ಛತ್ತೀಸಗಢ | ಪ್ರಧಾನಿ ಮೋದಿ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಶರಣಾದ 50 ನಕ್ಸಲೀಯರು

ರಾಯ್ಪುರ : ಛತ್ತೀಸ್‌ಗಢದ ಬಿಲಾಸಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಮುನ್ನ 50 ಮಾವೋವಾದಿಗಳು ಶರಣಾಗಿದ್ದಾರೆ, ಇದು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿರುವ ನಕ್ಸಲ್ ವಿರೋಧಿ ಕಾರ್ಯಾಚರಣೆ ಮತ್ತು ಮನೆಗೆ ಹಿಂತಿರುಗಿ ಅಭಿಯಾನಕ್ಕೆ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯದಲ್ಲಿ 33,700 ಕೋಟಿ ರೂ.ಗೂ ಹೆಚ್ಚು ಮೊತ್ತದ … Continued

ಛತ್ತೀಸ​ಗಢದಲ್ಲಿ ಎರಡು ಪ್ರತ್ಯೇಕ ಎನ್​ಕೌಂಟರ್​ ; 22 ನಕ್ಸಲರ ಹತ್ಯೆ

ರಾಯ್ಪುರ:  ಎಡಪಂಥೀಯ ಉಗ್ರವಾದದ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಗುರುವಾರ (ಮಾರ್ಚ್ 20) ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 26 ನಕ್ಸಲರನ್ನು ಕೊಂದಿವೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ 18 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಜವಾನ ಕೂಡ … Continued

ಎನ್‌ ಕೌಂಟರ್‌ನಲ್ಲಿ 31 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲೀಯರೊಂದಿಗಿನ ಎನ್‌ಕೌಂಟರ್‌ನಲ್ಲಿ 31 ನಕ್ಸಲೀಯರು ಹತರಾಗಿದ್ದಾರೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಹತ್ಯೆಯಾದ ಇಬ್ಬರು ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ರಾಜ್ಯ ಪೊಲೀಸ್‌ನ ಜಿಲ್ಲಾ ಮೀಸಲು ಗಾರ್ಡ್‌ಗೆ ಸೇರಿದವರು ಮತ್ತು ಇನ್ನೊಬ್ಬರು ವಿಶೇಷ ಕಾರ್ಯಪಡೆಗೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. … Continued

ಎನ್‌ಕೌಂಟರ್‌ನಲ್ಲಿ 6 ಮಾವೋವಾದಿಗಳ ಹತ್ಯೆ

ಭದ್ರಾದ್ರಿ ಕೊತಗುಡೆಂ (ತೆಲಂಗಾಣ): ಕರಕಗೂಡು ಮಂಡಲದ ರಘುನಾಥಪಾಲೆಂ ಸಮೀಪದ ಅರಣ್ಯ ಪ್ರದೇಶದಲ್ಲಿ ಗುರುವಾರ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಾವೋವಾದಿಗಳು ಸಾವಿಗೀಡಾಗಿದ್ದಾರೆ. ಮಾವೋವಾದಿ ಪೀಡಿತ ಪ್ರದೇಶದಲ್ಲಿ ಪೊಲೀಸರು ನಡೆಸಿದ ಕೂಂಬಿಂಗ್ ಕಾರ್ಯಾಚರಣೆ ವೇಳೆ ಈ ಘಟನೆ ನಡೆದಿದೆ. ತೆಲಂಗಾಣ ಪೊಲೀಸರ ಗಣ್ಯ ನಕ್ಸಲ್ ವಿರೋಧಿ ಪಡೆಯ … Continued