ಮೈಸೂರು | ತಪ್ಪಿಸಿಕೊಳ್ಳಲು ಯತ್ನಿಸಿದ ದರೋಡೆ ಆರೋಪಿ ಕಾಲಿಗೆ ಗುಂಡು

ಮೈಸೂರು : ದರೋಡೆ ಪ್ರಕರಣದಲ್ಲಿ ಸ್ಥಳ ಮಹಜರಿಗೆ ಕರೆದೊಯ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕೇರಳ ಮೂಲದ ಆರೋಪಿ ಆದರ್ಶ ಎಂಬಾತ ಗುಂಡೇಟಿನಿಂದ ಗಾಯಗೊಂಡ ದರೋಡೆಕೋರ. ಈತನನ್ನು ಮೇಟಗಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಸಬ್‌ಇನ್‌ಸ್ಪೆಕ್ಟರ್‌ ಪ್ರಕಾಶ ಹಾಗೂ ಸಿಬ್ಬಂದಿ ಹರೀಶ ಅವರು … Continued

ತಿ.ನರಸೀಪುರ : ಇಬ್ಬರು ಮೊಮ್ಮಕ್ಕಳು- ಅಜ್ಜ ನೀರು ಪಾಲು

ಮೈಸೂರು: ಕಾವೇರಿ ನದಿಯಲ್ಲಿ ಇಬ್ಬರು ಮೊಮ್ಮಕ್ಕಳು ಮತ್ತು ಅಜ್ಜ ನೀರು ಪಾಲಾದ ಘೋರ ದುರಂತ ಮೈಸೂರಿನ ಜಿಲ್ಲೆಯ ತಿ.ನರಸೀಪುರ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ನದಿ ನೀರಿನಲ್ಲಿ ಮುಳುಗುತ್ತಿದ್ದ ಮೊಮ್ಮಕ್ಕಳ ರಕ್ಷಣೆಗೆ ಅಜ್ಜ ಚೌಡಯ್ಯ ಇಳಿದಿದ್ದರು. ಆದರೆ ಇಬ್ಬರು ಮೊಮ್ಮಕ್ಕಳ ಜೊತೆಗೆ ಚೌಡಯ್ಯ ಕೂಡ ನೀರುಪಾಲಾಗಿದ್ದಾರೆ ಎನ್ನಲಾಗಿದೆ. ಮೃತರನ್ನು ತಿರುಮಕೂಡಲಿನ ನಿವಾಸಿಗಳಾದ ಚೌಡಯ್ಯ (70) … Continued

ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಮೌಲ್ವಿ ಬಂಧನ

ಮೈಸೂರು: ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣ ಮಾಡಿದ್ದ ಆರೋಪ ಹೊತ್ತಿರುವ ಮೌಲ್ವಿಯನ್ನು ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಘಟನೆ ನಡೆದು 11 ದಿನಗಳ ಬಳಿಕ  ಪೊಲೀಸರು ಆರೋಪಿ ಮುಫ್ತಿ ಮುಸ್ತಾಕ್ ಅವರನ್ನು ಬಂಧಿಸಿದ್ದಾರೆ. ಘಟನೆ ಬಳಿಕ ಮೌಲ್ವಿಯ ಭಾಷಣದ ವೀಡಿಯೊವೊಂದು ವೈರಲ್ ಆಗಿತ್ತು. ಗಲಭೆಗೆ … Continued

ಮೈಸೂರು| ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ

ಮೈಸೂರು: ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​ನಲ್ಲಿ ಒಂದೇ ಕುಟುಂಬದ ನಾಲ್ವರು ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಚೇತನ (45), ಇವರ ಪತ್ನಿ ರೂಪಾಲಿ (43), ತಾಯಿ ಪ್ರಿಯಂವಧ (62) ಮತ್ತು ಮಗ ಕುಶಾಲ್ (15) ಎಂದು ಹೇಳಲಾಗಿದೆ. ಚೇತನ್‌ ಎಂಬವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು ಮನೆಯವರಿಗೆ ವಿಷ ನೀಡಿ ಸಾಯಿಸಿ ನಂತರ ತಾನು … Continued

ವೈದ್ಯೆ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡ ಸಿನೆಮಾ ನಟ ಡಾಲಿ ಧನಂಜಯ

ಮೈಸೂರು : ಕನ್ನಡ ಸಿನೆಮಾ ನಟ ಡಾಲಿ ಧನಂಜಯ ಮತ್ತು ವೈದ್ಯೆ​ ಧನ್ಯತಾ ಭಾನುವಾರ ಸಪ್ತಪದಿ ತುಳಿದಿದ್ದಾರೆ. ಭಾನುವಾರ ಬೆಳಿಗ್ಗೆ 9:10 ರಿಂದ 10:10ರ ವರೆಗಿನ, ಸಂಕಷ್ಟ ಚತುರ್ದರ್ಶಿಯ ಶುಭ ಲಗ್ನದಲ್ಲಿ ಅವರು ವಿವಾಹವಾಗಿದ್ದಾರೆ. ಮೈಸೂರಿನ ವಸ್ತು ಪ್ರದರ್ಶನ ಮೈದಾನದಲ್ಲಿ ನಡೆದ ಅದ್ದೂರಿ ಮದುವೆ ಸಮಾರಂಭದಲ್ಲಿ ಡಾಲಿ ಧನಂಜಯ ಹಾಗೂ ಧನ್ಯತಾ ಇಬ್ಬರು ದಾಂಪತ್ಯ ಜೀವನಕ್ಕೆ … Continued

ಮೈಸೂರು | ಅವಹೇಳನಕಾರಿ ಪೋಸ್ಟ್ : ಪೊಲೀಸ್‌ ಠಾಣೆ ಮೇಲೆ ಕಲ್ಲು ತೂರಾಟ ; ಲಾಠಿ ಚಾರ್ಜ್

ಮೈಸೂರು: ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಡಿದ ಅವಹೇಳನಕಾರಿ ಪೋಸ್ಟ್‌ ಮೈಸೂರಿನಲ್ಲಿ ಕೋಮು ಉದ್ವಿಗ್ನತೆ (Communal tension)ಗೆ ಕಾರಣವಾಗಿದೆ. ಒಂದು ಸಮುದಾಯದ ನೂರಾರು ಯುವಕರು ಪೊಲೀಸ್ ಠಾಣೆ ಹಾಗೂ ಡಿಸಿಪಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಮೈಸೂರಿನ ಕಲ್ಯಾಣಿಗಿರಿ ನಿವಾಸಿ ಸುರೇಶ ಎಂಬವರನ್ನು ಅವಹೇಳನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಈ ಪೋಸ್ಟ್‌ ಅನ್ನು … Continued

ಮೈಸೂರು | ಹಾಡಹಗಲೇ ಕಾರು ಅಡ್ಡಗಟ್ಟಿ ಉದ್ಯಮಿಯ ದರೋಡೆ ಮಾಡಿದ ದುಷ್ಕರ್ಮಿಗಳು ; ಕಾರು, ಹಣ ಸಮೇತ ಪರಾರಿ

ಮೈಸೂರು: ಮೈಸೂರು (Mysuru) ಜಿಲ್ಲೆಯಲ್ಲಿ ದುಷ್ಕರ್ಮಿಗಳು ಉದ್ಯಮಿಯೊಬ್ಬರ ಕಾರನ್ನು ಹಾಡಹಗಲೇ ಅಡ್ಡಗಟ್ಟಿ ದರೋಡೆ (Robbery ) ಮಾಡಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾದ ಘಟನೆ ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ. ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ಮಧ್ಯೆಯೇ ಈ … Continued

ಮುಡಾ ಹಗರಣ: 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇ.ಡಿ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನಗಳ ಅಕ್ರಮ ಹಂಚಿಕೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಸುಮಾರು 300 ಕೋಟಿ ರೂ. ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡಿದೆ. ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್ಎ) ಕಾಯ್ದೆಯಡಿ ಈ ಕ್ರಮ ಕೈಕೊಳ್ಳಲಾಗಿದೆ ಎಂದು ಇ.ಡಿ. (ED) ಟ್ವೀಟ್ … Continued

ಆಶಾ ಕಾರ್ಯಕರ್ತರಿಗೆ ತಿಂಗಳಿಗೆ 10 ಸಾವಿರ ರೂ. ನೀಡಲು ಸರ್ಕಾರದ ನಿರ್ಧಾರ; ಸಿದ್ದರಾಮಯ್ಯ

ಬೆಂಗಳೂರು/ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಶುಕ್ರವಾರ ನಡೆದ ಆಶಾ ಕಾರ್ಯಕರ್ತೆಯರ ಮಾತುಕತೆ ಫಲಪ್ರದವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವ ಧನವನ್ನು ಏಪ್ರಿಲ್ 1ರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ.ಗಳು ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು … Continued

ಮುಡಾ ಪ್ರಕರಣದಲ್ಲಿ ದೂರು ಹಿಂಪಡೆಯಲು ಹಣದ ಆಮಿಷ : ಮತ್ತೊಂದು ಗಂಭೀರ ಆರೋಪ ಮಾಡಿದ ಸ್ನೇಹಮಯಿ ಕೃಷ್ಣ

ಮೈಸೂರು : ‘ಮುಡಾ ನಿವೇಶನಗಳ ಹಂಚಿಕೆ ಪ್ರಕರಣವನ್ನು ಸಿಬಿಐ‌ ತನಿಖೆಗೆ ಕೋರಿ ನ್ಯಾಯಾಲಯದಲ್ಲಿ ನಾನು ಸಲ್ಲಿಸಿರುವ ಅರ್ಜಿ ಹಿಂಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಕಡೆಯವರು ಎಂದು ಹೇಳಿಕೊಂಡ ಇಬ್ಬರು ನನಗೆ ಹಾಗೂ ನನ್ನ ಕುಟುಂಬಕ್ಕೆ ಹಣದ ಆಮಿಷ ಒಡ್ಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ … Continued