ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ : ಕಾಂಗ್ರೆಸ್‌ ಅಧ್ಯಕ್ಷ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ‘ಭಯೋತ್ಪಾದಕ’ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಂಗಳವಾರ ಚುನಾವಣಾ ಆಯೋಗಕ್ಕೆ (EC) ದೂರು ನೀಡಿದೆ. ಖರ್ಗೆ ಅವರು ತಮ್ಮ ಹೇಳಿಕೆಗೆ ಬಹಿರಂಗ ಕ್ಷಮೆಯಾಚಿಸುವಂತೆ ನಿರ್ದೇಶನ ನೀಡಬೇಕು ಎಂದು ಬಿಜೆಪಿ … Continued

ವಿಡಿಯೊ..| ಪ್ರಧಾನಿ ಮೋದಿ ಒಬ್ಬ ‘ಭಯೋತ್ಪಾದಕ’ : ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ನಂತರ ಸ್ಪಷ್ಟೀಕರಣ

ಚೆನ್ನೈ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ತಮಿಳುನಾಡು ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಎಐಎಡಿಎಂಕೆಯನ್ನು (AIADMK) ಪ್ರಶ್ನಿಸುವ ಸಂದರ್ಭದಲ್ಲಿ ಖರ್ಗೆ ಈ ಹೇಳಿಕೆ ನೀಡಿದ್ದಾರೆ. “ಅಣ್ಣಾದೊರೈ ಅವರ ಫೋಟೋ ಹಾಕಿಕೊಳ್ಳುವ ಎಐಎಡಿಎಂಕೆ … Continued

ಪಶ್ಚಿಮ ಏಷ್ಯಾ ಸಂಘರ್ಷ : ನಾಳೆ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ

ನವದೆಹಲಿ: ಪಶ್ಚಿಮ ಏಷ್ಯಾದ ಸಂಘರ್ಷವು ನಾಲ್ಕನೇ ವಾರಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ, ದೇಶದ ಸಿದ್ಧತೆ ಮತ್ತು ಯೋಜನೆಗಳ ಕುರಿತು ಪರಾಮರ್ಶಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.  ‘ಟೀಮ್ ಇಂಡಿಯಾ’ ಭಾವನೆಯೊಂದಿಗೆ ಎಲ್ಲರ ಪ್ರಯತ್ನಗಳನ್ನು ಸಂಯೋಜಿಸುವತ್ತ ಈ ಸಭೆಯು ಗಮನಹರಿಸಲಿದೆ. ಆದಾಗ್ಯೂ, … Continued

ಅತಿ ಸುದೀರ್ಘ ಕಾಲ ಸರ್ಕಾರ ಮುನ್ನಡೆಸಿದ ಭಾರತದ ಮೊದಲ ನಾಯಕರಾದ ಪ್ರಧಾನಿ ಮೋದಿ…!

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು … Continued

ಇನ್‌ಸ್ಟಾಗ್ರಾಂನಲ್ಲಿ 10 ಕೋಟಿ ಫಾಲೋವರ್ಸ್ ದಾಟಿದ ವಿಶ್ವದ ಮೊದಲ ರಾಜಕಾರಣಿಯಾದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ಜನಪ್ರಿಯ ಫೋಟೋ ಹಂಚಿಕೆ ಅಪ್ಲಿಕೇಶನ್ ಆದ ಇನ್‌ಸ್ಟಾಗ್ರಾಮ್‌ನಲ್ಲಿ (Instagram) 10 ಕೋಟಿ ((100 ಮಿಲಿಯನ್) ಅನುಯಾಯಿಗಳ (Followers) ಐತಿಹಾಸಿಕ ಮೈಲಿಗಲ್ಲನ್ನು ದಾಟಿದ ವಿಶ್ವದ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2014 ರಲ್ಲಿ ಮೆಟಾ ಮಾಲೀಕತ್ವದ ಈ ಅಪ್ಲಿಕೇಶನ್‌ಗೆ ಸೇರಿದ ಪ್ರಧಾನಿಯವರು, ಪ್ರಸ್ತುತ 1,205 ಪೋಸ್ಟ್‌ಗಳನ್ನು … Continued

ಕೇರಳ ಇನ್ಮುಂದೆ ‘ಕೇರಳಂ’: ಹೆಸರು ಬದಲಾವಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ: ಒಂದು ಮಹತ್ವದ ಬೆಳವಣಿಗೆಯಲ್ಲಿ, ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ‘ಕೇರಳಂ’ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟವು ಮಂಗಳವಾರ ಒಪ್ಪಿಗೆ ನೀಡಿದೆ. ನೂತನವಾಗಿ ಉದ್ಘಾಟನೆಗೊಂಡ ಪ್ರಧಾನ ಮಂತ್ರಿ ಕಾರ್ಯಾಲಯದ (PMO) ಕಟ್ಟಡವಾದ ‘ಸೇವಾ ತೀರ್ಥ’ದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಈ ಅನುಮೋದನೆ ಲಭಿಸಿರುವುದು ವಿಶೇಷ. “ಕೇರಳವನ್ನು ‘ಕೇರಳಂ’ … Continued

ಕೆನಡಾ ಪ್ರಧಾನಿ ಮಾರ್ಕ್ ಕಾರ್ನೆ ಭಾರತ ಭೇಟಿ

ಒಟ್ಟಾವಾ (ಕೆನಡಾ) : ಕೆನಡಾದ ಪ್ರಧಾನಿ ಮಾರ್ಕ್ ಕಾರ್ನೆ ಅವರು ಫೆಬ್ರವರಿ 26 ರಿಂದ ಮಾರ್ಚ್ 7ರ ವರೆಗೆ ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸೋಮವಾರ ಅವರ ಕಚೇರಿ ಅಧಿಕೃತವಾಗಿ ತಿಳಿಸಿದೆ. ಜಸ್ಟಿನ್ ಟ್ರುಡೊ ನಂತರ ಅಧಿಕಾರ ವಹಿಸಿಕೊಂಡ ಮಾರ್ಕ್ ಕಾರ್ನೆ ಅವರ ಮೊದಲ ಭಾರತ ಭೇಟಿ ಇದಾಗಿದೆ. ಕಾರ್ನೆ ಅವರು … Continued

ಪ್ರಧಾನ ಮಂತ್ರಿ ನೂತನ ಕಾರ್ಯಾಲಯ ‘ಸೇವಾ ತೀರ್ಥ’ ಸಂಕೀರ್ಣ ಅನಾವರಣಗೊಳಿಸಿದ ಪ್ರಧಾನಿ ಮೋದಿ

ನವದೆಹಲಿ: ಭಾರತದ ಆಡಳಿತಾತ್ಮಕ ಆಡಳಿತ ಶೈಲಿಯಲ್ಲಿ ಕ್ರಾಂತಿಕಾರಿ ಬದಲಾವಣೆ ತರುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಪ್ರಧಾನ ಮಂತ್ರಿಗಳ ಕಾರ್ಯಾಲಯದ ನೂತನ ಸಂಕೀರ್ಣ ‘ಸೇವಾ ತೀರ್ಥ’ ಹಾಗೂ ‘ಕರ್ತವ್ಯ ಭವನ 1 ಮತ್ತು 2’ ಅನ್ನು ಉದ್ಘಾಟಿಸಿದರು. ದಶಕಗಳ ಕಾಲ ರಾಷ್ಟ್ರಪತಿ ಭವನದ ಬಳಿ ಸೌತ್ ಬ್ಲಾಕ್ ನಲ್ಲಿದ್ದ ಪ್ರಧಾನ ಮಂತ್ರಿ ಕಚೇರಿಯನ್ನು … Continued

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಚೀನಾ, ಪಾಕಿಸ್ತಾನ, ಬಾಂಗ್ಲಾದೇಶಕ್ಕಿಂತ ಭಾರತಕ್ಕೆ ಹೇಗೆ ಅನುಕೂಲ..?

ನವದೆಹಲಿ: ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಲಾಗಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಕಟಿಸಿದ್ದಾರೆ. ಇದರ ಅಡಿಯಲ್ಲಿ ಅಮೆರಿಕವು ಭಾರತೀಯ ಸರಕುಗಳ ಮೇಲಿನ ಪರಸ್ಪರ ಸುಂಕವನ್ನು ಪ್ರಸ್ತುತ ಶೇಕಡಾ 25 ರಿಂದ ಶೇಕಡಾ 18 ಕ್ಕೆ ಇಳಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ದೂರವಾಣಿ ಕರೆಯ ನಂತರ ಅಮೆರಿಕದ ಅಧ್ಯಕ್ಷರು ಸಾಮಾಜಿಕ … Continued