ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಮುಡಾ ಹಗರಣ: ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಹಗರಣಗಳ ಸಂಬಂಧ ಮುಡಾದ ಮಾಜಿ ಆಯುಕ್ತರು ಹಾಗೂ ಅಧಿಕಾರಗಳನ್ನ ತನಿಖೆಗೆ ಒಳಪಡಿಸಬೇಕು ಎಂದು ಕೋರಿ ಮೈಸೂರು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ. ಮುಡಾ ಆಯುಕ್ತರಾಗಿ ಈ ಹಿಂದೆ ಕೆಲಸ ಮಾಡಿದ ದಿನೇಶಕುಮಾರ, ನಟೇಶ ಹಾಗೂ ಭೂಸ್ವಾಧೀನಾಧಿಕಾರಿ, ನಗರ ಯೋಜನಾ ಅಧಿಕಾರಿ … Continued

ನಕಲಿ ಸಹಿ ಆರೋಪ ; ಸಿಎಂ ಸಿದ್ದರಾಮಯ್ಯ ಪತ್ನಿ ವಿರುದ್ಧ ದೂರು ದಾಖಲು

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ನಕಲಿ ಸಹಿ ವಿಚಾರವಾಗಿ ಸಿದ್ದರಾಮಯ್ಯ ಅವರ ಪತ್ನಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಬುಧವಾರ … Continued

ಜೈಲಿನಲ್ಲಿ ರಾಜಾತಿಥ್ಯಕ್ಕೆ ಬಿತ್ತು ಬ್ರೇಕ್​; ಆರೋಪಿ ದರ್ಶನ್​ ಬಳ್ಳಾರಿಗೆ ಸ್ಥಳಾಂತರ, ಉಳಿದವರು ಬೇರೆ ಬೇರೆ ಜೈಲಿಗೆ ಶಿಫ್ಟ್..

ಬೆಂಗಳೂರು : ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ನ್ಯಾಯಾಲಯ ಅನುಮತಿ ನೀಡಿದೆ. ಅಲ್ಲದೆ, ಕೊಲೆ ಪ್ರಕರಣದ ಎಲ್ಲಾ ಆರೋಪಿಗಳನ್ನು ರಾಜ್ಯದ ಇತರ ಜಿಲ್ಲಾ ನ್ಯಾಯಾಲಯಗಳಿಗೆ ಸ್ಥಳಾಂತರಿಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ. ಆರೋಪಿ ದರ್ಶನ್​ … Continued

ಕೆಂಪಣ್ಣ ವರದಿ ಬಿಡುಗಡೆಯಾದರೆ ಸಿಎಂ ಸಿದ್ದರಾಮಯ್ಯ ಪಂಚೆ- ಶರ್ಟಿಗೆ ಮಸಿ ಆಗುವುದು ಗ್ಯಾರಂಟಿ ; ಹೆಚ್.ವಿಶ್ವನಾಥ

ಮೈಸೂರು : ʼರೀ ಡೂʼ ವಿಚಾರದಲ್ಲಿ ಕೆಂಪಣ್ಣ ಆಯೋಗದ ವರದಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ ಕೆಂಪಣ್ಣ ವರದಿ ಬಿಡುಗಡೆಯಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಂಚೆ, ಶರ್ಟು ಎಲ್ಲವಕ್ಕೂ ಮಸಿ ಮೆತ್ತುವುದು ಗ್ಯಾರಂಟಿ ಎಂದು ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮುಡಾ ಹಗರಣದ ಬಗ್ಗೆ ಮಾತನಾಡಿದ ಅವರು, ರೀಡು ವಿಚಾರದಲ್ಲಿ ಕೆಂಪಣ್ಣ … Continued

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತಿದ್ದ ಶಿಲ್ಪಿ ಅರುಣ ಯೋಗಿರಾಜ​ಗೆ ಅಮೆರಿಕ ವೀಸಾ ನಿರಾಕರಣೆ

ಮೈಸೂರು: ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಲಾಗಿರುವ ಬಾಲರಾಮ (ರಾಮಲಲ್ಲಾ)ನ ಮೂರ್ತಿ ಕೆತ್ತನೆ ಮಾಡಿದ್ದ ಮೈಸೂರಿನ ಶಿಲ್ಪಿ ಅರುಣ ಯೋಗಿರಾಜ ಅವರಿಗೆ ಅಮೆರಿಕ ವೀಸಾ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ. ಅಮೆರಿಕದದಲ್ಲಿ ಆಯೋಜಿಸಲಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ಸನ್ಮಾನಿಸಲು ಅವರಿಗೆ ಆಯೋಜಕರಿಂದ ಆಹ್ವಾನ ಬಂದಿತ್ತು. ಹೀಗಾಗಿ 20 ದಿನಗಳ ಪ್ರವಾಸಕ್ಕಾಗಿ ಅರುಣ ಯೋಗಿರಾಜ ಕುಟುಂಬ ಸಹಿತ ಅಮೆರಿಕಕ್ಕೆ ತೆರಳಲು ಎರಡು … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ ಕೋರ್ಟಿನಲ್ಲಿ ಖಾಸಗಿ ದೂರು ದಾಖಲು

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಲಾಗಿದೆ. ಶಾಸಕರು ಸಂಸದರ ವಿರುದ್ಧ ಕ್ರಿಮಿನಲ್‌ ವಿಚಾರಣೆಯ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಮೈಸೂರಿನ ಆರ್‌ಟಿಐ ಕಾರ್ಯಕರ್ತ ಸ್ನೇಯಮಯಿ ಕೃಷ್ಣ ಎಂಬುವವರು ದೂರು ದಾಖಲಿಸಿದ್ದಾರೆ. ದೂರನ್ನು ಸ್ವೀಕರಿಸಿದ ನ್ಯಾಯಾಧೀಶರಾದ ಸಂತೋಷ ಗಜಾನನ ಭಟ್‌ ಅವರು ದಾಖಲೆಗಳ ಪರಿಶೀಲನೆಗೆ ಒಪ್ಪಿಸಿದ್ದಾರೆ. … Continued

ಮುಡಾ ಹಗರಣ: ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ, ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಏಕಸದಸ್ಯ ಆಯೋಗ ರಚನೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಸಂಬಂಧ ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ನೇತೃತ್ವದ ಏಕಸದಸ್ಯ ಆಯೋಗ ರಚನೆ ಮಾಡಿದೆ. ಮುಡಾ ಸೈಟ್​ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧವೇ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಮುಡಾ ಅಕ್ರಮ ನಿವೇಶನ … Continued

ಮುಡಾ ಹಗರಣ ಬಯಲು ಬೆನ್ನಲ್ಲೇ ಮೈಸೂರು ಜಿಲ್ಲಾಧಿಕಾರಿ ವರ್ಗಾವಣೆ..!

ಮೈಸೂರು: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮಾಡಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಹಗರಣ ಬೆಳಕಿಗೆ ತಂದವರು ಎಂದು ಹೇಳಲಾದ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ದಿಢೀರನೇ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 21 ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಆರೋಪಿಗಳು 6 ದಿನ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು : ಬೆಂಗಳೂರಿನಲ್ಲಿ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಅವರ ಗೆಳತಿ ಪವಿತ್ರ ಗೌಡ ಸೇರಿ 13 ಜನರನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಂಗಳವಾರ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಿದೆ. ಎಲ್ಲಾ ಆರೋಪಿಗಳನ್ನು ಕಾಮಾಕ್ಷಿ ಪಾಳ್ಯ ಠಾಣೆಯ ಪೊಲೀಸರು ಬೆಂಗಳೂರಿನ 24ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ … Continued