ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇ.ಡಿ. ಮುಂದೆ ಡಿ.ಕೆ. ಶಿವಕುಮಾರ ಹಾಜರು

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಸೂಚಿಸಿದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ದೆಹಲಿ ತಲುಪಿದ್ದಾರೆ. ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ದೆಹಲಿಗೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಫೆಡರಲ್ ಸಂಸ್ಥೆ ತನ್ನ ಮನವಿಯನ್ನು ತಿರಸ್ಕರಿಸಿದ್ದರಿಂದ ಇಡಿ ಮುಂದೆ ಹಾಜರಾಗಲು ಭಾರತ್ ಜೋಡೋ ಯಾತ್ರೆಯನ್ನು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಅಕ್ಟೋಬರ್ 7ರಂದು ಹಾಜರಾಗುವುದಕ್ಕೆ ವಿನಾಯಿತಿ ಕೋರಿದ್ದ ಡಿ.ಕೆ. ಶಿವಕುಮಾರ ಮನವಿ ತಿರಸ್ಕರಿಸಿದ ಇ.ಡಿ.

ಮೈಸೂರು: ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅಕ್ಟೋಬರ್ 7 ರಂದು ದೆಹಲಿಯಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ.) ಮುಂದೆ ಹಾಜರಾಗುವುದರಿಂದ ವಿನಾಯಿತಿ ನೀಡುವಂತೆ ಮಾಡಿದ ಮನವಿಯನ್ನು ಜಾರಿ ನಿರ್ದೇಶನಾಲಯ ತಿರಸ್ಕರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರಗುರುವಾರ ಹೇಳಿದ್ದಾರೆ. ತಮ್ಮ ಪಕ್ಷದ ನಾಯಕರ ಜೊತೆ ಮಾತನಾಡಿದ ನಂತರ ಇ.ಡಿ. ಮುಂದೆ ಹಾಜರಾಗಬೇಕೇ ಅಥವಾ ಬೇಡವೇ … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ, ಸಂಸದ ಡಿಕೆ ಸುರೇಶಗೆ ಇಡಿ ಸಮನ್ಸ್

ಬೆಂಗಳೂರು: ಯಂಗ್ ಇಂಡಿಯನ್ ಲಿಮಿಟೆಡ್ ಮತ್ತು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಡಿ ಕೆ ಶಿವಕುಮಾರ ಮತ್ತು ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದ್ದು, ಇಬ್ಬರೂ ಅಕ್ಟೋಬರ್ 7 ರಂದು ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಅದು ಸೂಚಿಸಿದೆ. ಮೈಸೂರು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ದೆಹಲಿ ಹೆರಾಲ್ಡ್ ಹೌಸ್ ಕಟ್ಟಡದಲ್ಲಿರುವ ಯಂಗ್ ಇಂಡಿಯನ್ ಕಚೇರಿ ಸೀಲ್ ಮಾಡಿದ ಇ.ಡಿ

ನವದೆಹಲಿ: ಜಾರಿ ನಿರ್ದೇಶನಾಲಯವು ಬುಧವಾರ ಕಾಂಗ್ರೆಸ್ ಪಕ್ಷದ ನೇತೃತ್ವದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಕಚೇರಿಯಲ್ಲಿರುವ ಯಂಗ್ ಇಂಡಿಯನ್ (ವೈಐ) ಆವರಣವನ್ನು ಸೀಲ್ ಮಾಡಿದೆ ಮತ್ತು ಇ.ಡಿಯಿಂದ ಪೂರ್ವಾನುಮತಿ ಇಲ್ಲದೆ ಪ್ರದೇಶವನ್ನು ಮುಕ್ತ ಮಾಡದಂತೆ ಆದೇಶಿಸಿದೆ. ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯ ಹೊರಗೆ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ. ಮಂಗಳವಾರ ನಡೆದ ದಾಳಿಯ ವೇಳೆ ಅಧಿಕೃತ ಪ್ರತಿನಿಧಿಗಳು … Continued

6 ಗಂಟೆಗಳ ಕಾಲ ಸೋನಿಯಾ ಗಾಂಧಿ ವಿಚಾರಣೆ ನಡೆಸಿದ ಇ.ಡಿ: ನಾಳೆ ಮತ್ತೆ ಹಾಜರಾಗುವಂತೆ ಸಮನ್ಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ ಇಂದು, ಮಂಗಳವಾರ ಆರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ. 3ನೇ ಸುತ್ತಿನ ವಿಚಾರಣೆಗಾಗಿ ಹಾಜರಾಗುವಂತೆ ಅವರಿಗೆ ನಾಳೆ, ಬುಧವಾರ ಮತ್ತೆ ಸಮನ್ಸ್ ನೀಡಲಾಗಿದೆ. ಸೋನಿಯಾ ಗಾಂಧಿ ಅವರು, ಇಂದು ಮಂಗಳವಾರ ಬೆಳಗ್ಗೆ 11 … Continued

ನ್ಯಾಶನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ವಿಚಾರಣೆಗೆ ಹಾಜರಾದ ಸೋನಿಯಾ ಗಾಂಧಿ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮಧ್ಯಾಹ್ನದ ನಂತರ ಜಾರಿ ನಿರ್ದೇಶನಾಲಯದ ಕಚೇರಿಗೆ ಸೋನಿಯಾ ಗಾಂಧಿ ಅವರು ತಮ್ಮ ಮಕ್ಕಳೊಂದಿಗೆ ಆಗಮಿಸಿದರು. ಸೋನಿಯಾ ಗಾಂಧಿಯವರು ತಮ್ಮ Z+ ವರ್ಗದ CRPF ಭದ್ರತೆಯೊಂದಿಗೆ ಆಗಮಿಸಿದರು. ಇತ್ತೀಚೆಗೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಸೋನಿಯಾ ಗಾಂಧಿ ಅವರು ಮಾಸ್ಕ್ ಧರಿಸಿ ಆಗಮಿಸಿದ್ದರು ಮತ್ತು … Continued

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ ಕೊನೆಯಲ್ಲಿ ಹೇಳಿಕೆ ದಾಖಲಿಸಲು ಸೋನಿಯಾ ಗಾಂಧಿಗೆ ಸೂಚಿಸಿದ ಇ.ಡಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪುರಸ್ಕರಿಸಿದೆ. ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಅವರಿಗೆ ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಲು … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:ಸೋನಿಯಾ, ರಾಹುಲ್‌ಗೆ ಪ್ರತಿಕ್ರಿಯೆ ದಾಖಲಿಸಲು ಇನ್ನಷ್ಟು ಕಾಲಾವಕಾಶ ನೀಡಿದ ಹೈಕೋರ್ಟ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳಿಗೆ ಪ್ರತಿಕ್ರಿಯೆ ದಾಖಲಿಸಲು ದೆಹಲಿ ಉಚ್ಚ ನ್ಯಾಯಾಲಯ ಇನ್ನಷ್ಟು ಕಾಲಾವಕಾಶ ನೀಡಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ಸ್ವಾಮಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ನ್ಯಾಯಮೂರ್ತಿ ಸುರೇಶಕುಮಾರ ಅವರು ಪ್ರಕರಣದ ವಿಚಾರಣೆಯನ್ನು ಮೇ ೧೮ರಂದು ನಿಗದಿಪಡಿಸಿದರು. ಹಿರಿಯ … Continued