ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued

ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

ಕಾರವಾರ: ನಗರಸಭೆಯ ಮಾಜಿ ಸದಸ್ಯ ಸತೀಶ ಕೊಳಂಬಕರ ಅವರನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭಾನುವಾರ ನಗರದಲ್ಲಿ ಸಂಭವಿಸಿದೆ. ಸತೀಶ ಅವರು ಭಾನುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಮಾರುಕಟ್ಟೆ ಬಳಿ ಆಗಮಿಸಿದ್ದರು. ಇದನ್ನು ಗಮನಿಸಿದ ಹಂತಕ ನಗರದ ಬಿಎಸ್ ಎನ್ ಎಲ್ ಕಚೇರಿ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರು … Continued

ಬಾಂಗ್ಲಾದೇಶದಲ್ಲಿ ಹಿಂದೂ ನಾಯಕನ ಅಪಹರಣ ಮಾಡಿ ಬಡಿದು ಕೊಂದರು…!

ಢಾಕಾ: ಬಾಂಗ್ಲಾದೇಶದ ದಿನಾಜಪುರ ಜಿಲ್ಲೆಯಲ್ಲಿ ಹಿಂದೂ ಸಮುದಾಯದ ಪ್ರಮುಖ ನಾಯಕನೊಬ್ಬನನ್ನು ಅವರ ಮನೆಯಿಂದ ಅಪಹರಿಸಿ ಥಳಿಸಿ ಹತ್ಯೆ ಮಾಡಲಾಗಿದೆ ಎಂದು ಶುಕ್ರವಾರ ಮಾಧ್ಯಮ ವರದಿಯೊಂದು ತಿಳಿಸಿದೆ. ಢಾಕಾದಿಂದ ವಾಯುವ್ಯಕ್ಕೆ ಸುಮಾರು 330 ಕಿಲೋಮೀಟರ್ ದೂರದಲ್ಲಿರುವ ದಿನಾಜಪುರದ ಬಸುದೇಬಪುರ ಗ್ರಾಮದ ನಿವಾಸಿ ಭಬೇಶಚಂದ್ರ ರಾಯ್ (58) ಅವರ ಶವ ಗುರುವಾರ ರಾತ್ರಿ ಪತ್ತೆಯಾಗಿದೆ ಎಂದು ಪೊಲೀಸರು ಮತ್ತು … Continued

ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ : ಪೊಲೀಸರ ಗುಂಡೇಟಿಗೆ ಆರೋಪಿ ಸಾವು

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ನಂತರ ಆಕೆಯನ್ನು ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಎನ್‌ಕೌಂಟರ್‌ನಲ್ಲಿ ಸಾವಿಗೀಡಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿ ಪತ್ತೆಗಾಗಿ ಹುಬ್ಬಳ್ಳಿ ಪೊಲೀಸರು ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶಕುಮಾರ ಎನ್ನಲಾಗಿದ್ದು, ಈತ … Continued

ಶವದ ಮೇಲಿನ ಮೂಗುತಿಯಿಂದ ಬಯಲಾಯ್ತು ಮಹಿಳೆಯ ಕೊಲೆಯ ರಹಸ್ಯ

ನವದೆಹಲಿ: ಶವದ ಮೇಲಿನ ಮೂಗುತಿ ನೀಡಿದ ಸುಳಿವಿನಿಂದ ಕೊಲೆ ಪ್ರಕರಣವೊಂದನ್ನು ಪೊಲೀಸರು ಭೇದಿಸಿದ್ದಾರೆ. ಮೂಗುತಿಯ ಸಹಾಯದಿಂದ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಮಹಿಳೆಯ ಕೊಲೆಗಾರನನ್ನು ದೆಹಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಪತಿಯೇ ತನ್ನ ಹೆಂಡತಿಯನ್ನು ಕೇಬಲ್ ವೈರ್‌ನಿಂದ ಕತ್ತು ಹಿಸುಕಿ ಕೊಲೆ ಮಾಡಿ, ನಂತರ ಆಕೆಯ ದೇಹವನ್ನು ಬೆಡ್‌ಶೀಟ್‌ನಲ್ಲಿ ಸುತ್ತಿ ಚರಂಡಿಗೆ ಎಸೆದಿದ್ದ ಎಂದು ಪೊಲೀಸರು ಶುಕ್ರವಾರ … Continued

ಚಿಕ್ಕಮಗಳೂರು| ಪತ್ನಿ ಬಿಟ್ಟು ಹೋದ ಕೋಪಕ್ಕೆ ಗುಂಡು ಹಾರಿಸಿ ಕುಟುಂಬದ ಮೂವರ ಹತ್ಯೆ; ನಂತರ ತಾನೂ ಆತ್ಮಹತ್ಯೆ..

ಚಿಕ್ಕಮಗಳೂರು: ಹೆಂಡತಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಅತ್ತೆ, ನಾದಿನಿ ಹಾಗೂ 7 ವರ್ಷದ ಮಗುವನ್ನು ಗುಂಡುಹಾರಿಸಿ ಕೊಲೆ ಮಾಡಿ ನಂತರ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಬಾಳೆಹೊನ್ನೂರು ಸಮೀಪದ ಖಾಂಡ್ಯ ಬಳಿ ನಡೆದಿದೆ ಎಂದು ವರದಿಯಾಗಿದೆ. ರತ್ನಾಕರ ಎಂಬಾತ ಅತ್ತೆ ಜ್ಯೋತಿ (50), ನಾದಿನಿ ಸಿಂಧು (26) ಹಾಗೂ 7 ವರ್ಷದ ಮಗು … Continued