ಹನಿಮೂನ್‌ ಕೊಲೆ ಪ್ರಕರಣ | ರಾಜಾ ರಘುವಂಶಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಪತ್ನಿ ಸೋನಂ ಪ್ರೇಮಿ-ಕೊಲೆ ಸಂಚಿನ ಆರೋಪಿ ; ವೀಡಿಯೊ ವೈರಲ್‌…

ಮೇಘಾಲಯದಲ್ಲಿ ಮಧುಚಂದ್ರದ ಸಮಯದಲ್ಲಿ ಪತಿಯನ್ನು ಕೊಂದ ಆರೋಪದ ಮೇಲೆ ಬಂಧಿಸಲ್ಪಟ್ಟ ಇಂದೋರದ ಮಹಿಳೆಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮಧುಚಂದ್ರದ ಸಮಯದಲ್ಲಿ ಪತಿ ರಾಜ ರಘುವಂಶಿಯನ್ನು ಹತ್ಯೆ ಮಾಡಲು ಪತ್ನಿ ಸೋನಂ ಹತ್ಯೆಗೆ ಸಂಚು ರೂಪಿಸಿದ್ದಳು ಎನ್ನುವ ಮಾಹಿತಿ ಹೊರಬಿದ್ದ ಬೆನ್ನಲ್ಲೇ ಪ್ರಕರಣಕ್ಕೆ ಸಂಬಂಧಿಸಿದೆ ಎನ್ನಲಾದ ಮತ್ತೊಂದು ವೀಡಿಯೊ ಹೊರಬಿದ್ದಿದೆ. ರಾಜಾ ರಘುವಂಶಿ ಹತ್ಯೆ ಪ್ರಕರಣದಲ್ಲಿ … Continued

“ಮೂವರು ಪುರುಷರು, ಹಿಂದಿ ಮಾತಾಡ್ತಾರೆ, ಸ್ಥಳೀಯರಲ್ಲ” : ʼಹನಿಮೂನ್ ಕೊಲೆʼ ಪ್ರಕರಣ ಭೇದಿಸಲು ಸಹಾಯ ಮಾಡಿದ ಪ್ರವಾಸಿ ಗೈಡ್‌ ನೀಡಿದ ಸುಳಿವು…

ನವದೆಹಲಿ: ರಾಜಾ ರಘುವಂಶಿಯನ್ನು ಜೀವಂತವಾಗಿ ನೋಡಿದ ಕೊನೆಯ ವ್ಯಕ್ತಿಯಾಗಿದ್ದ ಪ್ರವಾಸಿ ಮಾರ್ಗದರ್ಶಿಯ ಹೇಳಿಕೆಯೊಂದು, ಬಾಲಿವುಡ್ ಸಿನಿಮಾದ ಕಥಾವಸ್ತುವಿನಂತೆ ಅನೇಕ ಟ್ವಿಸ್ಟ್‌ ಗಳಿಂದ ಕೂಡಿರುವ ಭೀಕರ ಕೊಲೆ ಪ್ರಕರಣವನ್ನು ಭೇದಿಸಲು ನೆರವಾಗಿದೆ. ಪ್ರವಾಸಿ ಗೈಡ್‌ ನೀಡಿದ ಹೇಳಿಕೆಯ ಆಧರಿಸಿ ಮೇಲೆ ತನಿಖೆ ನಡೆಸಿದ ಪೊಲೀಸರು ಸುಮಾರು ಹದಿನೈದು ದಿನಗಳಿಂದ ರಹಸ್ಯವಾಗಿಯೇ ಉಳಿದಿದ್ದ ಕೊಲೆ ಪ್ರಕರಣವನ್ನು ಕೊನೆಗೂ ಭೇದಿಸಿದ್ದಾರೆ. … Continued

ಬೆಂಗಳೂರು : ಪ್ರಿಯತಮೆಯನ್ನು ಹೋಟೆಲಿಗೆ ಕರೆಯಿಸಿಕೊಂಡು ಬರ್ಬರ ಹತ್ಯೆ ; 17 ಬಾರಿ ಇರಿದ ಟೆಕ್ಕಿ…

ಬೆಂಗಳೂರು: ಘಟನೆ ನಡೆದು ಎರಡು ದಿನಗಳ ನಂತರ ಭಾನುವಾರ ನಗರದ ಪೂರ್ಣ ಪ್ರಜ್ಞಾ ಲೇಔಟ್‌ನಲ್ಲಿರುವ ಹೋಟೆಲ್ ಕೋಣೆಯೊಳಗೆ 36 ವರ್ಷದ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ, ಹರಿಣಿ (36) ಎಂದು ಗುರುತಿಸಲಾದ ಮಹಿಳೆಯನ್ನು ಗೆಳೆಯ 25 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಯಶಸ್ ಎಂಬಾತ 17 ಬಾರಿ ಇರಿದು ಕೊಂದ … Continued

ಬೆಂಗಳೂರು | ಪತ್ನಿಯ ಶಿರಚ್ಛೇದ ಮಾಡಿದ ಗಂಡ; ರುಂಡ ಹಿಡಿದುಕೊಂಡು ಪೊಲೀಸ್ ಠಾಣೆಗೆ ಬಂದ…!

 ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ  ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ … Continued

ಬಂಟ್ವಾಳದಲ್ಲಿ ಯುವಕನ ಬರ್ಬರ ಹತ್ಯೆ ; ದಕ್ಷಿಣ ಕನ್ನಡ ಜಿಲ್ಲೆಯ 5 ತಾಲೂಕಿನಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು : ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಹೀಂ ಎಂಬ ವ್ಯಕ್ತಿಯ ಹತ್ಯೆಯ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಕೆಲವು ದಿನಗಳ ಹಿಂದೆ ನಡೆದಿತ್ತು. ಈಗ … Continued

ಸುಹಾಸ ಶೆಟ್ಟಿ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು : ಕೆಲವು ದಿನಗಳ ಹಿಂದೆ ಬಜ್ಪೆಯಲ್ಲಿ ಬರ್ಬರವಾಗಿ ಕೊಲೆಯಾದ ಸುಹಾಸ ಶೆಟ್ಟಿ ಹತ್ಯೆ (Suhas Shetty) ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರಿನ ಅಜರುದ್ದೀನ್ ಆಲಿಯಾಸ್ ಅಜರ್ ಆಲಿಯಾಸ್ ಅಜ್ಜು(29), ಬಜ್ಪೆ ನಿವಾಸಿ ಅಬ್ದುಲ್ ಖಾದರ್ ಆಲಿಯಾಸ್ ನೌಫಲ್(24), ವಾಮಂಜೂರಿನ ನೌಷದ್ ಆಲಿಯಾಸ್ ಚೊಟ್ಟೆ ನೌಷದ್(39) ಎಂದು ಗುರುತಿಸಲಾಗಿದೆ. … Continued

ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ: ಇಂದು ದಕ್ಷಿಣ ಕನ್ನಡ ಬಂದ್

ಮಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ವಿಶ್ವ ಹಿಂದು ಪರಿಷತ್ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ದಿನ ಬಂದ್‌ ಗೆ ಕರೆ ಕೊಟ್ಟಿದೆ. ಶುಕ್ರವಾರ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್​ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, … Continued

ಮಂಗಳೂರು | ಮಾರಕಾಸ್ತ್ರಗಳಿಂದ ಕೊಚ್ಚಿ ಹಿಂದೂ ಕಾರ್ಯಕರ್ತ -ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಮಂಗಳೂರು: ನಗರದಲ್ಲಿ ಗುರುವಾರ ರಾತ್ರಿ ರೌಡಿಶೀಟರ್‌ ಬರ್ಬರ ಹತ್ಯೆ ನಡೆದಿದೆ. ಫಾಜಿಲ್‌ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ ಶೆಟ್ಟಿ (Suhas Shetty) ಕೊಲೆಯಾದ ವ್ಯಕ್ತಿ. ಮಂಗಳೂರಿನ ಬಜಪೆ ಕಿನ್ನಿಪದವು ಬಳಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ತಲ್ವಾರ್‌ಗಳಿಂದ ಹಲ್ಲೆ ನಡೆಸಿದ್ದರಿಂದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಸುಹಾಸ್ ಶೆಟ್ಟಿ ಈ ಹಿಂದೆ … Continued

ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ ಪ್ರಕರಣ : ಪತ್ನಿ-ಪುತ್ರಿ ವಿರುದ್ಧ ದೂರು ದಾಖಲು, ಪತ್ನಿಯ ಬಂಧನ

ಬೆಂಗಳೂರು : ನಿವೃತ್ತ ಪೊಲೀಸ್‌ ಮಹಾನಿರ್ದೇಶಕ ಓಂ ಪ್ರಕಾಶ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಮತ್ತು ಪುತ್ರಿಯ ಮೇಲೆ ಎಫ್‌ಐಆರ್‌ ದಾಖಲಾಗಿದ್ದು, ನಂತರ ಪತ್ನಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಓಂ ಪ್ರಕಾಶ ಅವರ ಪುತ್ರ ಕಾರ್ತಿಕೇಶ ನೀಡಿದ ದೂರಿನ ಮೇರೆಗೆ ತಾಯಿ ಪಲ್ಲವಿ, ಸಹೋದರಿ ಕೃತಿ ವಿರುದ್ಧ ಹೆಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ಬಿಎನ್‌ಎಸ್‌ … Continued

ಮಾಜಿ ಪೊಲೀಸ್‌ ಮುಖ್ಯಸ್ಥ ಓಂ ಪ್ರಕಾಶ ಕೊಲೆ ಪ್ರಕರಣ : ತನಿಖಾಧಿಕಾರಿಗಳ ಎದುರು ಕೊಲೆಯ ವಿವರ ಬಾಯ್ಬಿಟ್ಟ ಪತ್ನಿ…!?

ಬೆಂಗಳೂರು : ಭಾನುವಾರ ಬೆಂಗಳೂರಿನ ಎಚ್‌ಎಸ್‌ ಆರ್‌ ಲೇಔಟ್‌ನ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದ ಕರ್ನಾಟಕದ ಮಾಜಿ ಪೊಲೀಸ್ ಮುಖ್ಯಸ್ಥ ಓಂ ಪ್ರಕಾಶ, ಅಂದು ಮಧ್ಯಾಹ್ನ ತಮ್ಮ ಪತ್ನಿಯೊಂದಿಗೆ ಜಗಳವಾಡಿದ್ದರು. ಅದು ವಿಕೋಪಕ್ಕೆ ಹೋಗಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಗಳದಲ್ಲಿ, ಅವರು ಓಂ ಪ್ರಕಾಶ ಅವರ ಮೇಲೆ ಮೆಣಸಿನ ಪುಡಿ ಎಸೆದು, … Continued