಿವಾಯ ಮತ್ತು ಅದಾಲತ್ ಎಂಬ ಜನಪ್ರಿಯ ದೂರದರ್ಶನ ಕಾರ್ಯಕ್ರಮಗಳನ್ನು ನಿರ್ಮಿಸಿದ ಹಿರಿಯ ನಟ-ನಿರ್ಮಾಪಕ ಧೀರಜಕುಮಾರ ಮಂಗಳವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಕುಟುಂಬದ ಸ್ನೇಹಿತರೊಬ್ಬರು ತಿಳಿಸಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಧೀರಜಕುಮಾರ ತೀವ್ರ ನ್ಯುಮೋನಿಯಾದಿಂದ ಬಳಲುತ್ತಿದ್ದರು ಮತ್ತು ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ … Continued

ವೀಡಿಯೊ..| ಕಳಪೆ ಗುಣಮಟ್ಟದ ಆಹಾರ ನೀಡಿದ್ದಾರೆಂದು ಕ್ಯಾಂಟೀನ್ ಮ್ಯಾನೇಜರ್‌ ಮುಖಕ್ಕೆ ಗುದ್ದಿದ ಶಿವಸೇನೆ ಶಾಸಕ…!

ಮುಂಬೈ: ಮುಂಬೈನ ಆಕಾಶವಾಣಿ ಶಾಸಕರ ನಿವಾಸದಲ್ಲಿ ಶಾಸಕ ಸಂಜಯ ಗಾಯಕ್ವಾಡ್, ತಮಗೆ ನೀಡಲಾದ ಆಹಾರದ ಗುಣಮಟ್ಟದ ಬಗ್ಗೆ ಅಸಮಾಧಾನಗೊಂಡು ಕ್ಯಾಂಟೀನ್ ಮ್ಯನೇಜರ್‌ ಅವರನ್ನು ಥಳಿಸುತ್ತಿರುವ ವೀಡಿಯೊವೊಂದು ವೈರಲ್ ಆಗಿದೆ. ಬುಲ್ದಾನಾ ಕ್ಷೇತ್ರ ಪ್ರತಿನಿಧಿಸುವ ಶಾಸಕ ಸಂಜಯ ಗಾಯಕವಾಡ್ ಅವರು ಶಾಸಕರ ಅತಿಥಿ ಗೃಹ ಕ್ಯಾಂಟೀನ್‌ನಲ್ಲಿ ನೀಡಲಾಗುವ ಆಹಾರದ ಗುಣಮಟ್ಟ ಕಳಪೆಯಾಗಿರುವ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದರು ಎಂದು … Continued

ರಾಜ್ ಠಾಕ್ರೆ ಸಂಕಲ್ಪ, ಉದ್ಧವರಿಂದ ದೊಡ್ಡ ಸುಳಿವು : 20 ವರ್ಷಗಳ ನಂತರ ಠಾಕ್ರೆ ಸಹೋದರರ ಪುನರ್ಮಿಲನ

ಮುಂಬೈ: ರಾಜಕೀಯದಲ್ಲಿ ಎರಡು ದಶಕಗಳಿಂದ ಬೇರೆಬೇರೆಯಾಗಿದ್ದ ಸೋದರಸಂಬಂಧಿಗಳಾದ ಉದ್ಧವ್ ಠಾಕ್ರೆ ಮತ್ತು ರಾಜ ಠಾಕ್ರೆ ಇಂದು, ಶನಿವಾರ ಮುಂಬೈನಲ್ಲಿ ನಡೆದ ಸಾರ್ವಜನಿಕ ರ್ಯಾಲಿಯಲ್ಲಿ ಮತ್ತೆ ಒಂದಾಗಿದ್ದಾರೆ. ‘ಅವಾಜ್ ಮರಾಠಿಚಾ’ (ಮರಾಠಿಯ ಧ್ವನಿ) ಎಂಬ ಶೀರ್ಷಿಕೆಯ ಈ ಕಾರ್ಯಕ್ರಮವನ್ನು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಜಂಟಿಯಾಗಿ ಆಯೋಜಿಸಿದ್ದು, 2005 ರ … Continued

ಅಪ್ರಾಪ್ತ ವಿದ್ಯಾರ್ಥಿಗೆ ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಮುಂಬೈ ಶಿಕ್ಷಕಿ…! ಆತಂಕ ನಿವಾರಕ ಮಾತ್ರೆಯನ್ನೂ ನೀಡುತ್ತಿದ್ದಳಂತೆ

ಮುಂಬೈ:   ದೇಶವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದ್ದು, ಶಿಕ್ಷಕಿಯೊಬ್ಬಳು ವಿದ್ಯಾರ್ಥಿಯೊಬ್ಬನನ್ನು 5 ಸ್ಟಾರ್‌ ಹೋಟೆಲ್‌ಗೆ ಕರೆದೊಯ್ದು ಅನೇಕ ಬಾರಿ ಲೈಂಗಿಕ ದೌರ್ಜಜ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಮುಂಬೈಯ ಪ್ರತಿಷ್ಠಿತ ಶಾಲೆಯೊಂದರ 40 ವರ್ಷದ, ಇಂಗ್ಲಿಷ್‌ ಶಿಕ್ಷಕಿ ಕಳೆದೊಂದು ವರ್ಷದಿಂದ 16 ವರ್ಷದ ಬಾಲಕನ್ನು ಹೊಟೇಲ್‌ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾಳೆ. ಸದ್ಯ ಆಕೆಯನ್ನು … Continued

42ನೇ ವಯಸ್ಸಿನಲ್ಲೇ ʼಕಾಂಟಾ ಲಗಾʼ ಖ್ಯಾತಿಯ ಶೆಫಾಲಿ ಜರಿವಾಲಾ ಸಾವು

ಮುಂಬೈ: ‘ಕಾಂಟಾ ಲಗಾ’ ಹಾಡಿನ ಖ್ಯಾತಿಯ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರನ್ನು ಅವರ ಪತಿ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿಗೆ ಕಾರಣವನ್ನು ಅವರ ಕುಟುಂಬ ಸದಸ್ಯರು ಇನ್ನೂ ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ … Continued

ಕಸದ ರಾಶಿಯ ಮಧ್ಯೆ ಕ್ಯಾನ್ಸರ್ ಪೀಡಿತ ವೃದ್ಧ ಮಹಿಳೆ ಪತ್ತೆ : ಮೊಮ್ಮಗ ನನ್ನನ್ನು ಇಲ್ಲಿ ಬಿಟ್ಟು ಹೋದ ಎಂದ ವೃದ್ಧೆ…!

ಮುಂಬೈ: ಮುಂಬೈನಲ್ಲಿ ಕಸದ ರಾಶಿಗಳ ಮೇಲೆ ಬಿದ್ದಿದ್ದ ವೃದ್ಧ ಮಹಿಳೆಯೊಬ್ಬರ ದಯನೀಯ ಸ್ಥಿತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯನ್ನು ಅವರ ಮೊಮ್ಮಗ ಕಸ ಎಸೆಯುವ ಜಾಗದಲ್ಲಿ ಬಿಟ್ಟು ಹೋಗಿದ್ದಾರೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ … Continued

ಮುಂಬೈ ಲೋಕಲ್ ರೈಲಿನಿಂದ ಬಿದ್ದು 5 ಮಂದಿಯ ಸಾವಿನ ಶಂಕೆ ; ಹಲವರಿಗೆ ಗಾಯ

ಮುಂಬೈ: ಸೋಮವಾರ ಬೆಳಿಗ್ಗೆ ಮುಂಬ್ರಾ ಬಳಿ ಕಿಕ್ಕಿರಿದು ತುಂಬಿದ್ದ ಮುಂಬೈ ಲೋಕಲ್ ರೈಲಿನಿಂದ 10 ಕ್ಕೂ ಹೆಚ್ಚು ಪ್ರಯಾಣಿಕರು ಕೆಳಕ್ಕೆ ಬಿದ್ದು, ಕನಿಷ್ಠ ಆರು ಮಂದಿ ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ರೈಲು ಗರಿಷ್ಠ ಜನದಟ್ಟಣೆಯಿಂದ ತುಂಬಿರುವ ಸಮಯದಲ್ಲಿ ಇದು ಸಂಭವಿಸಿದೆ. ರೈಲು ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ತುಂಬಿಕೊಂಡು ಛತ್ರಪತಿ ಶಿವಾಜಿ … Continued

ಬಾಲಿವುಡ್‌ ನಟ ಸಲ್ಮಾನ್ ಖಾನಗೆ ಮತ್ತೊಂದು ಜೀವ ಬೆದರಿಕೆ

ಮುಂಬೈ : ಕಾರನ್ನು ಸ್ಫೋಟಿಸುವುದಾಗಿ ಹಾಗೂ ಮನೆಗೆ ಬಂದು ಕೊಲ್ಲುವುದಾಗಿ ಬಾಲಿವುಡ್‌ ನಟ ಸಲ್ಮಾನ್ ಖಾನ್‌ ಅವರಿಗೆ ಮತ್ತೊಂದು ಜೀವ ಬೆದರಿಕೆ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಯ ವಾಟ್ಸಾಪ್ ಸಂಖ್ಯೆಗೆ ಕಳುಹಿಸಲಾದ ಸಂದೇಶದ ಮೂಲಕ ಸಲ್ಮಾನ್ ಖಾನ್ ಅವರ ಮನೆಗೆ ನುಗ್ಗಿ ಅವರನ್ನು ಕೊಲ್ಲುವುದಾಗಿ ಮತ್ತು ಅವರ ಕಾರನ್ನು ಬಾಂಬ್ ನಿಂದ ಸ್ಫೋಟಿಸುವುದಾಗಿ ದುಷ್ಕರ್ಮಿಗಳು … Continued

26/11 ಮುಂಬೈ ದಾಳಿ ಆರೋಪಿ ತಹವ್ವೂರ್ ರಾಣಾ ಭಾರತಕ್ಕೆ ಹಸ್ತಾಂತರಿಸಲು ತಡೆ ಕೋರಿದ್ದ ಅರ್ಜಿ ತಿರಸ್ಕರಿಸಿದ ಅಮೆರಿಕ ಸುಪ್ರೀಂ ಕೋರ್ಟ್

ವಾಷಿಂಗ್ಟನ್‌ : 26/11 ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವೂರ್ ರಾಣಾ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಿದ್ದ ಕೊನೆಯ ಅರ್ಜಿಯನ್ನು ಅಮೆರಿಕ ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಇದರಿಂದಾಗಿ ಆತನನ್ನು ಭಾರತಕ್ಕೆ ಹಸ್ತಾಂತರಿಸುವುದು ಈಗ ಮತ್ತಷ್ಟು ಸುಲಭವಾಗಿದೆ. ಮುಂಬೈನ ಹೋಟೆಲ್‌ಗಳು, ರೈಲು ನಿಲ್ದಾಣ ಮತ್ತು ಯಹೂದಿ ಕೇಂದ್ರದ ಮೇಲೆ ಮೂರು ದಿನಗಳ ಕಾಲ … Continued

ಮಹಾರಾಷ್ಟ್ರ ಡಿಸಿಎಂ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ; ಕುನಾಲ್ ಕಾಮ್ರಾಗೆ ಮುಂಬೈ ಪೊಲೀಸರಿಂದ ಸಮನ್ಸ್

ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಮುಂಬೈನ ಖಾರ್ ಪೊಲೀಸರು ಹಾಸ್ಯನಟ ಕುನಾಲ್ ಕಮ್ರಾ ಅವರಿಗೆ ತನಿಖೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದಾರೆ. ಸದ್ಯ ಕಾಮ್ರಾ ಮಹಾರಾಷ್ಟ್ರದ ಹೊರಗಿರುವ ಕಾರಣ ಬೆಳಗ್ಗೆ 11 ಗಂಟೆಗೆ ಹೇಳಿಕೆ ದಾಖಲಿಸಿಕೊಳ್ಳುವಂತೆ ವಾಟ್ಸಾಪ್‌ನಲ್ಲಿ ಸಮನ್ಸ್‌ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. … Continued