ನಾಲ್ವರು ವಿದ್ಯಾರ್ಥಿಗಳ ಸಾವಿನ ನಂತರ ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

ಕಾರವಾರ : ಕೋಲಾರದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಬೆನ್ನಲ್ಲೇ ಮುರುಡೇಶ್ವರದ ಕಡಲತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಜಿಲ್ಲಾಡಳಿತ ತಾತ್ಕಾಲಿಕವಾಗಿ ನಿರ್ಬಂಧ ವಿಧಿಸಿದೆ. ಪ್ರ ಈ ಕುರಿತು ಎಸ್​ಪಿ ಎಂ.ನಾರಾಯಣ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲಾಡಳಿತದ ವತಿಯಿಂದ ಪ್ರವಾಸಕ್ಕೆ ಆಗಮಿಸಿದ್ದ ಉಳಿದ ವಿದ್ಯಾರ್ಥಿಗಳನ್ನು ಕೋಲಾರದ … Continued

ಮುರುಡೇಶ್ವರ ಬೀಚ್‌ ದುರಂತ; ಕೋಲಾರ ಶಾಲೆಯ ಪ್ರಿನ್ಸಿಪಾಲ್, ಅತಿಥಿ ಶಿಕ್ಷಕರು ಅಮಾನತು

ಕೋಲಾರ: ಮುರುಡೇಶ್ವರ ಬೀಚ್‌ನಲ್ಲಿ ನಾಲ್ವರು ಬಾಲಕಿಯರು ಜಲಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ, ಬೇಜವಾಬ್ದಾರಿ ಹಿನ್ನೆಲೆಯಲ್ಲಿ ಜಿಲ್ಲೆಯ ಮುಳಬಾಗಲು ತಾಲೂಕಿನ ಕೊತ್ತೂರು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಐವರು ಅತಿಥಿ ಶಿಕ್ಷಕರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಕೋಲಾರ ಮುಳಬಾಗಿಲಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸೇರಿ … Continued

ಮುರುಡೇಶ್ವರ ; ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆ

ಕಾರವಾರ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಸಮುದ್ರ ಪಾಲಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹ ಪತ್ತೆಯಾಗಿವೆ. ಕರಾವಳಿ ಕಾವಲುಪಡೆ ತಂಡ ಮೃತದೇಹಗಳನ್ನು ಹುಡುಕಿ ತಂದಿವೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ (15), ಲಾವಣ್ಯ (15) ಹಾಗೂ ವಂದನಾ (15) ಎಂದು ಗುರುತಿಸಲಾಗಿದೆ. ಮುರುಡೇಶ್ವರದ ನವೀನ ಬೀಚ್ ರೆಸಾರ್ಟ್ ಬಳಿಯ ಸಮುದ್ರದಲ್ಲಿ ಎರಡು ಮೃತದೇಹ ಹಾಗೂ ಸಮುದ್ರದ ಅಳಿವೆಯಲ್ಲಿ … Continued

ಮುರುಡೇಶ್ವರ : ಸಮುದ್ರಕ್ಕೆ ಇಳಿದಿದ್ದ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

ಕಾರವಾರ : ಸಮುದ್ರದಲ್ಲಿ ಈಜಲು ಇಳಿದಿದ್ದ ಓರ್ವ ವಿದ್ಯಾರ್ಥಿನಿ ಮೃತಪಟ್ಟು ಮೂವರು ಪ್ರವಾಸಿ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದುಘಟನೆ ಮಂಗಳವಾರ ಮುರುಡೇಶ್ವರ ಕಡಲ ತೀರದಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಮಂಗಳವಾರ (ಡಿಸೆಂಬರ್ 10) ಸಂಜೆ ಮುರುಡೇಶ್ವರ ಕಡಲ ತೀರದಲ್ಲಿ ಸಮುದ್ರ ದಂಡೆಯ ಸಮೀಪದ ನೀರಿನಲ್ಲಿ ಆಟವಾಡುತ್ತಿದ್ದ 54 ವಿದ್ಯಾರ್ಥಿಗಳ ಪೈಕಿ ನಾಲ್ವರು ಸಮುದ್ರದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ. ಅವರಲ್ಲಿ … Continued

ಮುರುಡೇಶ್ವರ : ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿ ಸಾವು, ಓರ್ವನ ರಕ್ಷಣೆ

ಕಾರವಾರ : ಪ್ರವಾಸಕ್ಕೆ ಬಂದಿದ್ದ ವೇಳೆ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಸಮುದ್ರದ ಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಮೃತ ವಿದ್ಯಾರ್ಥಿಯನ್ನು ಬೆಂಗಳೂರಿನ ವಿದ್ಯಾಸೌಧ ಪಿ.ಯು ಕಾಲೇಜು ವಿದ್ಯಾರ್ಥಿ ಗೌತಮ (17) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ವಿದ್ಯಾ ಸೌಧ … Continued

ಮುರ್ಡೇಶ್ವರ : ಸಮುದ್ರಕ್ಕೆ ಇಳಿದಿದ್ದ ಯುವಕ ನಾಪತ್ತೆ, ಮತ್ತೋರ್ವನ ರಕ್ಷಣೆ

ಕಾರವಾರ: ಸಮುದ್ರದಲ್ಲಿ ಈಜಲು ಹೋಗಿ ಪ್ರವಾಸಿಗನೊಬ್ಬ ನಾಪತ್ತೆಯಾಗಿದ್ದು. ಇನ್ನೋರ್ವನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ ತುಮಕೂರು ಮೂಲದ 22 ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ನಿರ್ಬಂಧ ಇದ್ದರೂ ಸಮುದ್ರಕ್ಕಿಳಿದಿದ್ದರು. ಅಲೆಗಳ ಅಬ್ಬರಕ್ಕೆ ಇಬ್ಬರು ಕೊಚ್ಚಿಹೋಗಿದ್ದು ಅದರಲ್ಲಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ. ತುಮಕೂರು … Continued

ಮುರುಡೇಶ್ವರ :ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ವಿದ್ಯಾರ್ಥಿ ಸಾವು, ಮತ್ತಿಬ್ಬರ ರಕ್ಷಣೆ

ಕಾರವಾರ: ಮುರುಡೇಶ್ವರ ಸಮುದ್ರ ತೀರದಲ್ಲಿ ಇಂದು, ಮಂಗಳವಾರ ಕೂಡ ಓರ್ವ ಪ್ರವಾಸಿಗ ಲೈಫ್ ಗಾರ್ಡ್‌ಗಳ ಸೂಚನೆಗೆ ಕ್ಯಾರೆ ಎನ್ನದೆ ಸಮುದ್ರಕ್ಕಿಳಿದ ನಂತರ ಅಲೆಗೆ ಸಿಲುಕಿ ನೀರು ಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದಲ್ಲಿ ನಡೆದ ವರದಿಯಾಗಿದೆ. ಕಣ್ಮರೆಯಾದ ಯುವಕನ್ನು ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ನಿವಾಸಿ, ಇಂಜಿನಿಯರಿಂಗ್ ವಿದ್ಯಾರ್ಥಿ ಪವನ್ ನಾಯ್ಕ(20) ಎಂದು … Continued

ಮುರ್ಡೇಶ್ವರದಲ್ಲಿ ಇಬ್ಬರು ಸಮುದ್ರ ಪಾಲು. ಓರ್ವ ಶವವಾಗಿ ಪತ್ತೆ, ಮತ್ತೊಬ್ಬ ನಾಪತ್ತೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ಇಬ್ಬರು ಪ್ರವಾಸಿಗರು ಸಮುದ್ರದಲ್ಲಿ ಮುಳುಗಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಓರ್ವ ಶವವಾಗಿ ಪತ್ತೆಯಾಗಿದ್ದು, ಇನ್ನೋರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನ ಶೋಧಕಾರ್ಯ ಮುಂದುವರೆದಿದೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ನಾಲ್ವರು ಮುರುಡೇಶ್ವರ ದೇವಸ್ಥಾನದಲ್ಲಿ ಪೂಜೆಯ ಬಳಿಕ ಸಮುದ್ರದಲ್ಲಿ ಈಜಲು ಹೋಗಿದ್ದರು. ಈ ವೇಳೆ ಅಲೆಯ ಅಬ್ಬರಕ್ಕೆ … Continued