ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !

ಉಡುಪಿ :  ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued

27 ಬಾರಿ ಇರಿತ..‘ಬಾಬು’ ಎಂಬ ಕೊನೆಯ ಪದ: ಪ್ರಾಂಶುಪಾಲೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಇಬ್ಬರು ವಿದ್ಯಾರ್ಥಿಗಳ ಬಂಧನ

ಹೈದರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ 48 ವರ್ಷದ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿಯ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಹಣ ಮತ್ತು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಕೊಲೆಗೆ ಸಂಚು ರೂಪಿಸಿದ್ದರೆನ್ನಲಾದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕೊಂಡಮಲ್ಲೇಪಲ್ಲಿಯ ನಾಗಾರ್ಜುನ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ … Continued

ಪ್ರಿಯಕರನ ಜೊತೆ ಸೇರಿ ಗಂಡ, 4 ವರ್ಷದ ಮಗನನ್ನು ಉಸಿರುಗಟ್ಟಿಸಿ ಕೊಂದ ಪತ್ನಿ

ಬೆಂಗಳೂರು : ನಗರದ ಚಿಕ್ಕಬಾಣಾವರದಲ್ಲಿ ಗಂಡ ಹಾಗೂ ನಾಲ್ಕು ವರ್ಷದ ಮಗನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಆರೋಪದ ಮೇಲೆ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಮಲಗಿದ್ದಲ್ಲೇ ಪತಿ ಮತ್ತು ನಾಲ್ಕು ವರ್ಷದ ಮುಗ್ಧ ಕಂದಮ್ಮನ ಜೀವ ತೆಗೆದ ಪತ್ನಿ ಪೊಲೀಸರ ಬಲೆಗೆ ಬಿದ್ದಿದ್ದಾಳೆ. ಆರೋಪಿಗಳನ್ನು ಹರಿಣಿ ಮತ್ತು ವಿನಯಕುಮಾರ ಎಂದು ಗುರುತಿಸಲಾಗಿದೆ. … Continued

ಬೆಂಗಳೂರು : ಟೆಕ್ಕಿ ಪತ್ನಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್‌ ಪತಿ

ಬೆಂಗಳೂರು: ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಪತಿ-ಪತ್ನಿಯ ನಡುವೆ ನಡೆದ ಜಗಳವು ಹಿಂಸಾತ್ಮಕ ರೂಪ ಪಡೆದುಕೊಂಡು, ಬೆಳಗಾಗುವಷ್ಟರಲ್ಲಿ ಇಬ್ಬರೂ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಸಿವಿಲ್ ಎಂಜಿನಿಯರ್‌ ಆಗಿದ್ದ ಸುಮಂತ್ ಜೈನ್ ಹಾಗೂ ಅವರ ಪತ್ನಿ, ಸಾಫ್ಟ್‌ವೇರ್ ಎಂಜಿನಿಯರ್‌ ಆಗಿದ್ದ ಪದ್ಮಾವತಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ದಂಪತಿ ನಡುವೆ ಯಾವುದೋ ವಿಚಾರಕ್ಕೆ ವಾಗ್ವಾದ ಆರಂಭವಾಗಿದ್ದು, … Continued

ಬೆಳಗಾವಿ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಹತ್ಯೆ ; ಆರು ತಿಂಗಳ ಬಳಿಕ ಪತ್ನಿ, ಪ್ರಿಯಕರ ಬಂಧನ

ಬೆಳಗಾವಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿ ಹಾಗೂ ಆಕೆಯ ಪ್ರಿಯಕರ ಸೇರಿ ಹತ್ಯೆ ಮಾಡಿ, ಶವವನ್ನು ಹೊಲದಲ್ಲಿ ಮುಚ್ಚಿಟ್ಟು, ಪತಿ ಕಾಣೆಯಾಗಿದ್ದಾನೆ ಎಂದು ನಂಬಿಸಿ ದೂರು ನೀಡಿದ್ದ ಪ್ರಕರಣವನ್ನು ಜಿಲ್ಲೆಯ ಖಡಕಲಾಟ ಪೊಲೀಸರು ಆರು ತಿಂಗಳ ಬಳಿಕ ಭೇದಿಸಿದ್ದಾರೆ. ಮೃತನನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದ್ದು, ಆತನ ಪತ್ನಿ ಬಂಗಾರಿ ಗಾವಡೆ ಹಾಗೂ … Continued

ಕಾಂಗ್ರೆಸ್‌ ಮುಖಂಡ-ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಪರಾರಿಯಾಗುತ್ತಿದ್ದ ಮೂವರು ಆರೋಪಿಗಳ ಬಂಧನ

ಉಡುಪಿ : ಜಿಲ್ಲೆಯ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.  ಉತ್ತರ ಪ್ರದೇಶದ ಥಾಣಾ ಪಿಲ್ವಾ ನಿವಾಸಿ ರಾಜು (42) ಎಂಬಾತನನ್ನು ಬೈಂದೂರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ ಮತ್ತೊಬ್ಬ ಆರೋಪಿ ಉತ್ತರಾಖಂಡ ಮೂಲದ ಅಜಯ … Continued

ಉಡುಪಿ: ಕಾಂಗ್ರೆಸ್‌ ಮುಖಂಡ- ಉದ್ಯಮಿ ಡೇವಿಡ್ ಡಿ’ಸೋಜಾಗೆ ಗುಂಡಿಕ್ಕಿ ಹತ್ಯೆ

ಉಡುಪಿ : ಖ್ಯಾತ ಉದ್ಯಮಿ ಹಾಗೂ ಕಾಂಗ್ರೆಸ್‌ ಮುಖಂಡ ಮುದರಂಗಡಿಯ ಡೇವಿಡ್ ಡಿ’ಸೋಜಾ (ಡೇವಿಡ್ ಡಾಲಿಯಾ) ಅವರನ್ನು ಶುಕ್ರವಾರ ಮಧ್ಯಾಹ್ನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ಈ ಘಟನೆಯು  ಜಿಲ್ಲೆಯ ಕಾಪು ತಾಲೂಕಿನ ಶಿರ್ವ ಸಮೀಪದ ಮುದರಂಗಡಿಯಲ್ಲಿ ಮುದರಂಗಡಿ ಗ್ರಾಮ ಪಂಚಾಯತ ವ್ಯಾಪ್ತಿಯ ಪಿಲ್ಲಾರ್ ಗ್ರಾಮದ ಸೇಂಟ್ ಫ್ರಾನ್ಸಿಸ್ ಜೇವಿಯರ್ ಚರ್ಚ್ ಮುಂಭಾಗದಲ್ಲಿ … Continued

ತನ್ನ ಪತಿ ಆಸ್ಟ್ರೇಲಿಯಾಕ್ಕೆ ಹೋಗಿದ್ದಾನೆಂದು ನಂಬಿಸಿದ್ದ ಪತ್ನಿ ; 2 ವರ್ಷಗಳ ಬಳಿಕ ಕಾಂಕ್ರೀಟ್ ನೆಲದಡಿ ಸಿಕ್ತು ಆತನ ಅಸ್ಥಿಪಂಜರ !

ಜಾಮನಗರ: ಕೆಲಸದ ನಿಮಿತ್ತ ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ ಎಂದು ಕುಟುಂಬಸ್ಥರನ್ನು ನಂಬಿಸಲಾಗಿದ್ದ ವ್ಯಕ್ತಿಯೊಬ್ಬರನ್ನು, ವಾಸ್ತವದಲ್ಲಿ ಸುಮಾರು ಎರಡು ವರ್ಷಗಳ ಹಿಂದೆಯೇ ಹತ್ಯೆ ಮಾಡಲಾಗಿದ್ದು, ಅವರ ಮೃತದೇಹವನ್ನು 12 ಅಡಿ ಆಳದಲ್ಲಿ ಕಾಂಕ್ರೀಟ್ ನೆಲದಡಿ ಹೂತುಹಾಕಲಾಗಿತ್ತು ಎಂಬ ಆಘಾತಕಾರಿ ಸಂಗತಿ ಗುಜರಾತಿನ ಜಾಮನಗರದಲ್ಲಿ ಬೆಳಕಿಗೆ ಬಂದಿದೆ. ತನಿಖೆಯಲ್ಲಿ ಬಯಲಾದ ಈ ಪ್ರಕರಣ ಬಾಲಿವುಡ್‌ನ ಜನಪ್ರಿಯ ಥ್ರಿಲ್ಲರ್ ಸಿನಿಮಾ ‘ದೃಶ್ಯಂ’ … Continued

ಊಟ ಬಡಿಸಲು ತಡವಾಗಿದ್ದಕ್ಕೆ ಅತ್ತಿಗೆ ತಲೆಯನ್ನೇ ಕತ್ತರಿಸಿ ಮರಕ್ಕೆ ನೇತು ಹಾಕಿದ ಮೈದುನ !

ಪಾಟ್ನಾ : ಊಟ ಬಡಿಸಲು ತಡವಾಯಿತು ಎಂಬ ಕಾರಣಕ್ಕೆ ಮಹಿಳೆಯನ್ನು ಆಕೆಯ ಮೈದುನನೇ (ಗಂಡನ ಸಹೋದರ) ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಜಹಾನಾಬಾದ್ ಜಿಲ್ಲೆಯ ಪರ್ಸಾಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಚೈನ್‌ಪುರಾ ಇಮಾದ್‌ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಅನ್ಶುದೇವಿ … Continued

ಪತ್ನಿಗೆ ನೇಣು ಬಿಗಿದು ಅತ್ತೆ-ಮಾವನಿಗೆ ವಿಡಿಯೋ ಕಾಲ್‌ ಮಾಡಿ ತೋರಿಸಿದ ಗಂಡ

ಬಾಗಲಕೋಟೆ: ಪತ್ನಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನದ ಹಿನ್ನೆಲೆಯಲ್ಲಿ 23 ವರ್ಷದ ಮಹಿಳೆಯನ್ನು ಪತಿಯೇ ನೇಣು ಬಿಗಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಜಿಲ್ಲೆಯ ಗಲಗಲಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಆರೋಪಿ ಪತಿಯನ್ನು ಪ್ರವೀಣ ಜಿಗಳೂರು ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ … Continued