ಹುಣಸೂರು: ಭೀಕರ ಅಪಘಾತ, ನಾಲ್ವರು ಸ್ಥಳದಲ್ಲೇ ಸಾವು

ಮೈಸೂರು: ಕೆ ಎಸ್ ಆರ್ ಟಿಸಿ ಬಸ್ ಹಾಗೂ ಜೀಪ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ಅಯ್ಯಪ್ಪಸ್ವಾಮಿ ಬೆಟ್ಟದ ಬಳಿಯ ಹೆದ್ದಾರಿಯಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣಕ್ಕೆ ಶುಂಠಿ ಕೆಲಸಕ್ಕೆ ಕೂಲಿಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ಮತ್ತೊಂದು ವಾಹನವನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ … Continued

ಮೈಸೂರಿನ ಶಿಲ್ಪಿ ಅರುಣ ಕೈಯಿಂದ ಮೂಡಿಬಂದ ಅಯೋಧ್ಯೆಯ ರಾಮಲಲ್ಲಾ ಮೂರ್ತಿ….

ಮೈಸೂರು : 2024ರ ಜನವರಿ 22ರಂದು ಅಯೋಧ್ಯೆ ರಾಮ ಮಂದಿರದ ಉದ್ಘಾಟನೆಗೆ ದಿನಗಣನೆ ಆರಂಭವಾಗಿದ್ದು, ಅಯೋಧ್ಯೆ ರಾಮ ಮಂದಿರದ ರಾಮಲಲ್ಲಾ ಮೂರ್ತಿ ಕೆತ್ತನೆ ಕಾರ್ಯ ಪೂರ್ಣಗೊಂಡಿದೆ. ಮೈಸೂರಿನ ಅರುಣ ಯೋಗಿರಾಜ ಅವರು ಅಯೋಧ್ಯೆಯ ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿದ್ದಾರೆ. ದೇಶದ ಮೂವರು ಪ್ರಖ್ಯಾತ ಶಿಲ್ಪಿಗಳಿಗೆ ಕಾಯಕ ದಕ್ಕಿದ್ದು, ಜನವರಿ 22ರಂದು ರಾಮಲಲ್ಲಾ ಮೂರ್ತಿ ಲೋಕಾರ್ಪಣೆಯಾಗಲಿದೆ. ಬೆಂಗಳೂರಿನ … Continued

ಮೈಸೂರು : ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲು

ಮೈಸೂರು : ಒಕ್ಕಲಿಗ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ಮೈಸೂರಿನಲ್ಲಿ ದೂರು ದಾಖಲಾಗಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘವು ಪ್ರೊ.ಕೆ.ಎಸ್.ಭಗವಾನ್ ವಿರುದ್ಧ ದೂರು ದಾಖಲಿಸಿದೆ. ಭಗವಾನ್ ದುರುದ್ದೇಶಪೂರ್ವಕವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಜಾತಿ- ಜಾತಿಗಳ ನಡುವೆ ವೈಷಮ್ಯ ತರುವ ಕೆಲಸ ಮಾಡುತ್ತಿದ್ದಾರೆ ಎಂದು ಒಕ್ಕಲಿಗರ ಸಂಘ ಆರೋಪಿಸಿ … Continued

ನಾಲೆಗೆ ಬಿದ್ದ ಮಗಳನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಮೂವರು ಸಾವು

ಮೈಸೂರು : ಒಂದೇ ಕುಟುಂಬದ ಮೂವರು ನೀರು ಪಾಲಾದ ಘಟನೆ ಮೈಸೂರು ಜಿಲ್ಲೆ ಎಚ್.ಡಿ‌.ಕೋಟೆ ತಾಲೂಕಿನ ಚಂಗೌಡನಹಳ್ಳಿ ಗ್ರಾಮದಲ್ಲಿ ನಡೆದ ವರದಿಯಾಗಿದೆ. ಕೈಕಾಲು ತೊಳೆಯಲು ಹೋದಾಗ ಮಗಳು ಆಕಸ್ಮಿಕವಾಗಿ ಕಾಲು ಜಾರಿ ನಾಲೆಗೆ ಬಿದ್ದ ವೇಳೆ ಅವಳನ್ನು ರಕ್ಷಿಸಲು ಹೋಗಿ ಅಪ್ಪ, ಅಮ್ಮ, ಮಗಳು ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರನ್ನು ಮಹಮ್ಮದ್ ಕಪೀಲ್ (42), … Continued

ಮೈಸೂರು: ಇಬ್ಬರು ಹೆಣ್ಣು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆ

ಮೈಸೂರು: ಮೈಸೂರಿನ ಚಾಮುಂಡಿಪುರಂ ಬಡಾವಣೆಯಲ್ಲಿ ಒಂದೇ ಕುಟುಂಬದ ನಾಲ್ವರ ಶವ ಪತ್ತೆಯಾಗಿದೆ ಎಂದು ವರದಿಯಾಗಿದೆ. ಮೃತರನ್ನು 48 ವರ್ಷದ ಮಹದೇವಸ್ವಾಮಿ, 35 ವರ್ಷದ ಅನಿತಾ, ಪುತ್ರಿಯರಾದ 17 ವರ್ಷದ ಚಂದ್ರಕಲಾ ಮತ್ತು 15 ವರ್ಷದ ಧನಲಕ್ಷ್ಮೀ ಎಂದು ಎಂದು ಹೇಳಲಾಗಿದೆ. ಮೃತ ಮಹದೇವಸ್ವಾಮಿ ಆರ್‌ಎಂಸಿಯಲ್ಲಿ (RMC Yard) ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. … Continued

ತಿ.ನರಸೀಪುರ ಬಳಿ ಅಪಘಾತ : ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ” ಮೈಸೂರು ಜಿಲ್ಲೆಯ ತಿ.ನರಸೀಪುರ ಬಳಿ ಸಂಭವಿಸಿದ ಅಪಘಾತದಲ್ಲಿ 10 ಮಂದಿ … Continued

ಬಿಜೆಪಿ ಶಾಸಕ ರಾಮದಾಸಗೆ ಕೈತಪ್ಪಿದ ಟಿಕೆಟ್; ಮಾತುಕತೆಗೆ ಬಂದಿದ್ದ ಪ್ರತಾಪ ಸಿಂಹ ಬರಿಗೈಲಿ ವಾಪಸ್‌

ಮೈಸೂರು: ಬಿಜೆಪಿಯ ಬಂಡಾಯ ಬಿಸಿ ಮೂರನೇ ಪಟ್ಟಿಗೂ ಮುಂದುವರಿದಿದೆ. ಮೋದಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಹಾಲಿ ಶಾಸಕ ಎಸ್.ಎ. ರಾಮದಾಸ ಅವರಿಗೆ ಕೃಷ್ಣರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿದ್ದು, ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಹಾಲಿ ಶಾಸಕ ರಾಮದಾಸ ಅವರ ಬೆಂಬಲಿಗರು ಸಭೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪಕ್ಷದ ಅನೇಕ ನಾಯಕರು … Continued

ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಆಘಾತ..: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಶಾಸಕ ತನ್ವೀರ್ ಸೇಠ್: ಬೆಂಬಲಿಗನಿಂದ ಆತ್ಮಹತ್ಯೆಗೆ ಯತ್ನ

ಮೈಸೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅನಾರೋಗ್ಯದ ಕಾರಣ ನೀಡಿ ಚುನಾವಣಾ ರಾಜಕೀಯಕ್ಕೆ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರಿಗೆ ತನ್ವೀರ್ ಸೇಠ್ ಪತ್ರ ಬರೆದು ತಮ್ಮ ತೀರ್ಮಾನ ತಿಳಿಸಿದ್ದಾರೆ. ಮೈಸೂರಿನ ಎನ್.ಆರ್ ಕ್ಷೇತ್ರದ ಹಾಲಿ ಶಾಸಕ ತನ್ವೀರ್ ಸೇಠ್ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರದ … Continued

ಸಪ್ತಪದಿ ತುಳಿದ ಕನ್ನಡ ನಟರಾದ ಹರಿಪ್ರಿಯಾ-ವಸಿಷ್ಠ ಸಿಂಹ

ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಸಿಷ್ಠ ಸಿಂಹ (Vasishta Simha) ಹಾಗೂ ಹರಿಪ್ರಿಯಾ (Haripriya) ಅವರು ಸಪ್ತಪದಿ ತುಳಿದಿದ್ದಾರೆ. ವಸಿಷ್ಠ ಸಿಂಹ ಅವರ ಆಶಯದಂತೆ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಅವರು ಸಪ್ತಪದಿ ತುಳಿದಿದ್ದಾರೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಹಲವು ತಿಂಗಳಿಂದ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಕುಟುಂಬದವರ ಒಪ್ಪಿಗೆ ಸಿಕ್ಕಿತು. ಗುರು-ಹಿರಿಯರ ಆಶೀರ್ವಾದದೊಂದಿಗೆ … Continued

ಹುಲಿ ದಾಳಿಗೆ ಕಟ್ಟಿಗೆ ತರಲು ಹೋಗಿದ್ದ ಯುವಕ ಸಾವು

ಮೈಸೂರು : ಜಿಲ್ಲೆಯ ಎಚ್‌.ಡಿ. ಕೋಟೆ ತಾಲೂಕಿನ ಕಾಡಿನಲ್ಲಿ ಕಟ್ಟಿಗೆ ತರಲು ಹೋಗಿದ್ದ ಯುವಕನ ಮೇಲೆ ಹುಲಿಯೊಂದು ದಾಳಿ ಮಾಡಿದ್ದು, ಯುವಕ ಮೃತಪಟ್ಟಿದ್ದಾನೆ. ಈ ದುರ್ಘಟನೆ ಮೈಸೂರು ಜಿಲ್ಲೆಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಬಳಿಯ ಬಳ್ಳೆ ಅರಣ್ಯ ಸಮೀಪದ ನಡೆದಿದೆ. ಹುಲಿ ದಾಳಿಗೆ ಸಿಲುಕಿದ ಮೃತನನ್ನು ಮಂಜು (18 ) ಎಂದು ಗುರುತಿಸಲಾಗಿದೆ. ಸೌದೆ (ಕಟ್ಟಿಗೆ)ಯನ್ನು … Continued