ಮುಂಡಗೋಡ | ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಮಂಗಳವಾರ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರಲೋಕಾಯುಕ್ತ ಅಧಿಕಾರಿಗಳು ನಡೆಸಿದ ಪ್ರತ್ಯೇಕ ದಾಳಿಯಲ್ಲಿ ಹೆಸ್ಕಾಂ ಉಪವಿಭಾಗದ ಎಇಇ ಹಾಗೂ ಕಂದಾಯ ನಿರೀಕ್ಷಕ ಪ್ರತ್ಯೇಕ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಕಾರವಾರ ಹಾಗೂ ಧಾರವಾಡ ಲೋಕಾಯುಕ್ತ ಘಟಕಗಳ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ … Continued

ಲೋಕಧ್ವನಿ ಪತ್ರಿಕೆ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ ನಿಧನ

ಮುಂಡಗೋಡ: ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್‌. ಸದಾನಂದ (75) ಅವರು ಮಂಗಳವಾರ ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸದಾನಂದ ಅವರು ಪತ್ನಿ, ಪುತ್ರಿ, ಪುತ್ರ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ. ಪಿ.ಎಸ್. ಸದಾನಂದ ಅವರು ಮುಂಡಗೋಡ ತಾಲೂಕಿನ ನ್ಯಾಸರ್ಗಿ ಗ್ರಾಮದವರು. ಲೋಕಧ್ವನಿ ಪತ್ರಿಕೆ ಸಂಸ್ಥಾಪಕರಾದ ಗೋಪಾಲಕೃಷ್ಣ ಆನವಟ್ಟಿಯವರ ಕಾಲದಿಂದಲೂ ಅವರು ಲೋಕಧ್ವನಿ … Continued

ಮುಂಡಗೋಡ ; ಹೊಟೇಲ್‌ ಒಳಗೆ ನುಗ್ಗಿ ವ್ಯಕ್ತಿಯ ಬರ್ಬರ ಹತ್ಯೆ

ಕಾರವಾರ: ಸ್ನೇಹಿತನೊಂದಿಗೆ ಊಟಕ್ಕಾಗಿ ಹೋಟೆಲ್‌ಗೆ ಬಂದಿದ್ದಾಗ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ವ್ಯಕ್ತಿಯೊಬ್ಬನನ್ನು ಅತ್ಯಂತ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ಹೋಟೆಲ್‌ ಒಂದರಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಮುಂಡಗೋಡು ಬಸ್ ನಿಲ್ದಾಣದ ಎದುರಿಗಿರುವ ಹೋಟೆಲ್‌ನಲ್ಲಿ ಈ ಕೃತ್ಯ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಮೀರ್ ಅಹಮದ್ ದರ್ಗಾವಾಲೆ (39) … Continued

ಮುಂಡಗೋಡ | ಡಿಜಿಟಲ್ ಅರೆಸ್ಟ್ ; 1.61 ಕೋಟಿ ರೂ. ಕಳೆದುಕೊಂಡ ನಿವೃತ್ತ ಶಿಕ್ಷಕ…..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡಿನ 72 ವರ್ಷದ ನಿವೃತ್ತ ಟಿಬೆಟಿಯನ್‌ ಶಿಕ್ಷಕರೊಬ್ಬರು ಸೈಬರ್ ಅಪರಾಧಿಗಳ ಕುತಂತ್ರಕ್ಕೆ ಬಲಿಯಾಗಿ ಹಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆನ್‌ಲೈನ್‌ ವಂಚಕರು ಅವರನ್ನು ಹೆದರಿಸಿ, “ಡಿಜಿಟಲ್ ಅರೆಸ್ಟ್” ಮಾಡಿ, ಅವರಿಂದ ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಲೂಟಿ ಮಾಡಿರುವುದು ಬೆಳಕಿಗೆ ಬಂದಿದೆ. ಮೋದ ಹೋದವರನ್ನು ಮುಂಡಗೋಡಿನ ಟಿಬೆಟಿಯನ್ ಕಾಲೋನಿ ನಿವಾಸಿ … Continued

ವೀಡಿಯೊ…| ಮುಂಡಗೋಡ: ಭತ್ತ ಕಟಾವು ಮಾಡುತ್ತಿರುವಾಗ ಬೃಹತ್‌ ಹೆಬ್ಬಾವು ಪ್ರತ್ಯಕ್ಷ…! ಅರಣ್ಯ ಅಧಿಕಾರಿಗಳಿಂದ ರಕ್ಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹಳ್ಳದಮನೆ ಗ್ರಾಮದಲ್ಲಿ ಬೃಹತ್‌ ಹೆಬ್ಬಾವೊಂದು ಮಂಗಳವಾರ ಭತ್ತದ ಕಟಾವು ಸಮಯದಲ್ಲಿ ಕೃಷಿ ಕಾರ್ಮಿಕರನ್ನು ದಿಗ್ಭ್ರಮೆಗೊಳಿಸಿತು. ಕಾರ್ಮಿಕರು ಭತ್ತದ ಗದ್ದೆಯಲ್ಲಿ ಬೆಳೆಗಳನ್ನು ಕಟಾವು ಮಾಡುವುದರಲ್ಲಿ ನಿರತರಾಗಿದ್ದಾಗ, ಇದ್ದಕ್ಕಿದ್ದಂತೆ ಬೃಹತ್ ಹೆಬ್ಬಾವು ಕಾಣಿಸಿಕೊಂಡಿತು, ಇದು ತಕ್ಷಣ ಅಲ್ಲಿದ್ದವರನ್ನು ಭಯಭೀತರನ್ನಾಗಿಸಿತು ಮತ್ತು ಎಲ್ಲಾ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತು. ಅಲ್ಲಿದ್ದ ಕಾರ್ಮಿಕರು ಈ … Continued

ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ಬಿದ್ದ ವಿದ್ಯುತ್‌ ಕಂಬ

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿ ಹಾಗೂ ಮುಂಡಗೋಡ ತಾಲೂಕುಗಳಿಗೆ ಹೊಂದಿಕೊಂಡಿರುವ ಗಡಿ ಭಾಗದ ಬೆಡಸಗಾಂವನಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಯಾವುದೇ ಅಪಾಯ ಸಂಭವಿಸಿದ ವರದಿಯಾಗಿಲ್ಲ. ರಾಮಾಪುರದಿಂದ ಹುಲೆಕಲ್‌ಗೆ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರನ್ನು ಒಯ್ಯುತ್ತಿದ್ದ ವಾಹನದ ಮೇಲೆ ವಿದ್ಯುತ್‌ ಕಂಬ ಮುರಿದು … Continued

ಮುಂಡಗೋಡ | ಹಾವು ಕಡಿದು 5 ವರ್ಷದ ಅಂಗನವಾಡಿ ಬಾಲಕಿ ಸಾವು

ಮುಂಡಗೋಡ: ಹಾವು ಕಡಿದು ಅಂಗನವಾಡಿ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ  ಪಟ್ಟಣದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕಿಯನ್ನು ಮಯೂರಿ ಸುರೇಶ ಕುಂಬಳಪ್ಪನವರ (5) ಎಂದು ಗುರುತಿಸಲಾಗಿದೆ. ಮಯೂರಿ ಎಂದಿನಂತೆ ಅಂಗನವಾಡಿಗೆ ಹೋಗಿದ್ದ ವೇಳೆ ಮೂತ್ರ ವಿಸರ್ಜನೆಗೆಂದು ಅಂಗನವಾಡಿಯ ಹಿಂಬದಿ ತೆರಳಿದಾಗ ಹಾವು ಕಡಿದಿದೆ. ಬಾಲಕಿ ತಕ್ಷಣ, ಕಾಲಿಗೆ ಹಾವು … Continued

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತ ಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಸಿಎಂ ನಿಂದನೆ : ಅನಂತಕುಮಾರ​ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಠಾಣೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮುಂಡಗೋಡ ತಾಲೂಕಿನ ಪಾಳಾದಲ್ಲಿ ಶುಕ್ರವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಅನಂತಕುಮಾರ ಹೆಗಡೆ ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾ ಖಾನ್ ಎಂದು … Continued

ಬೆಂಕಿ ಅನಾಹುತ : ಏಳು ಗೋವುಗಳು ಸಜೀವ ದಹನ

ಮುಂಡಗೋಡ: ದನದ ಕೊಟ್ಟಿಗೆಗೆ ಹೊತ್ತಿಕೊಂಡ ಬೆಂಕಿಯಿಂದ ಏಳು ಆಕಳುಗಳು ಸಜೀವ ದಹನವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಹಳೂರ ಓಣಿಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ವಿದ್ಯುತ್‌ ಶಾರ್ಟ್‌ ಸರ್ಕ್ಯೂಟಿನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಹಳೂರ ಓಣಿಯ ಮಂಜುನಾಥ ನಾಗೇಶ ಶೇಟ್ ಎಂಬವರ ಸೇರಿದ ದನಗಳು ಸಜೀವ ದಹನವಾಗಿವೆ. ಮನೆಯ ಪಕ್ಕದಲ್ಲೇ ದನದಕೊಟ್ಟಿಯಲ್ಲಿ … Continued